12:04 AM Monday6 - May 2024
ಬ್ರೇಕಿಂಗ್ ನ್ಯೂಸ್
ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,… ಮಾಜಿ ಪ್ರಧಾನಿ ದೇವೇಗೌಡರಿಗೆ ನೀಡಿದ್ದ, ಸಂಸದ ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸನದ ಸರಕಾರಿ… ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು…

ಇತ್ತೀಚಿನ ಸುದ್ದಿ

ಸಿಸಿಬಿ ಕಾರ್ಯಾಚರಣೆ: ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಓರ್ವನ ಸೆರೆ; 2.17 ಲಕ್ಷ ಮೌಲ್ಯದ ಸೊತ್ತು ವಶ

12/09/2023, 23:21

ಮಂಗಳೂರು(reporterkarnataka.com):ಡ್ರಗ್ಸ್ ಫ್ರಿ ಮಂಗಳೂರು ಮಾಡುವ ನಿಟ್ಟಿನಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಮುಂದುವರಿಸಿದ ಕಾರ್ಯಾಚರಣೆಯಲ್ಲಿ ಮಂಗಳೂರು ನಗರದಾದ್ಯಂತ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾದಕ ವಸ್ತುವಾದ ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ದಸ್ತಗಿರಿ ಮಾಡಲಾಗಿದೆ.
ಉಳ್ಳಾಲ ಮುಕ್ಕಚೇರಿ ಒಂಭತ್ತುಕೆರೆ ನಿವಾಸಿ ಅಬ್ದುಲ್ ಸವಾಜ್ ಅಲಿಯಾಸ್ ಚವ್ವಾ(30) ಬಂಧಿತ ಆರೋಪಿ.
ಈತ ಮಂಗಳೂರು ನಗರದ ಹೊರವಲಯದ ಉಳ್ಳಾಲ ಒಂಬತ್ತು ಕರೆ ಪರಿಸರದಲ್ಲಿ ದ್ವಿಚಕ್ರ ವಾಹನವೊಂದರಲ್ಲಿ ಅಕ್ರಮವಾಗಿ ಮಾದಕ ವಸ್ತುವಾದ ಎಂಡಿಎಂಎ ಮಾದಕ ವಸ್ತುವನ್ನು ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಬಂಧಿತನಿಂದ ಒಟ್ಟು 25 ಗ್ರಾಂ ತೂಕದ 1.25 ಲಕ್ಷ ರೂ. ಮೌಲ್ಯದ ಎಂಡಿಎಂಎ ಮಾದಕ ವಸ್ತು, ಹೊಂಡಾ ಅಕ್ಟಿವಾ ಸ್ಕೂಟರ್, ಮೊಬೈಲ್ ಫೋನ್-1, ನಗದು 2120 ರೂ. ಡಿಜಿಟಲ್ ತೂಕ ಮಾಪನವನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ ರೂ 2,17,000/-ಆಗಬಹುದು. ಆರೋಪಿ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಈ ಮಾದಕ ವಸ್ತು ಮಾರಾಟ ಪ್ರಕರಣದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಪತ್ತೆ ಕಾರ್ಯ ಮುಂದುವರಿದಿದೆ.
ಈ ಮಾದಕ ವಸ್ತು ಮಾರಾಟ ಜಾಲದ ಪತ್ತೆ ಕಾರ್ಯವನ್ನು ಮಂಗಳೂರು ಪೊಲೀಸ್ ಆಯುಕ್ತರವರಾದ ಅನುಪಮ್ ಅಗರ್ ವಾಲ್ ಅವರ ಮಾರ್ಗದರ್ಶನದಲ್ಲಿ ಸಿಸಿಬಿ ಘಟಕದ ಅಧಿಕಾರಿ ಹಾಗೂ ಸಿಬ್ಬಂದಿಯವರು ನಡೆಸಿರುತ್ತಾರೆ.

ಇತ್ತೀಚಿನ ಸುದ್ದಿ

ಜಾಹೀರಾತು