11:51 AM Thursday2 - May 2024
ಬ್ರೇಕಿಂಗ್ ನ್ಯೂಸ್
ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ… ಅಶ್ಲೀಲ ವೀಡಿಯೊ ಪ್ರಕರಣ: ಬಂಧನದಿಂದ ತಪ್ಪಿಸಿಕೊಳ್ಳಲು ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ… ದತ್ತಪೀಠ ಬಳಿ 100 ಅಡಿ ಆಳಕ್ಕೆ ಉರುಳಿ ಬಿದ್ದ ಪ್ರವಾಸಿಗರ ಮಿನಿ ಬಸ್:… ರಾಜ್ಯದಲ್ಲಿ ಅಭಿವೃದ್ಧಿ ಸ್ಥಗಿತ, ಕಾನೂನು ಸುವ್ಯವಸ್ಥೆ ಚಿಂತಾಜನಕ: ಬೆಳಗಾವಿಯಲ್ಲಿ ಪ್ರಧಾನಿ ಮೋದಿ ವಾಗ್ದಾಳಿ ಬೆಳಗಾವಿಯಲ್ಲಿ ಉತ್ತರ ಕರ್ನಾಟಕ ಶೈಲಿಯ ಜೋಳ ರೊಟ್ಟಿ ಸವಿದ ಪ್ರಧಾನಿ ಮೋದಿ ವಿಜಯಪುರದ ಶಿರನಾಳದಲ್ಲಿ ಶತಾಯುಷಿ ಭಾಗವ್ವ ಮತ ಚಲಾವಣೆ: 108ರ ಹರೆಯದ ಹಿರಿಯಜ್ಜಿ ಪ್ರಧಾನಿ ಮೋದಿ ಏ.28ರಂದು ಶಿರಸಿಗೆ: ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಪರ…

ಇತ್ತೀಚಿನ ಸುದ್ದಿ

ಪಿಲಿಕುಳ ಜೈವಿಕ ಉದ್ಯಾವನ: 2 ಹುಲಿಗಳ ನಡುವೆ ತೀವ್ರ ಕಾಳಗ; ಗಾಯಗೊಂಡಿದ್ದ ಹೆಣ್ಣು ಹುಲಿ ಸಾವು

07/06/2023, 22:00

ಮಂಗಳೂರು (reporterkarnataka.com): ನಗರದ ಹೊರವಲಯದ ಪಿಲಿಕುಳ ಜೈವಿಕ ಉದ್ಯಾವನದಲ್ಲಿ ಎರಡು ಹುಲಿಗಳ ನಡುವೆ ನಡೆದ ಭೀಕರ ಕಾಳಗದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಹೆಣ್ಣು ಹುಲಿ ನೇತ್ರಾವತಿ ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ.
ಜೂನ್ 4ರಂದು 8 ವರ್ಷದ ಗಂಡು ಹುಲಿ ರೇವಾ ಮತ್ತು 15 ವರ್ಷದ ಹೆಣ್ಣು ಹುಲಿ ನೇತ್ರಾವತಿ ನಡುವೆ ತೀವ್ರ ಕಾಳಗ ನಡೆದಿತ್ತು. ಇದರಲ್ಲಿ ಹೆಣ್ಣು ಹುಲಿ ನೇತ್ರಾವತಿಯ ಮುಖಕ್ಕೆ ತೀವ್ರವಾದ ಗಾಯಗಳಾಗಿತ್ತು. ಗಂಡು ಹುಲಿ ರೇವಾ ನೇತ್ರಾವತಿಯ ಸಂಪರ್ಕ ಬಯಸಿ ಬಂದಾಗ ನೇತ್ರಾವತಿ ಪ್ರತಿರೋಧ ಒಡ್ಡಿತ್ತು. ಆ ಸಂದರ್ಭದಲ್ಲಿ ಎರಡೂ ಹುಲಿಗಳ ನಡುವೆ ಕಾದಾಟ ನಡೆದಿತ್ತು. ಪಿಲಿಕುಳ ಜೈವಿಕ ಉದ್ಯಾವನದ ಸಿಬ್ಬಂದಿಗಳು ಕಾಳಗ ನಿರತ ಹುಲಿಗಳನ್ನು ಬೇರ್ಪಡಿಸಿ ಬೋನಿಗೆ ಹಾಕಿದ್ದರು. ಗಾಯಗೊಂಡಿದ್ದ ನೇತ್ರಾವತಿಗೆ ಜೈವಿಕ ಉದ್ಯಾವನದ ವೈದ್ಯರು ಚಿಕಿತ್ಸೆ ನೀಡಿದ್ದರು. ಆದರೆ ಬುಧವಾರ ಬೆಳಗ್ಗೆ ವೈದ್ಯರು ಚಿಕಿತ್ಸೆ ನೀಡುತ್ತಿರುವಾಗಲೇ ಹುಲಿ ಕುಸಿದು ಬಿದ್ದು ಪ್ರಾಣ ಬಿಟ್ಟಿದೆ. ಗಾಯಗೊಂಡಿದ್ದ ನೇತ್ರಾವತಿಗೆ ತೀವ್ರ ಹೃದಯಾಘಾತ ಉಂಟಾಗಿ ಸಾವನ್ನಪ್ಪಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು