1:20 AM Friday3 - May 2024
ಬ್ರೇಕಿಂಗ್ ನ್ಯೂಸ್
ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ… ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ…

ಇತ್ತೀಚಿನ ಸುದ್ದಿ

ಸರಕಾರಿ ಬಸ್ಸಿನಲ್ಲಿ ಹೆಣ್ಮಕ್ಕಳಿಗೆ ಫ್ರೀ ಕೊಟ್ಟಿರುವುದು ಖುಷಿ ಕೊಟ್ಟಿದೆ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

10/06/2023, 16:06

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಸರ್ಕಾರಿ ಬಸ್ಸಿನಲ್ಲಿ ಶೋಭಾ ಕರಂದ್ಲಾಜೆಗೂ ಫ್ರಿ ಎಂಬ ಕಾಂಗ್ರೆಸ್ ಹೇಳಿಕೆಗೆ ಕೇಂದ್ರ ಸಚಿವೆ
ಶೋಭಾ ಗರಂ ಆಗಿದ್ದಾರೆ. ಶೋಭಾನಿಗೂ ಫ್ರೀ ಅಂತ ಕಾಂಗ್ರೆಸ್ ದುರಾಂಕಾರದ ಮಾತನ್ನು ಹೇಳುತ್ತಿದೆ ಎಂದು ಅವರು ಹೇಳಿದರು.
ಚಿಕ್ಕಮಗಳೂರಿನಲ್ಲಿ ಶನಿವಾರ ಮಾಧ್ಯಮ ಜತೆ ಮಾತನಾಡಿದ ಅವರು,‌ ಬಸ್ಸಿನಲ್ಲಿ ಹೆಣ್ಮಕ್ಕಳಿಗೆ ಫ್ರೀ ಕೊಟ್ಟಿರುವುದು ಖುಷಿಯಾಗಿದೆ, ಒಳ್ಳೆಯದಾಗಲಿ‌.
ಪ್ರವಾಸ ಮಾಡಬಹುದು‌. ಬೇರೆ ಕಡೆ ಹೋಗಬಹುದು. ಅದ್ರೆ, ಶೋಭನಿಗೂ ಫ್ರೀ ಎಂಬ ದುರಾಂಕಾರದ ಮಾತನ್ನ ಕಾಂಗ್ರೆಸ್ ಹೇಳುತ್ತೆ.
ಇದಕ್ಕೆ ಜನನೇ ಉತ್ತರ ಕೊಡ್ತಾರೆ ನಾನೇನೂ ಹೇಳಲ್ಲ ಎಂದರು.
ಪಠ್ಯ ಪುಸ್ತಕದಲ್ಲಿ ನಮ್ಮ ಮಕ್ಕಳು ಏನು ಕಲಿಯಬೇಕೆಂದು ನಾವೇ ನಿರ್ಧಾರ ಮಾಡಬೇಕು.
ಅವರ ಬೆಳವಣಿಗೆ ಪ್ರಗತಿ, ಅಭ್ಯುದಯಕ್ಕೆ ಚರಿತ್ರೆ ತಿಳಿದುಕೊಳ್ಳಬೇಕು. ನಮ್ಮ ದೇಶವನ್ನು ತಿಳಿದುಕೊಳ್ಳಲು ಏನು ಕಲಿಸಬೇಕು ಅದೇ ಆಧಾರದಲ್ಲಿ ಕಲಿಸಬೇಕು. ಪಠ್ಯ ಪುಸ್ತಕ ಅನ್ನೋದು ಪಾರ್ಟಿ, ಜಾತಿ, ಧರ್ಮದ ವಿಚಾರವಲ್ಲ. ನಾವು ಸಂವಿಧಾನ್ಮಕವಾಗಿ ಏನನ್ನ ಒಪ್ಪಿಕೊಂಡಿದ್ದೇವೋ,
ಅದನ್ನೇ ಕಲಿಯುವಂತಹ ಅವಕಾಶವಾಗಬೇಕು ಎಂದು ಅವರು ನುಡಿದರು.

ಒಂದು ಸರ್ಕಾರ ಬಂದಾಗ ಒಂದು ಪಠ್ಯ, ಇನ್ನೊಂದು ಸರ್ಕಾರ ಬಂದಾಗ ಮತ್ತೊಂದು ಪಠ್ಯ ಸರಿಯಲ್ಲ.
ನಮ್ಮ ದೇಶ ಭಕ್ತರ, ನಮ್ಮ ಸ್ವಾತಂತ್ರ್ಯ ಹೋರಾಟಗಾರರ, ನಮ್ಮ ಸಂಸ್ಕೃತಿಯ ಬಗ್ಗೆ ಕಲಿಸುವ ಅನಿವಾರ್ಯತೆ ಇದೆ. ಈ ದೃಷ್ಟಿಯಿಂದ ರಾಜ್ಯ ಸರ್ಕಾರ ಯೋಚನೆ ಮಾಡಲಿ. ಕಾಂಗ್ರೆಸ್ ಪಠ್ಯ, ಬಿಜೆಪಿಯ ಪಠ್ಯ ಅನ್ನೋದಕ್ಕಿಂತ ಹೆಚ್ಚು ನಮ್ಮ ಮಕ್ಕಳು ಏನನ್ನ ಕಲಿಯಬೇಕು. ಮುಂದಿನ ಪೀಳಿಗೆ ಎಲ್ಲಿಗೆ ಹೋಗಬೇಕು, ಏನಾಗಬೇಕು ಇದರ ಆಧಾರದಲ್ಲಿ ಪಠ್ಯ ಕೊಡುವುದು ಒಳ್ಳೆಯದ್ದು ಎಂದು ಶೋಭಾ ಕರಂದ್ಲಾಜೆ ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು