4:51 PM Tuesday7 - May 2024
ಬ್ರೇಕಿಂಗ್ ನ್ಯೂಸ್
ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,… ಮಾಜಿ ಪ್ರಧಾನಿ ದೇವೇಗೌಡರಿಗೆ ನೀಡಿದ್ದ, ಸಂಸದ ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸನದ ಸರಕಾರಿ… ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು…

ಇತ್ತೀಚಿನ ಸುದ್ದಿ

ರಾಜ್ಯ ಬಿಜೆಪಿ ಬಿಕ್ಕಟ್ಟು ಶಮನ ಹೊಣೆಗಾರಿಕೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹೆಗಲಿಗೆ?: ರಾಜ್ಯಾಧ್ಯಕ್ಷರ ಬದಲಾವಣೆ ಕುರಿತೂ ಚರ್ಚೆ?

02/07/2023, 14:11

ಬೆಂಗಳೂರು (reporterkarnataka.com): ವಿಧಾನಸಭೆ ಚುನಾವಣೆ ಸೋಲಿನ ಬಳಿಕ ರಾಜ್ಯ ಬಿಜೆಪಿಯಲ್ಲಿ ಉದ್ಬವಿಸಿರುವ ಸಂಘರ್ಷವನ್ನು ಪರಿಹಾರಗೊಳಿಸುವ ನಿಟ್ಟಿನಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಬಿಜೆಪಿ ಹೈಕಮಾಂಡ್ ದೆಹಲಿಗೆ ಕರೆಸಿದ್ದು, ಪಕ್ಷದೊಳಗಿನ ಬಿಕ್ಕಟ್ಟು ಶಮನಗೊಳಿಸುವ ಹೊಣೆಗಾರಿಕೆಯನ್ನು ಅವರಿಗೆ ವಹಿಸುವ ಸಾಧ್ಯತೆಗಳಿವೆ.
ರಾಜ್ಯ ವಿಧಾನ ಮಂಡಲದ ಅಧಿವೇಶನ ನಾಳೆಯಿಂದ ಆರಂಭವಾಗಲಿದ್ದು, ವಿಧಾನಸಭೆ ಪ್ರತಿಪಕ್ಷದ ನಾಯಕನ ಆಯ್ಕೆ ಇನ್ನೂ ನಡೆದಿಲ್ಲ. ಪಕ್ಷದ ಸೋಲಿನ ಪರಾಮರ್ಶೆ ಸಭೆಯು ಪರಸ್ಪರ ಕಿತ್ತಾಟದ ಸಭೆಯಾಗಿ ಮಾರ್ಪಟ್ಟ ಹಿನ್ನೆಲೆಯಲ್ಲಿ ಇಷ್ಟರವರೆಗೆ ಮೌನವಾಗಿದ್ದ ಹೈಕಮಾಂಡ್ ಎಚ್ಚೆತ್ತುಕೊಂಡಿದೆ. ರಾಜ್ಯ ಬಿಜೆಪಿಯ ಹಿರಿಯ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ದೆಹಲಿಗೆ ಕರೆಸಿ ಮಾತುಕತೆಗೆ ಒಲವು ತೋರಿಸಿದೆ. ಯಡಿಯೂರಪ್ಪ ಇಲ್ಲದೆ ರಾಜ್ಯದಲ್ಲಿ ಬಿಜೆಪಿ ಅಸ್ತಿತ್ವ ಉಳಿಸಿಕೊಳ್ಳುವುದು ಕಷ್ಟ ಎಂಬುದನ್ನು ಹೈಕಮಾಂಡ್ ಗೆ ಮನವರಿಕೆಯಾಗಿದೆ ಎಂದು ಮೂಲಗಳು ತಿಳಿಸಿವೆ.
ಶಾಸಕಾಂಗ ಪಕ್ಷದ ನಾಯಕ ಮತ್ತು ಪಕ್ಷದ ರಾಜ್ಯಾಧ್ಯಕ್ಷ ವಿಚಾರದಲ್ಲಿ ತೀವ್ರಗೊಂಡಿರುವ ಭಿನ್ನಮತವನ್ನು ಶಮನಗೊಳಿಸುವ ನಿಟ್ಟಿನಲ್ಲಿ ಚರ್ಚಿಸಲು ಪಕ್ಷದ ವರಿಷ್ಠರು
ಯಡಿಯೂರಪ್ಪ ಅವರನ್ನು ದೆಹಲಿಗೆ ಕರೆಸಿದ್ದಾರೆ. ಯಡಿಯೂರಪ್ಪ ಅವರು ಪ್ರಧಾನಿ ನರೇಂದ್ರ ಮೋದಿ, ಪಕ್ಷದ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ ಹಾಗೂ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗುವ ಸಾಧ್ಯತೆಗಳಿವೆ. ರಾಜ್ಯ ಬಿಜೆಪಿಯಲ್ಲಿ ಉಂಟಾಗಿರುವ ಭಿನ್ನಮತವನ್ನು ಶಮನಗೊಳಿಸುವ ಹೊಣೆಯನ್ನು ಯಡಿಯೂರಪ್ಪ ಅವರಿಗೆ ವರಿಷ್ಠರು ವಹಿಸುವ ಸಾಧ್ಯತೆಗಳಿವೆ. ಪಕ್ಷದ ಹೈಕಮಾಂಡ್‌ ಕರೆದಿರುವ ಹಿನ್ನೆಲೆಯಲ್ಲಿ ಭಾನುವಾರ ದೆಹಲಿಗೆ ತೆರಳುತ್ತಿರುವ ಯಡಿಯೂರಪ್ಪ ಅವರು,
ಭಾನುವಾರ ದೆಹಲಿಯಲ್ಲೇ ಉಳಿದುಕೊಂಡು ಸೋಮವಾರ ಹಿಂತಿರುಗಲಿದ್ದಾರೆ. ಪಕ್ಷದ ಮೇಲೆ ಗಟ್ಟಿಯಾದ ಹಿಡಿತ ಹೊಂದಿರುವ ಯಡಿಯೂರಪ್ಪ ಮೂಲಕ ಅಸಮಾಧಾನಗೊಂಡ ನಾಯಕರನ್ನು ಸುಮ್ಮನಿರಿಸಲು ಬಿಜೆಪಿ ಹೈಕಮಾಂಡ್‌ ನಿರ್ಧರಿಸಿದೆ. ಸೋಮವಾರದಿಂದ ಹೊಸ ಸರ್ಕಾರದ ಮೊದಲ ಅಧಿವೇಶನ ಪ್ರಾರಂಭವಾಗುತ್ತಿದೆ. ಸದನದಲ್ಲಿ ಸರ್ಕಾರದ ವಿರುದ್ಧ ಟೀಕಾ-ಪ್ರಹಾರ ನಡೆಸುವ ಮತ್ತು ಪಕ್ಷವನ್ನು ಸದನದಲ್ಲಿ ಮುನ್ನಡೆಸುವ ಶಾಸಕಾಂಗ ಪಕ್ಷದ ನಾಯಕನ ಆಯ್ಕೆಯಾಗಿಲ್ಲ. ಅಲ್ಲದೇ, ರಾಜ್ಯಾಧ್ಯಕ್ಷರ ಬದಲಾವಣೆ ಕುರಿತು ಹೈಕಮಾಂಡ್ ಯಡಿಯೂರಪ್ಪ ಅವರ ಜತೆ ಚರ್ಚಿಸಲಿದೆ ಎಂಬ ಮಾಹಿತಿ ರಿಪೋರ್ಟರ್ ಕರ್ನಾಟಕಕ್ಕೆ ಲಭ್ಯವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು