ಇತ್ತೀಚಿನ ಸುದ್ದಿ
ಚಿಕ್ಕಮಗಳೂರು: ಕೈ ತೊರೆದು ಕಮಲ ಹಿಡಿದ ಕಾರ್ಯಕರ್ತನ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು
01/02/2023, 21:34

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಿದ ಘಟನೆ ಎನ್.ಆರ್. ಪುರ ತಾಲೂಕಿನ ನಾಗಲಾಪುರ ಸಮೀಪದ ರಾವೂರು ಗ್ರಾಮದ ಬಳಿ ನಡೆದಿದೆ.
ಶಿವು ಎಂಬವರ ಮನೆಗೆ ನುಗ್ಗಿ ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ. ಕಾಂಗ್ರೆಸ್ ಶಾಸಕ ಟಿ.ಡಿ.ರಾಜೇಗೌಡ ಹಿಂಬಾಲಕರಿಂದ ಹಲ್ಲೆ ನಡೆದಿದೆ ಎಂದು ಆರೋಪಿಸಲಾಗಿದೆ.
ಮಾರಣಾಂತಿಕವಾಗಿ ಗಾಯಗೊಂಡ ಶಿವು ಎನ್. ಆರ್. ಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಳೆದ ತಿಂಗಳು ಕಾಂಗ್ರೆಸ್ ತೊರೆದು ಶಿವು ಅವರು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದರು. ಬಿಜೆಪಿ ಸೇರಿದ ವಿಚಾರವಾಗಿ ಶಿವು ಜೊತೆ ಶಾಸಕರ ಹಿಂಬಾಲಕರು ಗಲಾಟೆ ನಡೆಸಿದ್ದರು. ನಾಲ್ವರು ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಎನ್. ಆರ್. ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.