11:27 AM Sunday19 - May 2024
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ: ಮೇ 20ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನ ನಟಿ ಪವಿತ್ರಾ ಜಯರಾಂ ಸ್ನೇಹಿತ ಚಂದ್ರಕಾಂತ್ ಆತ್ಮಹತ್ಯೆ: ಸ್ನೇಹಿತೆ ಸಾವನ್ನಪ್ಪಿ ವಾರದೊಳಗೆ ಚಂದ್ರು… ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ…

ಇತ್ತೀಚಿನ ಸುದ್ದಿ

ಬಸವೇಶ್ವರ ಏತ ನೀರಾವರಿ ಯೋಜನೆಗೆ ಮುಖ್ಯಮಂತ್ರಿ ಶೀಘ್ರ ಚಾಲನೆ: ಕಾಗವಾಡ ಶಾಸಕ ಶ್ರೀಮಂತ ಪಾಟೀಲ್

16/02/2023, 16:50

ರಾಹುಲ್ ಅಥಣಿ ಬೆಳಗಾವಿ
info.reporterkarnataka@gmail.com
ಗಡಿಭಾಗದ ರೈತರ ಬಹುನಿರೀಕ್ಷಿತ ಬಸವೇಶ್ವರ ಏತ ನೀರಾವರಿ ಯೋಜನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶೀಘ್ರವೇ ಚಾಲನೆ ನೀಡಲಿದ್ದಾರೆ ಎಂದು ಕಾಗವಾಡ ಶಾಸಕ ಶ್ರೀಮಂತ ಪಾಟೀಲ್ ಹೇಳಿದರು.
ಸರ್ಕಾರದಿಂದ ಹಣ ಬಿಡುಗಡೆ ವಿಳಂಬ ಹಿನ್ನೆಲೆಯಲ್ಲಿ ಅಥಣಿ ಶುಗರ್ ಕಾರ್ಖಾನೆ ವತಿಯಿಂದ 3.50 ಕೋಟಿ ಸಹಾಯಧನ ನೀಡಲಾಗುವುದು. ವಿದ್ಯುತ್ ಸಂಪರ್ಕ ಕಲ್ಪಿಸುವ ಯುಕ್ತಾ ಎಲೆಕ್ಟ್ರಿಕಲ್ ಇಂಜಿನಿಯರ್ ಗೆ 3.30 ಕೋಟಿ ರೂ ಚೆಕ್ ನೀಡಿದ ನಂತರ ಶಾಸಕ ಶ್ರೀಮಂತ ಪಾಟೀಲ್ ಮಾಧ್ಯಮ ಜತೆ ಮಾತನಾಡಿದರು. ಬೆಳಗಾವಿ ಜಿಲ್ಲೆ ಕಾಗವಾಡ ತಾಲೂಕಿನ ಕೆಂಪವಾಡ ಗ್ರಾಮದಲ್ಲಿ ಯೋಜನೆ ಅನುಷ್ಠಾನಗೊಳ್ಳಲಿದೆ.
ಯಾವುದೇ ಕಾರಣಕ್ಕೂ ಕೆಲಸ ನಿಲ್ಲಬಾರದು ಎಂಬ ಉದ್ದೇಶದಿಂದ ನೀರಾವರಿ ಯೋಜನೆಗೆ ಸ್ವಂತ ಖರ್ಚಿನಲ್ಲೇ ಸಹಾಯ ಹಸ್ತ ನೀಡುತ್ತಿರುವುದಾಗಿ ಶಾಸಕರು ನುಡಿದರು.
ಮಾರ್ಚ್ ಮೊದನೆ ವಾರದಲ್ಲೇ ಕಾಮಗಾರಿ ಪೂರ್ಣ ಗೋಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು