11:07 AM Monday6 - May 2024
ಬ್ರೇಕಿಂಗ್ ನ್ಯೂಸ್
ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,… ಮಾಜಿ ಪ್ರಧಾನಿ ದೇವೇಗೌಡರಿಗೆ ನೀಡಿದ್ದ, ಸಂಸದ ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸನದ ಸರಕಾರಿ… ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ…

ಇತ್ತೀಚಿನ ಸುದ್ದಿ

ಶಾಸಕ ರಾಜು ಕಾಗೆಯಿಂದ ಕಿರುಕುಳ: ಗ್ರಾಪಂ ಮಾಜಿ ಅಧ್ಯಕ್ಷ ಆರೋಪ: ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಶಾಸಕರ ಮನೆ ಮುಂದೆ ಆಗಮಿಸಿದ ರಾಮಗೌಡ

06/06/2023, 13:04

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಕಾಗೇವಾಡ ಕಾಂಗ್ರೆಸ್ ಶಾಸಕ ರಾಜು ಕಾಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಶಾಸಕರ ಮನೆ ಮುಂದೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಸಿದ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರೊಬ್ಬರು ಕುಟುಂಬ ಸಹಿತ ಶಾಸಕ ಮನೆ ಮುಂದೆ ಆಗಮಿಸಿದ ಘಟನೆ ನಡೆದಿದೆ.
ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಶಿರಗುಪ್ಪಿ ಗ್ರಾ‌ಮದ ರಾಮಗೌಡ ಪಾಟೀಲ್ ಎಂಬವರು ಈ ಆರೋಪ ಮಾಡಿದ್ದಾರೆ.
ಚುನಾವಣೆ ವೇಳೆ ತಮ್ಮ ಪರ ಪ್ರಚಾರ ಮಾಡದೆ, ಬಿಜೆಪಿ ಪರ ಪ್ರಚಾರ ಮಾಡಿದ ಹಿನ್ನೆಲೆಯಲ್ಲಿ ಶಾಸಕರು ನಮ್ಮನ್ನು ಟಾರ್ಗೆಟ್ ಮಾಡುತ್ತಿದ್ದಾರೆ ಎಂದು ರಾಮಗೌಡ ಕುಟುಂಬಸ್ಥರು ಆರೋಪ ಮಾಡಿದ್ದಾರೆ.
ತಮ್ಮ ಹೆಸರಿನ ಎಮ್.ಎಸ್.ಐ.ಎಲ್ ಮಧ್ಯ ಮಳಿಗೆಗೂ ತೊಂದರೆ ನೀಡುತ್ತಿದ್ದಾರೆ.


ನಿನ್ನನ್ನ ಬದುಕಲು ಬಿಡಲ್ಲ ಎಂದು ಕಿರುಕುಳ ನೀಡುತ್ತಿದ್ದಾರೆ ಎಂದು ರಾಮಗೌಡ ಪಾಟೀಲ್ ಆರೋಪಿಸಿದ್ದಾರೆ.
ನಿನ್ನೆ ರಾತ್ರಿ ಕುಟುಂಬ ಸಮೇತ ಶಾಸಕರ ಮನೆ ಎದುರು ಬಂದು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ರಾಮಗೌಡ ಹೇಳಿದ್ದರು. ಗ್ರಾಮ ಪಂಚಾಯತಿ ಮೈಕ್ ಮೂಲಕ ಗ್ರಾಮದಲ್ಲಿ ರಾಮಗೌಡ ಅವರು ಈ ಕುರಿತು ಡಂಗೂರ ಸಾರಿದ್ದರು. ಶಾಸಕರಿಗೆ ಕರೆ ಮಾಡಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿದ್ದರು.
ಕುಟುಂಬ ಸಮೇತ ಆತ್ಮಹತ್ಯೆ ಮಾಡಿಕೊಂಡರೆ ಸಮಾಧಾನ ಆಗುತ್ತಾ ಎಂದು ರಾಮಗೌಡ ಶಾಸಕರಲ್ಲಿ ಪ್ರಶ್ನಿಸಿದ್ದರು. ಇದಕ್ಕೆ ಮಾಡಿಕೊಂಡರೆ ಸಮಾಧಾನ ಆಗುತ್ತದೆ ಎಂದು ರಾಜು ಕಾಗೆ ಹೇಳಿದ್ದರು ಎಂದು ಆರೋಪಿಸಲಾಗಿದೆ.
ಬೆಳಕಾಗುತ್ತಿದ್ದಂತೆ ರಾಮ ಗೌಡ ಅವರನ್ನು ಪೊಲೀಸರು ಠಾಣೆಗೆ ಕರೆದುಕೊಂಡು ಹೋಗಿದ್ದಾರೆ.
ಸದ್ಯ ರಾಮನಗೌಡ ಪಾಟೀಲ್ ಪೊಲೀಸರು ವಶದಲ್ಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು