4:16 PM Friday17 - May 2024
ಬ್ರೇಕಿಂಗ್ ನ್ಯೂಸ್
ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ… ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,…

ಇತ್ತೀಚಿನ ಸುದ್ದಿ

ಎನ್ ಸಿಸಿ: ಮಂಗಳೂರು ವಿವಿ ಕಾಲೇಜು ವಿದ್ಯಾರ್ಥಿನಿ ಗೌತಮಿ ಪೂಜಾರಿ ರಾಷ್ಟ್ರಮಟ್ಟದಲ್ಲಿ ಸಾಧನೆ

09/08/2023, 16:27

ಮಂಗಳೂರು(reporterkarnataka.com): ನಗರದ ಹಂಪನಕಟ್ಟೆಯ ವಿಶ್ವವಿದ್ಯಾನಿಲಯ ಕಾಲೇಜಿನ ದ್ವಿತೀಯ ಕಲಾ ಪದವಿಯ ವಿದ್ಯಾರ್ಥಿನಿ, ಎನ್‌.ಸಿ.ಸಿ ಭೂದಳದ ಗೌತಮಿ ಪೂಜಾರಿ ಕೇರಳದ ತಿರುವನಂತಪುರದಲ್ಲಿ ಜುಲೈ 1ರಿಂದ 15 ರವರೆಗೆ ನಡೆದ ಅಖಿಲ ಭಾರತ ಮಟ್ಟದ ಕ್ರೀಡಾ ಶೂಟಿಂಗ್‌ ಸ್ಪರ್ಧೆಯಲ್ಲಿ ಎನ್‌.ಸಿ.ಸಿ ಕರ್ನಾಟಕ ಮತ್ತು ಗೋವಾ ನಿರ್ದೇಶನಾಲಯವನ್ನು ಪ್ರತಿನಿಧಿಸಿದ್ದಾರೆ.


ಇವರು ಪ್ರತಿನಿಧಿಸಿದ ನಿರ್ದೇಶನಾಲಯವು ಇಂಟರ್‌ ಡೈರಕ್ಟರೇಟ್‌ ಸ್ಪೋರ್ಟ್ಸ್‌ ಶೂಟಿಂಗ್‌ ಕಾಂಪಿಟೀಶನ್‌ (IDSSC- 2023) ನಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿದೆ. ವಿಜೇತ ತಂಡವನ್ನು ಕರ್ನಾಟಕದ ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ ಇತ್ತೀಚೆಗೆ ರಾಜಭವನದಲ್ಲಿ ಅಭಿನಂದಿಸಿದರು. ಕಾಲೇಜಿನ ಕೀರ್ತಿಪತಾಕೆಯನ್ನು ಎತ್ತರಕ್ಕೇರಿಸಿದ ವಿದ್ಯಾರ್ಥಿನಿಗೆ ಆಡಳಿತ ಮಂಡಳಿ ಅಭಿನಂದನೆ ಸಲ್ಲಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು