10:40 AM Sunday19 - May 2024
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ: ಮೇ 20ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನ ನಟಿ ಪವಿತ್ರಾ ಜಯರಾಂ ಸ್ನೇಹಿತ ಚಂದ್ರಕಾಂತ್ ಆತ್ಮಹತ್ಯೆ: ಸ್ನೇಹಿತೆ ಸಾವನ್ನಪ್ಪಿ ವಾರದೊಳಗೆ ಚಂದ್ರು… ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ…

ಇತ್ತೀಚಿನ ಸುದ್ದಿ

ಸಜ್ಜನ ರಾಜಕಾರಣಿ ದತ್ತಗೆ ಟಿಕೆಟ್ ಕೊಡದ ಕಾಂಗ್ರೆಸ್: ಉಡುಪಿ ಸೇರಿದಂತೆ ರಾಜ್ಯದ ಹಲವೆಡೆ ಅವಕಾಶ ವಂಚಿತರಿಂದ ಭಿನ್ನಮತ ಸ್ಫೋಟ

06/04/2023, 21:34

ಬೆಂಗಳೂರು(reporterkarnataka.com): ರಾಜ್ಯ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ನ 2ನೇ ಪಟ್ಟಿ ಹೊರಬೀಳುತ್ತಿದ್ದಂತೆ ಕರಾವಳಿಯ ಉಡುಪಿ ಸೇರಿದಂತೆ ಹಲವಡೆ ಭಿನ್ನಮತ ಸ್ಫೋಟಗೊಂಡಿದೆ.
ಹಲವು ಕ್ಷೇತ್ರಗಳಲ್ಲಿ ಟಿಕೆಟ್ ಕೈತಪ್ಪಿದ ನಾಯಕರು ತಮ್ಮ ಅಸಮಾಧಾನ ಹೊರಗೆಡಹಿದ್ದಾರೆ.
ಉಡುಪಿ, ಕಡೂರು, ಚಿತ್ರದುರ್ಗ, ಕಲಘಟಕಿ, ಗೋಕಾಕ್ ಮುಂತಾದ ಕಡೆಗಳಲ್ಲಿ ಟಿಕೆಟ್ ಕೈತಪ್ಪಿದ ನಾಯಕರು ಹಾಗೂ ಅವರ ಬೆಂಬಲಿಗರು ಭಿನ್ನಮತ ಹೊರಹಾಕಿದ್ದಾರೆ.
ಕಳೆದ 30 ವರ್ಷಗಳಿಂದ ಕಾಂಗ್ರೆಸ್ ನಲ್ಲಿ ದುಡಿಯುತ್ತಿದ್ದ ಕೃಷ್ಣಮೂರ್ತಿ ಆಚಾರ್ಯ ಅವರು ಉಡುಪಿ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಕೈತಪ್ಪಿದ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ರಾಜೀನಾಮೆಗೂ ಮುಂದಾಗಿದ್ದಾರೆ.
ಪ್ರತಿ ಬಾರಿಯೂ ತನಗೆ ಟಿಕೆಟ್ ನೀಡದೆ ವಂಚಿಸಲಾಗುತ್ತಿದೆ. ಈ ಬಾರಿಯೂ ಕೊನೆಯ ಹಂತದಲ್ಲಿ ಟಿಕೆಟ್ ನಿರಾಕರಿಸಲಾಗಿದೆ ಎಂದು ಕೃಷ್ಣಮೂರ್ತಿ ಆಚಾರ್ಯ ಅವರು ಅಸಮಾಧಾನ ವ್ಯಕ್ತಪಡಿಸಿದ್ದು, ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಬಗ್ಗೆ ಚಿಂತನೆ ನಡೆಸಿದ್ದಾರೆ.
ಉಡುಪಿ ವಿಧಾನಸಭೆ ಕ್ಷೇತ್ರದಲ್ಲಿ ಉದ್ಯಮಿ ಪ್ರಸಾದ್ ಕಾಂಚನ್ ಅವರಿಗೆ ಟಿಕೆಟ್ ನೀಡಲಾಗಿದೆ. ಕಾಂಗ್ರೆಸ್ ನಾಯಕಿ ಸರಳಾ ಕಾಂಚನ್ ಅವರ ಪುತ್ರನಾದ ಪ್ರಸಾದ್ ಅವರಿಗೆ ಟಿಕೆಟ್ ಒಲಿದಿದೆ.
ಕಲಘಟ್ಟಿಯಲ್ಲಿ ಮಾಜಿ ಸಚಿವ ಸಂತೋಷ್ ಲಾಡ್ ಅವರಿಗೆ ಟಿಕೆಟ್ ನೀಡಿದ ಕುರಿತು ನಾಗರಾಜ ಛಬ್ಬಿ ಅಸಮಾಧಾನ ಗೊಂಡಿದ್ದು, ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಛಬ್ಬಿ ಅವರು ಬೆಂಬಲಿಗರ ಸಭೆ ಕೂಡ ಕರೆದಿದ್ದಾರೆ. ಬೆಳಗಾವಿ ಜಿಲ್ಲೆಯ ಗೋಕಾಕ್ ನಲ್ಲಿ ಅಶೋಕ್ ಪೂಜಾರಿ ಅವರಿಗೆ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಮಂಡ್ಯದಲ್ಲಿ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲಾಗಿದೆ. ಕಡೂರಿನಲ್ಲಿ ವೈ.ಎಸ್. ವಿ. ದತ್ತ ಎಂಬ ಸಜ್ಜನ ರಾಜಕಾರಣಿಗೆ ಟಿಕೆಟ್ ನಿರಾಕರಿಸಿದ ಬಗ್ಗೆ ಕಡೂರು ಮಾತ್ರವಲ್ಲದೆ ಇಡೀ ರಾಜ್ಯದಲ್ಲಿ ಪ್ರಜ್ಞಾವಂತ ಮತದಾರರು ಅಸಮಾಧಾನ ಹೊರಹಾಕಿದ್ದಾರೆ. ಮತ್ತೆ ಜೆಡಿಎಸ್ ಗೆ ಬರುವಂತೆ ಕಡೂರು ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಧನಂಜಯ ಅವರು ದತ್ತರಿಗೆ ಆಹ್ವಾನ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು