ಇತ್ತೀಚಿನ ಸುದ್ದಿ
ದ.ಕ., ಉಡುಪಿ ಸೇರಿ ಕರಾವಳಿ ಜಿಲ್ಲೆಯಲ್ಲಿ 3 ದಿನ ಭಾರಿ ಮಳೆ: ಯೆಲ್ಲೋ ಅಲರ್ಟ್ ಘೋಷಣೆ
16/09/2023, 21:30

ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲೆ ಸೇರಿ ಕರಾವಳಿಯಲ್ಲಿ ಮುಂದಿನ 3 ದಿನ ಭಾರೀ ಮಳೆಯಾಗಲಿದ್ದು, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಗುಡುಗು ಸಹಿತ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕೊಡಗು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 21ರವರೆಗೂ ಮಳೆ ಮುಂದುವರೆಯಲಿದ್ದು, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು ಮಳೆಯಾಗಲಿದೆ.