ಇತ್ತೀಚಿನ ಸುದ್ದಿ
ಬಂಟ್ವಾಳ ಪ್ರಜಾಧ್ವನಿ ಯಾತ್ರೆ: ಪಣೋಲಿಬೈಲ್ ದೈವಸ್ಥಾನಕ್ಕೆ ಮಾಜಿ ಸಚಿವ ರಮಾನಾಥ ರೈ ಭೇಟಿ; ವಿಶೇಷ ಪ್ರಾರ್ಥನೆ ಸಲ್ಲಿಕೆ
21/03/2023, 13:10

ಬಂಟ್ವಾಳ(reporterkarnataka.com): ಬಂಟ್ವಾಳ ಪ್ರಜಾಧ್ವನಿ ಯಾತ್ರೆಯ 10ನೇ ದಿನ
ಸಜೀಪಮುನ್ನೂರು, ಅಮ್ಟೂರು, ಸಜಿಪಮೂಡ ಗ್ರಾಮ ವ್ಯಾಪ್ತಿಯಲ್ಲಿ ಸಂಚರಿಸುವ ಸಂದರ್ಭದಲ್ಲಿ ಮಾಜಿ ಸಚಿವ ಬಿ. ರಮಾನಾಥ ರೈ ಹಾಗೂ ಕಾಂಗ್ರೆಸ್ ನಿಯೋಗ ಶ್ರೀ ಕ್ಷೇತ್ರ ಪಣೋಲಿಬೈಲ್ ದೈವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿ ಗಂಧ ಪ್ರಸಾದ ಸ್ವೀಕರಿಸಿದದರು.
ಈ ಸಂದರ್ಭದಲ್ಲಿ ಚಂದ್ರಪ್ರಕಾಶ್ ಶೆಟ್ಟಿ, ಬೇಬಿ ಕುಂದರ್, ಸುದೀಪ್ ಕುಮಾರ್ ಶೆಟ್ಟಿ, ಲೋಲಾಕ್ಷ ಶೆಟ್ಟಿ, ರಮೇಶ್ ಪಣೋಲಿಬೈಲ್, ಸುರೇಶ್ ಜೋರ, ಜಯಂತಿ ವಿ. ಪೂಜಾರಿ ಮೊದಲದವರು ಉಪಸ್ಥಿತರಿದ್ದರು.