1:21 PM Sunday5 - May 2024
ಬ್ರೇಕಿಂಗ್ ನ್ಯೂಸ್
ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ… ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ…

ಇತ್ತೀಚಿನ ಸುದ್ದಿ

ಪಿಯು ಕಾಲೇಜು ಉಪನ್ಯಾಸಕರ ರೋವರ್ ಮತ್ತು ರೇಂಜರ್ ಮಾಹಿತಿ ಕಾರ್ಯಾಗಾರ

19/08/2023, 10:50

ಮಂಗಳೂರು(reporterkarnataka.com): ಪಠ್ಯ ಚಟುವಟಿಕೆಗಳೊಂದಿಗೆ, ಪಠ್ಯೇತರ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳನ್ನು ತೊಡಗಿಸಿಕೊಳ್ಳಲು ಪ್ರೇರೇಪಿಸುವಲ್ಲಿ ಭಾರತ್ ಸ್ಕೌಟ್ಸ್ – ಗೈಡ್ಸ್ ನ ರೋವರ್ ಮತ್ತು ರೇಂಜರ್ ವಿಭಾಗ ಅವಕಾಶ ಕಲ್ಪಿಸುತ್ತದೆ, ಆದ ಕಾರಣ ತಾವೆಲ್ಲರೂ ತಮ್ಮ ವಿದ್ಯಾರ್ಥಿಗಳನ್ನು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಕೊಳ್ಳುವಂತೆ ಪ್ರೇರೇಪಿಸಬೇಕೆಂದು ಭಾರತ್ ಸ್ಕೌಟ್ಸ್ – ಗೈಡ್ಸ್ ನ ರಾಜ್ಯ ಮುಖ್ಯ ಆಯುಕ್ತ ಪಿ. ಜಿ. ಆರ್. ಸಿಂಧ್ಯ ಕರೆ ನೀಡಿದರು.

ಅವರು ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ), ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆಯ ಸಹಭಾಗಿತ್ವದಲ್ಲಿ ಲಾಲ್ ಬಾಗ್ ನಲ್ಲಿರುವ ಜಿಲ್ಲಾ ಸ್ಕೌಟ್ಸ್ ಮತ್ತು ಗೈಡ್ಸ್ ಭವನದಲ್ಲಿ ಜಿಲ್ಲೆಯ ಸರ್ಕಾರಿ, ಅನುದಾನಿತ, ಅನುದಾನರಹಿತ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ, ಉಪನ್ಯಾಸಕಿಯರುಗಳ ರೋವರ್ ಮತ್ತು ರೇಂಜರ್ ಮಾಹಿತಿ ಕಾರ್ಯಗಾರದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಅವರು ಜಿಲ್ಲೆಯ ಸಾಧನೆಯ ಬಗ್ಗೆ ಶ್ಲಾಘಿಸಿದರು.
ಕಾರ್ಯಕ್ರಮ ಉದ್ಘಾಟಿಸಿದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್ ಕೆ ಅವರು ಮಾತನಾಡಿ, ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯು ಹಲವು ಕಾರ್ಯದಲ್ಲಿ ತೊಡಗಿಕೊಂಡಿರುವ ಸೇವಾ ಸಂಸ್ಥೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಘಟಿಸುವ ಸೇವಾ ಚಟುವಟಿಕೆಗಳು ಹಾಗೂ ಕಾರ್ಯಕ್ರಮಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಸೇವಾ ಮನೋಭಾವವನ್ನು ಬೆಳೆಸುವಲ್ಲಿ ಉಪನ್ಯಾಸಕರು ಶ್ರಮವಹಿಸಬೇಕೆಂದರು.
ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಸಿ.ಡಿ. ಜಯಣ್ಣ,ಪದವಿಪೂರ್ವ ಕಾಲೇಜು ಪ್ರಾಂಶುಪಾಲರ ಸಂಘದ ಜಿಲ್ಲಾಧ್ಯಕ್ಷ ಕೆ.ಎನ್. ಗಂಗಾಧರ್ ಆಳ್ವ, ರಾಜ್ಯ ಸಂಘಟನಾ ಆಯುಕ್ತ ಎಂ. ಪ್ರಭಾಕರ್ ಭಟ್, ರಾಜ್ಯ ರೆಂಜರಿಂಗ್ ಮೇಲ್ವಿಚಾರಕರು ಹಾಗೂ ಸಹಾಯಕ ರಾಜ್ಯ ಸಂಘಟನಾ ಆಯುಕ್ತರಾದ ಮಲ್ಲೇಶ್ವರಿ ಜುಜಾರೆ, ಜಿಲ್ಲಾ ಸಂಸ್ಥೆಯ ಉಪಾಧ್ಯಕ್ಷರಾದ ವಿಮಲಾ ರಂಗಯ್ಯ,ಜಿಲ್ಲಾ ಸ್ಕೌಟ್ ಆಯುಕ್ತರಾದ ರಾಮಶೇಷ ಶೆಟ್ಟಿ,ಜಿಲ್ಲಾ ಗೈಡ್ ಆಯುಕ್ತೆ ಜಯವಂತಿ ಸೋನ್ಸ್,ಜಿಲ್ಲಾ ಕಾರ್ಯದರ್ಶಿ ಎಂ ಜಿ ಕಜೆ, ಜಿಲ್ಲಾ ಕೋಶಾಧಿಕಾರಿ ಅನಿಲ್ ಕುಮಾರ್,ರಾಜ್ಯ ಸಹಾಯಕ ಸಂಘಟನಾ ಆಯುಕ್ತರು ಭರತ್ ರಾಜ್ ಕೆ,ಜಿಲ್ಲಾ ಸಂಘಟನಾ ಆಯುಕ್ತರು ಶಾಂತರಾಮ ಪ್ರಭು,ಶಿಬಿರ ನಾಯಕರು ಗುರುಮೂರ್ತಿ ನಾಯ್ಕಪು ಸೇರಿದಂತೆ ಹಲವರು ವೇದಿಕೆಯಲ್ಲಿದ್ದರು.
ಕಾರ್ಯಾಗಾರದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ 125 ಕ್ಕೂ ಅಧಿಕ ಪದವಿ ಪೂರ್ವ ಕಾಲೇಜಿನಿಂದ 77 ಉಪನ್ಯಾಸಕರು, 117 ಉಪನ್ಯಾಸಕಿಯರು ಒಟ್ಟು 194 ಶಿಬಿರಾರ್ಥಿಗಳು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು