7:39 PM Thursday23 - May 2024
ಬ್ರೇಕಿಂಗ್ ನ್ಯೂಸ್
ಕುಡುಕ ಪತಿಯಿಂದ ಪತ್ನಿಯ ಬರ್ಬರ ಹತ್ಯೆ: ಮಕ್ಕಳ ಕಣ್ಣೆದುರೇ ಸಲಾಕೆಯಿಂದ ಹೊಡೆದು ಕೊಲೆ… ಪೂರ್ವ ಮುಂಗಾರು: ದ.ಕ., ಉಡುಪಿ ಸಹಿತ ರಾಜ್ಯದ 7 ಜಿಲ್ಲೆಗಳಲ್ಲಿ ಭಾರೀ ಮಳೆ… ಪಡೀಲು ಸಮೀಪ ಬೈಕಿಗೆ ಡಿಕ್ಕಿ ಹೊಡೆದು ಸವಾರ ಸಹಿತ ದೂರಕ್ಕೆ ಎಳೆದೊಯ್ದ ಕಾರು:… ವಿಜಯಪುರ: ಚಾಕುವಿನಿಂದ ಇರಿದು, ಕಲ್ಲಿನಿಂದ ಜಜ್ಜಿ ಯುವಕನ ಅಮಾನುಷ ಹತ್ಯೆ; ಹಣಕಾಸಿನ ವ್ಯವಹಾರ… ವಿಧಾನ ಪರಿಷತ್ ಚುನಾವಣೆ: ಮೇ 20ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನ ನಟಿ ಪವಿತ್ರಾ ಜಯರಾಂ ಸ್ನೇಹಿತ ಚಂದ್ರಕಾಂತ್ ಆತ್ಮಹತ್ಯೆ: ಸ್ನೇಹಿತೆ ಸಾವನ್ನಪ್ಪಿ ವಾರದೊಳಗೆ ಚಂದ್ರು… ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ

ಇತ್ತೀಚಿನ ಸುದ್ದಿ

ಮಾಣಿಲ ದುರ್ಗಾಮಹಾಲಕ್ಷ್ಮಿ ಕ್ಷೇತ್ರದ ವರಮಹಾಲಕ್ಷ್ಮೀ ವ್ರತಾಚರಣೆ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

19/08/2023, 22:20

ಮಂಗಳೂರು(reporterlarnataka.com): ಮಾಣಿಲ ದುರ್ಗಾಮಹಾಲಕ್ಷ್ಮಿ ಕ್ಷೇತ್ರದಲ್ಲಿ ನಡೆಯಲಿರುವ ವರಮಹಾಲಕ್ಷ್ಮೀ ವ್ರತಾಚರಣೆ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ನಗರದ ಶಾರದಾ ಸಭಾಂಗಣದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಶನಿವಾರ ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಂಸದರು,
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಧಾರ್ಮಿಕ ನಂಬಿಕೆ ಹೊಂದಿರುವಂತಹ ಜಿಲ್ಲೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಮಳೆಗಾಲದಲ್ಲಿಯೂ ಕೂಡ ಇಂತಹ ಕಾರ್ಯಕ್ರಮ ಮಾಡಬಹುದು ಎಂಬುದಕ್ಕೆ ಈ ಕಾರ್ಯಕ್ರಮ ಸಾಕ್ಷಿ ಆಗಿದೆ ಎಂದು ಹೇಳಿದರು.

ಶ್ರೀಧಾಮ ಮಾಣಿಲದ ವರಮಹಾಲಕ್ಷ್ಮಿ ವ್ರತಾಚರಣೆಯ ಬೆಳ್ಳಿ ಮಹೋತ್ಸವದ ವಿಶೇಷ ಸಂಭ್ರಮದ ಸಮಾರಂಭ ಜಿಲ್ಲೆಯಲ್ಲಿ ಒಂದು ಕಾರ್ಯಕ್ರಮವಾಗಿ ಹೊರಹೊಮ್ಮಲಿದೆ. ಮಾಣಿಲ ಕ್ಷೇತ್ರ ಹಾಗೂ ಸ್ವಾಮೀಜಿ ಕರ್ಮಯೋಗಿ, ಇದೊಂದು ವಿಶಿಷ್ಟ ಮಹೋತ್ಸವವಾಗಿದೆ. ಮಾಣಿಲ ಸ್ವಾಮೀಜಿ ಸಾಮಾಜಿಕ ಕಳಕಳಿ ಹೊಂದಿದವರು. ಅವರ ಕರ್ಮಯೋಗಿ ಆಗಿದ್ದಾರೆ. ಹಿಂದೂ ಸಮಾಜದ ಎಲ್ಲ ಕಾರ್ಯಗಳಿಗೆ ಗಟ್ಟಿಯಾಗಿ ನಿಲ್ಲುವಂತಹ ಸ್ವಾಮೀಜಿ ಆಗಿದ್ದಾರೆ ಎಂದರು.
ಈ ಕಾರ್ಯಕ್ರಮದ ಜನರಿಗೆ ಮಹತ್ವ ತಿಳಿಸುವ ಕೆಲಸ ಆಗಬೇಕು. ಜನರನ್ನು ಈ ಕಾರ್ಯಕ್ರಮ ಆಕರ್ಷಿಸುವ ಕೆಲಸ ಆಗಬೇಕು. ಈಗಾಗಲೇ ಈ ಕಾರ್ಯಕ್ರಮಕ್ಕೆ ಹಲವಾರು ತಯಾರಿಗಳು, ಸಮಿತಿ ರಚನೆ ಕಾರ್ಯ ಮೋನಪ್ಪ ಭಂಡಾರಿ ಅವರ ನೇತೃತ್ವದಲ್ಲಿ ನಡೆಯುತ್ತಿದೆ. ಇದೇ 24 ರಿಂದ 27ವರಿಗೆ ನಡೆಯುವ ಸಾಮಾಜಿಕ ಕಾರ್ಯಗಳಿಗೆ ನಾವು ಜತೆಯಾಗಿ ನಿಲ್ಲಬೇಕು. ಸ್ವಾಮೀಜಿ ಅವರ ಪರವಾಗಿ ನಾವೇ ಆಮಂತ್ರಣ ಪತ್ರಿಕೆ ಹಂಚುವ ಕೆಲಸ ಮಾಡಬೇಕು ಎಂದು ಹೇಳಿದರು.
ಇದೇ ಮೊದಲ ಬಾರಿಗೆ ಮಳೆಗಾಲದಲ್ಲಿಯೂ ಇಂತಹ ದೊಡ್ಡ ಪ್ರಮಾಣದ ಕಾರ್ಯಕ್ರಮಗಳನ್ನು ನಡೆಸುತ್ತಿದೆ. ಶ್ರೀಧಾಮಕ್ಕೆ ಇಂತಹ ಕಾರ್ಯಕ್ರಮಕ್ಕೆ ಹೆಚ್ಚು ಜನರು ಬರುತ್ತಾರೆ ಎನ್ನುವ ವಿಶ್ವಾಸ ಇದೆ. ಎಲ್ಲರೂ ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಪಾವನ ಆಗಬೇಕು ಎಂದು ಕರೆ ನೀಡಿದರು.
ಮಾಣಿಲ ದುರ್ಗಾಮಹಾಲಕ್ಷ್ಮಿ ಕ್ಷೇತ್ರದಲ್ಲಿ ನಡೆಯಲಿರುವ ವರಮಹಾಲಕ್ಷ್ಮೀ ವ್ರತಾಚರಣೆ ಕಾರ್ಯಕ್ರಮದ ಅಧ್ಯಕ್ಷ ಮೋನಪ್ಪ ಭಂಡಾರಿ ಅವರು ಕಾರ್ಯಕ್ರಮದ ರೂಪರೇಷಗಳ ಕುರಿತು ಮಾಹಿತಿ ನೀಡಿದರು.
ಕಲ್ಕೂರು ಪ್ರತಿಷ್ಠಾನದ ಪ್ರದೀಪ್ ಕುಮಾರ್ ಕಲ್ಕೂರ್, ಶಾರದಾ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ. ಎಂ.ಬಿ. ಪುರಾಣಿಕ್, ಉಪಮೇಯರ್ ಪೂರ್ಣಿಮಾ, ಪಾಲಿಕೆ ಸದಸ್ಯ ಸುಧೀರ್ ಶೆಟ್ಟಿ, ಮಾಜಿ ಮೇಯರ್ ಪ್ರೇಮಾನಂದ ಶೆಟ್ಟಿ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸುದರ್ಶನ ಮೂಡುಬಿದಿರೆ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು