3:39 PM Sunday19 - May 2024
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ: ಮೇ 20ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನ ನಟಿ ಪವಿತ್ರಾ ಜಯರಾಂ ಸ್ನೇಹಿತ ಚಂದ್ರಕಾಂತ್ ಆತ್ಮಹತ್ಯೆ: ಸ್ನೇಹಿತೆ ಸಾವನ್ನಪ್ಪಿ ವಾರದೊಳಗೆ ಚಂದ್ರು… ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ…

ಇತ್ತೀಚಿನ ಸುದ್ದಿ

ಪತ್ರಕರ್ತ ರವೀಂದ್ರ ಶೆಟ್ಟಿ ಅವರ ‘ನಮ್ಮ ಉಡುಪಿ’ ಕೃತಿ ಬಿಡುಗಡೆ: ಜಸ್ಟಿಸ್ ಸಂತೋಷ್ ಹೆಗ್ಡೆ ಅನಾವರಣ

22/03/2023, 18:37

ಉಡುಪಿ(reporterkarnataka.com):
ಹಿರಿಯ ಪತ್ರಕರ್ತ ಬಿ. ರವೀಂದ್ರ ಶೆಟ್ಟಿಯವರು ಬರೆದಿರುವ ಮಂಗಳೂರಿನ ಆಕೃತಿ ಆಶಯ ಪಬ್ಲಿಕೇಶನ್‌ನಿಂದ ಪ್ರಕಟಿಸಲಾದ ಉಡುಪಿ ಜಿಲ್ಲೆಯ ಸಮಗ್ರ ಮಾಹಿತಿಯನ್ನು ಒಳಗೊಂಡಿರುವ ನಮ್ಮ ಉಡುಪಿ ಕೃತಿಯನ್ನು ಉಡುಪಿ ಎಂಜಿಎಂ ಕಾಲೇಜಿನ ಆವರಣದಲ್ಲಿ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ರಜತ ಮಹೋತ್ಸವ ಸಮಾರಂಭದಲ್ಲಿ ಜಸ್ಟಿಸ್ ಸಂತೋಷ್ ಹೆಗ್ಡೆ ಅವರು ಬಿಡುಗಡೆಗೊಳಿಸಿದರು.
ಈ ಸಂದರ್ಭ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ಉಪಾಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ, ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು, ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ, ಕೋಶಾಧಿಕಾರಿ ಉಮೇಶ್ ಮಾರ್ಪಳ್ಳಿ, ಸ್ಥಾಪಕ ಉಪಾಧ್ಯಕ್ಷ ಎಎಸ್‌ಎನ್ ಹೆಬ್ಬಾರ್, ಇಂಡಿಯನ್ ಫೆಡರೇಶನ್ ಆಫ್ ವರ್ಕಿಂಗ್ ಜರ್ನಲಿಸ್ಟ್ ಸಂಸ್ಥೆ ರಾಷ್ಟಿಯ ಸಮಿತಿ ಸದಸ್ಯ ಅರುಣ್ ಕುಮಾರ್ ಶಿರೂರು, ರಾಜ್ಯ ಸಮಿತಿ ಸದಸ್ಯ ಕಿರಣ್ ಮಂಜನಬೈಲ್, ರಜತ ಮಹೋತ್ಸವ ಸಮಿತಿ ಸಂಚಾಲಕ ಮೊಹಮ್ಮದ್ ಶರೀಫ್, ಪ್ರಧಾನ ಕಾರ್ಯದರ್ಶಿ ಜಯಕರ ಸುವರ್ಣ ಉಪಸ್ಥಿತರಿದ್ದರು.

ನಮ್ಮ ಉಡುಪಿಯಲ್ಲಿ ಏನೇನಿದೆ?:

ನಮ್ಮ ಉಡುಪಿ ಕೃತಿಯಲ್ಲಿ ಉಡುಪಿ ಜಿಲ್ಲೆಯ ಭೌಗೋಳಿಕ ವಿವರಗಳು, ಭಾಷೆ, ಧಾರ್ಮಿಕ ಆಚರಣೆ, ಬ್ಯಾಂಕಿಂಗ್, ಉಡುಪಿ ಲೋಕಸಭೆ, ವಿಧಾನ ಸಭೆ ಸದಸ್ಯರ ವಿವರಗಳು, ಸ್ಥಳೀಯಾಡಳಿತ ಸಂಸ್ಥೆಗಳ ಮಾಹಿತಿ, ಪ್ರವಾಸೋದ್ಯಮ, ಪ್ರಮುಖ ತಾಣಗಳ ಚಿತ್ರಣ, ಪ್ರಾಥಮಿಕ, ಪ್ರೌಢ, ಕಾಲೇಜು, ವೃತ್ತಿಪರ ಕಾಲೇಜುಗಳು, ಪೊಲೀಸ್ ಠಾಣೆ, ಮಾಧ್ಯಮ ಸಂಸ್ಥೆಗಳು, ತುಳು ಸಿನಿಮಾಗಳ ಮಾಹಿತಿ, ರಾಜಕೀಯ ವಿವರಗಳು, ಆಡಳಿತ ಮಾಹಿತಿ, ಪ್ರವಾಸೋದ್ಯಮ, ಶಿಕ್ಷಣ ಸಂಸ್ಥೆಗಳು, ವೃತ್ತಿಪರ ಕಾಲೇಜುಗಳು, ಗ್ರಂಥಾಲಯಗಳು, ಪ್ರಮುಖ ದೇವಸ್ಥಾನ, ಚರ್ಚ್, ಮಸೀದಿಗಳು, ಹೊಟೇಲ್, ಲಾಡ್ಜ್ಗಳು, ರೆಸಾರ್ಟ್ಗಳು, ಕಲ್ಯಾಣ ಮಂಟಪಗಳು, ಪ್ರಮುಖ ಕೆರೆ, ಮದಗಗಳು, ಸಾರಿಗೆ ಸೌಲಭ್ಯ, ಆಸ್ಪತ್ರೆಗಳು, ಆರೋಗ್ಯ ಕೇಂದ್ರಗಳು, ಬ್ಲಾಡ್ ಬ್ಯಾಂಕ್ಗಳು ಹೀಗೆ ಸಮಗ್ರ ಮಾಹಿತಿಗಳನ್ನು ಈ ಕೃತಿ ಒಳಗೊಂಡಿದೆ.
ಕೃತಿಗೆ ಮಂಗಳೂರು ಕುಲಪತಿ ಪ್ರೊ. ಪಿ.ಎಸ್. ಯಡಪಡಿತ್ತಾಯ ಮುನ್ನುಡಿ ಬರೆದಿದ್ದು, ರಾಜ್ಯದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ ಸುನೀಲ್ ಕುಮಾರ್ ಬೆನ್ನುಡಿ ಬರೆದಿದ್ದಾರೆ. ಕೃತಿಗೆ ಡಿಜಿಟಲ್ ಸ್ಪರ್ಶ ಕೂಡ ನೀಡಲಾಗಿದ್ದು, ಉಡುಪಿ ಜಿಲ್ಲಾ ಸಮಗ್ರ ಚಿತ್ರಣದ ದ್ರಶ್ಯವನ್ನು ಕೂಡ ಪುಸ್ತಕದಲ್ಲಿರುವ ಕ್ಯೂ ಆರ್ ಕೋಡ್ ಬಳಸಿಕೊಂಡು ವೀಕ್ಷಿಸಬಹುದಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು