9:38 AM Saturday4 - May 2024
ಬ್ರೇಕಿಂಗ್ ನ್ಯೂಸ್
ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ… ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ…

ಇತ್ತೀಚಿನ ಸುದ್ದಿ

ಕೋಮು ಸಂಘರ್ಷದ ಮಾತು ಬಿಡಿ, ಮಂಗಳೂರು ಅಭಿವೃದ್ಧಿ ಕಡೆ ಗಮನ ಕೊಡಿ: ಶಾಸಕ ವೇದವ್ಯಾಸ ಕಾಮತ್ ಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ತಿರುಗೇಟು

10/06/2023, 17:24

ಮಂಗಳೂರು(reporterkarnataka.com): ರಾಜ್ಯದಲ್ಲಿ ಮತ್ತೆ ಕೋಮು ಸಂಘರ್ಷ ವಾತಾವರಣ ಸೃಷ್ಟಿಯಾಗುವ ಭೀತಿ ಇದೆ ಎಂದು ಮಂಗಳೂರು ದಕ್ಷಿಣ ಶಾಸಕ ಡಿ.ವೇದವ್ಯಾಸ ಕಾಮತ್ ಜನತೆಯಲ್ಲಿ ಗೊಂದಲ ಸೃಷ್ಟಿಸುವ ಕೆಲಸ ಮಾಡುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರ ಅಧಿಕಾರ ವಹಿಸಿಕೊಂಡ ಸಮಯದಿಂದ ಅಭಿವೃದ್ಧಿ ವಿಷಯ ಬಗ್ಗೆ ಯಾವುದೇ ಚಕಾರ ಎತ್ತದೆ, ಸುಖಾಸಮ್ಮನ್ನೆ ಆರೋಪ ಮಾಡುತ್ತಿದ್ದಾರೆ. ಇನ್ನೇನು ಮಳೆಗಾಲ ಆರಂಭವಾಗಲಿದ್ದು, ಅವರದ್ದೇ ಬಿಜೆಪಿ ನೇತೃತ್ವದ ಸರ್ಕಾರದ ಅವಧಿಯಲ್ಲಿ ಮಾಡಿದ ಎಡವಟ್ಟಿನಿಂದ ನಗರದಲ್ಲಿ ಪ್ರವಾಹ ಭೀತಿ ಎದುರಾಗಿದೆ. ಈ ಈ ಬಗ್ಗೆ ಮೊದಲು ಗಮನಹರಿಸಲಿ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಹೇಳಿದ್ದಾರೆ.
ಕಾಂಗ್ರೆಸ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ರಾಜ್ಯಾದ್ಯಂತ ಜನತೆ ಕೋಮು ಸಾಮರಸ್ಯದಿಂದ ಬದುಕುತ್ತಿದ್ದಾರೆ. ಕಾಂಗ್ರೆಸ್‌ಗೂ ಸಂಸ್ಕೃತಿ, ಸಂಸ್ಕಾರದ ಬಗ್ಗೆ ಅರಿವು ಇದೆ. ಬಿಜೆಪಿವರು ಭಾವನಾತ್ಮಕವಾಗಿ ಜನತೆಯನ್ನು ಮರುಳು ಮಾಡುವುದನ್ನು ಕೈಬಿಡಲಿ ಎಂದು ಅವರು ನುಡಿದಿದ್ದಾರೆ.
ಭಾವನಾತ್ಮಕ ಮಾತುಗಳ ಮೂಲಕ ಜನತೆಯಲ್ಲಿ ಸಂಘರ್ಷದ ವಾತಾವರಣ ಸೃಷ್ಟಿಸುವುದೇ ಬಿಜೆಪಿಯವರಿಗೆ ಚಾಲಿಯಾಗಿದೆ. ಆದರೆ ಈ ಭಾರಿ ನಿಮ್ಮ ನಾಟಕ ನಡೆಯುವುದಿಲ್ಲ. ಕಾಂಗ್ರೆಸ್ ಎಂದಿಗೂ ಬಡವರ ಪರವಾಗಿದ್ದು, ದೇಶದಲ್ಲೇ ಮಾದರಿಯಾಗಿ ರೂಪಿಸಿ, ಅಭಿವೃದ್ಧಿಯಲ್ಲೂ ನಂಬರ್ ವನ್ ರಾಜ್ಯವನ್ನಾಗಿಸುವ ಗುರಿಯನ್ನು ಹೊಂದಿದೆ ಎಂದು ಪದ್ಮರಾಜ್ ಹೇಳಿದ್ದಾರೆ.
ಶಾಸಕ ವೇದವ್ಯಾಸ ಕಾಮತ್‌ವರು ಅವರದೇ ಸರ್ಕಾರ ಅಧಿಕಾರದಲ್ಲಿದ್ದರೂ ಮಂಗಳೂರು ನಗರವನ್ನು ಅಭಿವೃದ್ಧಿ ಮಾಡುವಲ್ಲಿ ಎಡವಿದ್ದಾರೆ. ಕಳೆದ ಐದು ವರ್ಷವೂ ಕೇವಲ ಭಾವನಾತ್ಮಕ ವಿಷಯದ ಬಗ್ಗೆ ಮಾತನಾಡಿ ಜನತೆಯನ್ನು ಯಾಮಾರಿಸಿದ್ದಾರೆ. ನಗರದಾದ್ಯಂತ ನಡೆದ ಅವೈಜ್ಞಾನಿಕ ಕಾಮಗಾರಿಯಿಂದ ನಗರದಲ್ಲಿ ಕೃತಕ ನೆರೆ ಭೀತಿ ಸಾಧ್ಯತೆ ಇದೆ. ಈ ಬಗ್ಗೆ ಮೊದಲು ಗಮನಹರಿಸಿ ಕೆಲಸ ಮಾಡಲಿ ಎಂದು ಹೇಳಿಕೆಯೊಂದರಲ್ಲಿ ಪದ್ಮರಾಜ್ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು