1:28 PM Monday5 - June 2023
ಬ್ರೇಕಿಂಗ್ ನ್ಯೂಸ್
ರೈಲು ದುರಂತ ಗಾಯಾಳುಗಳ ಪ್ರಧಾನಿ ಮೋದಿ ಭೇಟಿ: ಯೋಗಕ್ಷೇಮ ವಿಚಾರಣೆ; ಮಡಿದವರಿಗೆ 10… ಕಡಲನಗರಿ ಕುಡ್ಲದಲ್ಲಿ 2 ದಿನಗಳ ‘ಹಲಸಿನ ಹಬ್ಬ’; ಜಾಕ್ ಫ್ರುಟ್ ಐಸ್ ಕ್ರೀಂ,… ಫಲ್ಗುಣಿ ನದಿಗೆ ರುಚಿ ಗೋಲ್ಡ್ ತ್ಯಾಜ್ಯ ವಿಸರ್ಜಿಸುವ ಕೊಳವೆ ಪತ್ತೆ: ನಾಗರಿಕ ಹೋರಾಟ… ಒಡಿಸ್ಸಾ ರೈಲು ದುರಂತ: ಕಳಸದಿಂದ ಸಮೇದ್ ಶಿಖರ್ಜಿ ಯಾತ್ರೆಗೆ ತೆರಳಿದ್ದ 110 ಮಂದಿ… ಇವರೇ ಅದೃಷ್ಟವಂತ 110 ಮಂದಿ ಕನ್ನಡಿಗರು!: ಒಡಿಶಾದಲ್ಲಿ ಭೀಕರ ದುರಂತಕ್ಕೀಡಾದ ರೈಲಿನ ಪ್ರಯಾಣಿಕರು;… ಒಡಿಶಾ: ಭೀಕರ ರೈಲು ದುರಂತ; ಕರ್ನಾಟಕದ 110 ಮಂದಿ ಕನ್ನಡಿಗ ಪ್ರಯಾಣಿಕರು ಸೇಫ್ ಲೋಕಸಭೆ ಚುನಾವಣೆ: ನಳಿನ್, ಡಿವಿ, ಮಂಗಳಾ ಅಂಗಡಿ ಸಹಿತ 10ಕ್ಕೂ ಹೆಚ್ಚು ಸಂಸದರು… ಮಾಣಿ: ಬಾಲವಿಕಾಸ ಅಂಗ್ಲ ಮಾಧ್ಯಮ ಶಾಲೆ ಕಚೇರಿ ಉದ್ಘಾಟನೆ; ವೆಲ್ ಕಮ್ ಡೇ… 5 ಲಕ್ಷ ರೂ. ವಂಚನೆ ಪ್ರಕರಣ: ಪೋಲಿಸ್ ಕಾನ್ ಸ್ಟೇಬಲ್ ಸಹಿತ 3… ಮುಡಾ ಉದ್ಯೋಗಿ ನೇಣಿಗೆ ಶರಣು: ಅನಾರೋಗ್ಯದಿಂದ ಬೇಸೆತ್ತು ಆತ್ಮಹತ್ಯೆ?

ಇತ್ತೀಚಿನ ಸುದ್ದಿ

ಚುನಾವಣೆ ನೀತಿ ಸಂಹಿತೆ ಉಲ್ಲಂಘನೆಯಾದರೆ ಕಂಟ್ರೋಲ್ ರೂಮ್‍ಗೆ ಕರೆ ಮಾಡಿ ದೂರು ನೀಡಿ

21/03/2023, 21:49

ಮಂಗಳೂರು(reporterkarnataka.com): 2023ನೇ ಸಾಲಿನಲ್ಲಿ ರಾಜ್ಯ ವಿಧಾನಸಭೆಗೆ ನಡೆಯಲಿರುವ ಸಾರ್ವತ್ರಿಕ ಚುನಾವಣೆಯ ಸಂಬಂಧ ನೀತಿ ಸಂಹಿತೆ ಜಾರಿಯಲ್ಲಿರುವ ಅವಧಿಯಲ್ಲಿ ಅಕ್ರಮ ಮದ್ಯ, ಬೀರ್ ತಯಾರಿಕೆ, ದಾಸ್ತಾನು ಹಾಗೂ ಸಾಗಾಣಿಕೆ ಬಗ್ಗೆ ಸಾರ್ವಜನಿಕರಿಂದ ನೀಡಲಾಗುವ ದೂರುಗಳನ್ನು ಸ್ವೀಕರಿಸಲು ಹಾಗೂ ಚುನಾವಣಾ ಆಯೋಗದ ನಿರ್ದೇಶನವನ್ನು ಕಟ್ಟುನಿಟ್ಟಾಗಿ ಪಾಲಿಸಲು ಮತ್ತು ಚುನಾವಣೆಯನ್ನು ಮುಕ್ತ ಹಾಗೂ ಶಾಂತಿಯುತವಾಗಿ ನಡೆಯಲು ಅಬಕಾರಿ ಇಲಾಖೆಯ ಜಿಲ್ಲಾ ಕೇಂದ್ರ ಕಚೇರಿಯಲ್ಲಿ, ತಾಲೂಕು ಮಟ್ಟದಲ್ಲಿ ಕಂಟ್ರೋಲ್ ರೂಮ್ ಗಳನ್ನು ತೆರೆಯಲಾಗಿದೆ.
ಈ ಕಂಟ್ರೋಲ್ ರೂಮ್‍ಗಳು ದಿನದ 24 ಗಂಟೆಗಳು ಕಾರ್ಯನಿರ್ವಹಿಸುತ್ತಿದ್ದು, ಸಾರ್ವಜನಿಕರು ಅಬಕಾರಿ ಅಕ್ರಮಗಳ ಬಗ್ಗೆ ಮಾಹಿತಿಯನ್ನು ಕಂಟ್ರೋಲ್ ರೂಂ. ಗಳ ದೂರವಾಣಿ ಸಂಖ್ಯೆಗೆ ಕರೆ ಮಾಡಿ ದೂರು ನೀಡಬಹುದು.
ನಗರದ ಮೇರಿಹಿಲ್‍ನಲ್ಲಿರುವ ಅಬಕಾರಿ ಉಪ ಆಯುಕ್ತರ ಕಚೇರಿ ಟೋಲ್ ಫ್ರೀ ಸಂಖ್ಯೆ 1800 -4253872, ದೂ.ಸಂಖ್ಯೆ:0824 – 2213872. ಬಂಟ್ವಾಳ ವಲಯದ ಅಬಕಾರಿ ನಿರೀಕ್ಷಕರ ಕಚೇರಿ ದೂ.ಸಂಖ್ಯೆ:08255-232726, ಬೆಳ್ತಂಗಡಿ ವಲಯದ ಅಬಕಾರಿ ನಿರೀಕ್ಷಕರ ಕಚೇರಿ ದೂ.ಸಂಖ್ಯೆ: 08256-298757, ಪುತ್ತೂರು ವಲಯದ ಅಬಕಾರಿ ನಿರೀಕ್ಷಕರ ಕಚೇರಿ ದೂ.ಸಂಖ್ಯೆ: 08251-238481, ಸುಳ್ಯ ವಲಯದ ಅಬಕಾರಿ ನಿರೀಕ್ಷಕರ ಕಚೇರಿ ದೂ.ಸಂಖ್ಯೆ: 08257-231309 ಅನ್ನು ಸಂಪರ್ಕಿಸಬಹುದು ಎಂದು ಅಬಕಾರಿ ಉಪ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು