11:18 AM Monday5 - June 2023
ಬ್ರೇಕಿಂಗ್ ನ್ಯೂಸ್
ರೈಲು ದುರಂತ ಗಾಯಾಳುಗಳ ಪ್ರಧಾನಿ ಮೋದಿ ಭೇಟಿ: ಯೋಗಕ್ಷೇಮ ವಿಚಾರಣೆ; ಮಡಿದವರಿಗೆ 10… ಕಡಲನಗರಿ ಕುಡ್ಲದಲ್ಲಿ 2 ದಿನಗಳ ‘ಹಲಸಿನ ಹಬ್ಬ’; ಜಾಕ್ ಫ್ರುಟ್ ಐಸ್ ಕ್ರೀಂ,… ಫಲ್ಗುಣಿ ನದಿಗೆ ರುಚಿ ಗೋಲ್ಡ್ ತ್ಯಾಜ್ಯ ವಿಸರ್ಜಿಸುವ ಕೊಳವೆ ಪತ್ತೆ: ನಾಗರಿಕ ಹೋರಾಟ… ಒಡಿಸ್ಸಾ ರೈಲು ದುರಂತ: ಕಳಸದಿಂದ ಸಮೇದ್ ಶಿಖರ್ಜಿ ಯಾತ್ರೆಗೆ ತೆರಳಿದ್ದ 110 ಮಂದಿ… ಇವರೇ ಅದೃಷ್ಟವಂತ 110 ಮಂದಿ ಕನ್ನಡಿಗರು!: ಒಡಿಶಾದಲ್ಲಿ ಭೀಕರ ದುರಂತಕ್ಕೀಡಾದ ರೈಲಿನ ಪ್ರಯಾಣಿಕರು;… ಒಡಿಶಾ: ಭೀಕರ ರೈಲು ದುರಂತ; ಕರ್ನಾಟಕದ 110 ಮಂದಿ ಕನ್ನಡಿಗ ಪ್ರಯಾಣಿಕರು ಸೇಫ್ ಲೋಕಸಭೆ ಚುನಾವಣೆ: ನಳಿನ್, ಡಿವಿ, ಮಂಗಳಾ ಅಂಗಡಿ ಸಹಿತ 10ಕ್ಕೂ ಹೆಚ್ಚು ಸಂಸದರು… ಮಾಣಿ: ಬಾಲವಿಕಾಸ ಅಂಗ್ಲ ಮಾಧ್ಯಮ ಶಾಲೆ ಕಚೇರಿ ಉದ್ಘಾಟನೆ; ವೆಲ್ ಕಮ್ ಡೇ… 5 ಲಕ್ಷ ರೂ. ವಂಚನೆ ಪ್ರಕರಣ: ಪೋಲಿಸ್ ಕಾನ್ ಸ್ಟೇಬಲ್ ಸಹಿತ 3… ಮುಡಾ ಉದ್ಯೋಗಿ ನೇಣಿಗೆ ಶರಣು: ಅನಾರೋಗ್ಯದಿಂದ ಬೇಸೆತ್ತು ಆತ್ಮಹತ್ಯೆ?

ಇತ್ತೀಚಿನ ಸುದ್ದಿ

ಕನ್ನಡಿಗ ಛಾಯಾಗ್ರಾಹಕ, ‘ಪೊರ್ಲು’ ಖ್ಯಾತಿಯ ಜಿನೇಶ್ ಪ್ರಸಾದ್ ಗೆ ರಾಷ್ಟ್ರೀಯ ‘ಚಿತ್ರಾಂಜಲಿ ಪ್ರಶಸ್ತಿ’ ಪ್ರದಾನ

19/03/2023, 20:38

ಹೊಸದಿಲ್ಲಿ(reporterkarnataka.com): ಭಾರತ ಸರ್ಕಾರದ ಸಂಸ್ಕೃತಿ ಸಚಿವಾಲಯ ಪ್ರದಾನ ಮಾಡುವ ನವದೆಹಲಿಯ ಇಂದಿರಾ ಗಾಂಧಿ ನ್ಯಾಷನಲ್ ಸೆಂಟರ್ ಫಾರ್ ದಿ ಆರ್ಟ್ ಸಂಸ್ಥೆಯ ಅತ್ಯುನ್ನತ ವಾರ್ಷಿಕ ಚಿತ್ರಾಂಜಲಿ ಪ್ರಶಸ್ತಿಯನ್ನು ಅಂತಾರಾಷ್ಟ್ರೀಯ ಖ್ಯಾತಿಯ ಕನ್ನಡಿಗ ಛಾಯಗ್ರಾಹಕ ಜಿನೇಶ್ ಪ್ರಸಾದ್ ಅವರಿಗೆ ಭಾನುವಾರ ಪ್ರದಾನ ಮಾಡಲಾಯಿತು.


ನವ ದೆಹಲಿಯಲ್ಲಿ ನಡೆದ ಸಮಾರಂಭದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಸಿಂಗ್ ಪಟೇಲ್ ಅವರು ಪ್ರಶಸ್ತಿ ಪ್ರದಾನ ಮಾಡಿದರು. ಪ್ರಶಸ್ತಿಯು 1 ಲಕ್ಷ ರೂಪಾಯಿಗಳ ನಗದು, ಫಲಕ ಹಾಗೂ ಪ್ರಮಾಣ ಪತ್ರವನ್ನು ಒಳಗೊಂಡಿದೆ.
ಮೂರೂವರೆ ದಶಕಗಳ ಹಿಂದೆಯೇ “ಪೊರ್ಲು” ಎಂಬ ಹೆಸರಿನೊಂದಿಗೆ ಛಾಯಾಚಿತ್ರ ರಂಗದಲ್ಲಿ ಛಾಪು ಮೂಡಿಸಿದ್ದ ಜಿನೇಶ್ ಪ್ರಸಾದ್ ಅವರು ನೂರಕ್ಕೂ ಹೆಚ್ಚು ರಾಷ್ಟ್ರೀಯ, ಅಂತಾರಾಷ್ಟ್ರೀಯ ಪ್ರಶಸ್ತಿ ವಿಜೇತರಾಗಿದ್ದಾರೆ. ದೇಶ ವಿದೇಶಗಳಲ್ಲಿ ಛಾಯಾಚಿತ್ರ ಪ್ರದರ್ಶನಗಳಲ್ಲಿ ಭಾಗವಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು