6:36 AM Saturday4 - May 2024
ಬ್ರೇಕಿಂಗ್ ನ್ಯೂಸ್
ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ… ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ…

ಇತ್ತೀಚಿನ ಸುದ್ದಿ

ಸೆರೆ ಹಿಡಿದ ಹಾವಿನಿಂದಲೇ ಸಾವನ್ನಪ್ಪಿದ್ದ ಉರಗತಜ್ಞ ನರೇಶ್: ವಿಧಾನ ಸಭೆ ಚುನಾವಣೆಗೂ ಸ್ಪರ್ಧಿಸಿದ್ದರು ಅವರು!

31/05/2023, 10:51

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಉರಗತಜ್ಞ ಸಾವು ಸ್ನೇಕ್ ನರೇಶ್ (51) ಹಾವು ಕಚ್ಚಿ ಸಾವನ್ನಪ್ಪಿದ್ದಾರೆ. ಚಿಕ್ಕಮಗಳೂರು ನಗರದ ಹೌಸಿಂಗ್ ಬೋರ್ಡ್ ನಲ್ಲಿ ಈ ಘಟನೆ ನಡೆದಿದೆ.
ಬೆಳಗ್ಗೆ ನಾಗರಹಾವು ಹಿಡಿದುಕೊಂಡು ಬಂದಿದ್ದ ನರೇಶ್ ಅವರಿಗೆ ಮತ್ತೊಂದು ಹಾವು ಹಿಡಿಯಲು ಮಧ್ಯಾಹ್ನ ಕರೆ ಬಂದಿತ್ತು.


ಬೈಕಿನ ಸ್ಕೂಟಿಯಲ್ಲಿದ್ದ ಹಾವಿನ ಚೀಲದ ಗಂಟು ಬಿಗಿ ಮಾಡಲು ಡಿಕ್ಕಿ ಓಪನ್ ಮಾಡಿದ ಕೂಡಲೇ ನಾಗರಹಾವು ಕಚ್ಚಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ಸೇರಿಸುವಷ್ಟರಲ್ಲಿ ನರೇಶ್ ಸಾವನ್ನಪ್ಪಿದ್ದಾರೆ.
ಸ್ಕೂಟಿ ಡಿಕ್ಕಿಯಲ್ಲಿ ಇದ್ದದ್ದು ಎರಡೇ ಹಾವು.
ಕಾರಿನಲ್ಲಿ 30ಕ್ಕೂ ಹೆಚ್ಚು ಹಾವುಗಳಿದ್ದವು.
ಕಾರಿನ ಸೀಟ್, ಡಿಕ್ಕಿಯಲ್ಲಿ 20ಕ್ಕೂ ಹೆಚ್ಚು ಚೀಲಗಳಲ್ಲಿ ಹಾವು ಇರುತ್ತಿದ್ದವು. 15 ದಿನಕ್ಕೊಮ್ಮೆ ಚಾರ್ಮಾಡಿಗೆ ಹೋಗಿ ಕಾಡಿನೊಳಗೆ ಹಾವುಗಳನ್ನ ಬಿಟ್ಟು ನರೇಶ್ ಬರುತ್ತಿದ್ದರು.
ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಸ್ನೇಕ್ ನರೇಶ್ ಎಂದೇ ಅವರು ಖ್ಯಾತಿ ಪಡೆದಿದ್ದರು. ಸಾವಿರಾರು ಹಾವುಗಳನ್ನ ಅವರು ಸೆರೆ ಹಿಡಿದು ಚಾರ್ಮಾಡಿ ಘಾಟಿಯ ಕಾಡಿನೊಳಗೆ ಬಿಡುತ್ತಿದ್ದರು. ಶಾಲಾ ಮಕ್ಕಳಿಗೆ ಹಾವಿಗಳ ಬಗ್ಗೆ ಜಾಗೃತಿ ಮೂಡಿಸುತ್ತಿದ್ದರು. 2013ರಲ್ಲಿ ವಿಧಾನಸಭಾ ಚುನಾವಣೆಗೆ ನರೇಶ್ ಸ್ಪರ್ಧಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು