11:42 AM Monday5 - June 2023
ಬ್ರೇಕಿಂಗ್ ನ್ಯೂಸ್
ರೈಲು ದುರಂತ ಗಾಯಾಳುಗಳ ಪ್ರಧಾನಿ ಮೋದಿ ಭೇಟಿ: ಯೋಗಕ್ಷೇಮ ವಿಚಾರಣೆ; ಮಡಿದವರಿಗೆ 10… ಕಡಲನಗರಿ ಕುಡ್ಲದಲ್ಲಿ 2 ದಿನಗಳ ‘ಹಲಸಿನ ಹಬ್ಬ’; ಜಾಕ್ ಫ್ರುಟ್ ಐಸ್ ಕ್ರೀಂ,… ಫಲ್ಗುಣಿ ನದಿಗೆ ರುಚಿ ಗೋಲ್ಡ್ ತ್ಯಾಜ್ಯ ವಿಸರ್ಜಿಸುವ ಕೊಳವೆ ಪತ್ತೆ: ನಾಗರಿಕ ಹೋರಾಟ… ಒಡಿಸ್ಸಾ ರೈಲು ದುರಂತ: ಕಳಸದಿಂದ ಸಮೇದ್ ಶಿಖರ್ಜಿ ಯಾತ್ರೆಗೆ ತೆರಳಿದ್ದ 110 ಮಂದಿ… ಇವರೇ ಅದೃಷ್ಟವಂತ 110 ಮಂದಿ ಕನ್ನಡಿಗರು!: ಒಡಿಶಾದಲ್ಲಿ ಭೀಕರ ದುರಂತಕ್ಕೀಡಾದ ರೈಲಿನ ಪ್ರಯಾಣಿಕರು;… ಒಡಿಶಾ: ಭೀಕರ ರೈಲು ದುರಂತ; ಕರ್ನಾಟಕದ 110 ಮಂದಿ ಕನ್ನಡಿಗ ಪ್ರಯಾಣಿಕರು ಸೇಫ್ ಲೋಕಸಭೆ ಚುನಾವಣೆ: ನಳಿನ್, ಡಿವಿ, ಮಂಗಳಾ ಅಂಗಡಿ ಸಹಿತ 10ಕ್ಕೂ ಹೆಚ್ಚು ಸಂಸದರು… ಮಾಣಿ: ಬಾಲವಿಕಾಸ ಅಂಗ್ಲ ಮಾಧ್ಯಮ ಶಾಲೆ ಕಚೇರಿ ಉದ್ಘಾಟನೆ; ವೆಲ್ ಕಮ್ ಡೇ… 5 ಲಕ್ಷ ರೂ. ವಂಚನೆ ಪ್ರಕರಣ: ಪೋಲಿಸ್ ಕಾನ್ ಸ್ಟೇಬಲ್ ಸಹಿತ 3… ಮುಡಾ ಉದ್ಯೋಗಿ ನೇಣಿಗೆ ಶರಣು: ಅನಾರೋಗ್ಯದಿಂದ ಬೇಸೆತ್ತು ಆತ್ಮಹತ್ಯೆ?

ಇತ್ತೀಚಿನ ಸುದ್ದಿ

ಮಂಗಳೂರು ಉತ್ತರ ಸಂಚಾರಿ ಠಾಣೆ ನೂತನ ಕಟ್ಟಡ: ಶಾಸಕ ಡಾ. ಭರತ್ ಶೆಟ್ಟಿ ಉದ್ಘಾಟನೆ

21/03/2023, 13:30

ಸುರತ್ಕಲ್(reporterkarnataka.com):
ಸುಮಾರು 2 ಕೋಟಿ ರೂ. ವೆಚ್ಚದಲ್ಲಿ ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ನಿರ್ಮಾಣವಾದ ಮಂಗಳೂರು ಉತ್ತರ ಸಂಚಾರಿ ಠಾಣೆಯ ನೂತನ ಕಟ್ಟಡವನ್ನು ಶಾಸಕ ಡಾ. ವೈ ಭರತ್ ಶೆಟ್ಟಿ ಉದ್ಘಾಟಿಸಿದರು.
ನೂತನ ಠಾಣೆ 2 ಕೋಟಿ ರೂ.ವೆಚ್ಚದಲ್ಲಿ ನಿರ್ಮಾಣಗೊಂಡಿದ್ದು, ವಿಶಾಲವಾದ ಪಾರ್ಕಿಂಗ್ , ಪೆರೆಡ್‍ಗೆ ಬೇಕಾದ ಸ್ಥಳಾವಕಾಶ, ವಿಶಾಲವಾದ ಕಟ್ಟಡವನ್ನು ಹೊಂದಿದೆ. ಪ್ರಸ್ತುತ ಬೈಕಂಪಾಡಿ ಎಪಿಎಂಸಿ ಯಾರ್ಡ್‍ನಲ್ಲಿರುವ ಈ ಠಾಣೆ ಶೀಘ್ರ ಸ್ಥಳಾಂತರಗೊಳ್ಳಲಿದೆ.
ಇದಕ್ಕೆ ಅನುದಾನ ಒದಗಿಸಿಕೊಡುವಲ್ಲಿ ಸಹಕರಿಸಿದ ಗೃಹಮಂತ್ರಿಗಳು, ಸಂಬಂಧಪಟ್ಟ ಇಲಾಖೆಯ ಪೊಲೀಸ್ ನಿರ್ದೇಶಕರು ಹಾಗೂ ಇತರ ಅಧಿಕಾರಿಗಳನ್ನು ಶಾಸಕರು ಸ್ಮರಿಸಿಕೊಂಡರಲ್ಲದೆ, ನೂತನ ಠಾಣೆಗೆ ಕಂಪ್ಯೂಟರ್ ಹಾಗೂ ಇತರ ಮೂಲಸೌಕರ್ಯದ ಅಗತ್ಯವಿದ್ದು ಉದ್ಯಮಿಗಳು ಸಹಕರಿಸುವಂತೆ ಮನವಿ ಮಾಡಿದರು.


ಪೊಲೀಸ್ ಆಯುಕ್ತ ಕುಲ್‍ದೀಪ್ ಆರ್. ಜೈನ್, ಕಾನೂನು ಸುವ್ಯವಸ್ಥೆ ಪೊಲೀಸ್ ಉಪ ಆಯುಕ್ತ ಅಂಶು ಕುಮಾರ್, ಅಪರಾಧಿಕ ಸಂಚಾರ ಪೊಲೀಸ್ ಉಪ ಆಯುಕ್ತ ಬಿ.ಪಿ. ದಿನೇಶ್ ಕುಮಾರ್, ಪೊಲೀಸ್ ವಸತಿ ವ್ಯವಸ್ಥಾಪಕಿ ಪ್ರಜ್ಞಾ ಆನಂದ್, ಸಂಚಾರ ಎಸಿಪಿ ಗೀತಾ ಕುಲಕರ್ಣಿ, ಉತ್ತರ ಸಂಚಾರಿ ಸಿಐ ಸುರೇಶ್ ಕುಮಾರ್, ಮನಪಾ ಸದಸ್ಯರು, ಉದ್ಯಮಿಗಳು, ವಿವಿಧ ಸಂಘ ಸಂಸ್ಥೆ ಪ್ರಮುಖರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು