8:48 AM Sunday19 - May 2024
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ: ಮೇ 20ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನ ನಟಿ ಪವಿತ್ರಾ ಜಯರಾಂ ಸ್ನೇಹಿತ ಚಂದ್ರಕಾಂತ್ ಆತ್ಮಹತ್ಯೆ: ಸ್ನೇಹಿತೆ ಸಾವನ್ನಪ್ಪಿ ವಾರದೊಳಗೆ ಚಂದ್ರು… ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ…

ಇತ್ತೀಚಿನ ಸುದ್ದಿ

ಸಿಸಿಬಿ ಕಾರ್ಯಾಚರಣೆ: ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಇಬ್ಬರ ಸೆರೆ; 1.75 ಲಕ್ಷ ಮೌಲ್ಯದ ಡ್ರಗ್ಸ್ ವಶ

22/09/2023, 20:16

ಮಂಗಳೂರು (reporterkarnataka.com):
“ಡ್ರಗ್ಸ್ ಫ್ರಿ ಮಂಗಳೂರು” ಮಾಡುವ ನಿಟ್ಟಿನಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಮುಂದುವರಿಸಿದ ಕಾರ್ಯಾಚರಣೆಯಲ್ಲಿ ನಗರದಾದ್ಯಂತ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರನ್ನು ದಸ್ತಗಿರಿ ಮಾಡಲಾಗಿದೆ.
ಬಂಧಿತರನ್ನು ಉಪ್ಪಿನಂಗಡಿ ತೆಕ್ಕಾರು ನಿವಾಸಿ
ಪಿ.ಎಸ್. ಅಬ್ದುಲ್ ಅಜೀಜ್ @ ಅಜೀಜ್(31) ಹಾಗೂ ಸುರತ್ಕಲ್ ಕಾಟಿಪಳ್ಳದ ನಿವಾಸಿ ಅಕ್ಷಿತ್ ಕುಮಾರ್(26) ಎಂದು ಗುರುತಿಸಲಾಗಿದೆ. ಬಂಧಿತರಿಂದ ಒಟ್ಟು 35 ಗ್ರಾಂ ತೂಕದ ರೂ. 1,75,000/-ಮೌಲ್ಯದ ಎಂಡಿಎಂಎ ಮಾದಕ ವಸ್ತು, ಮೊಬೈಲ್ ಫೋನ್ ಗಳು-2, ನಗದು ರೂ. 600/- ಡಿಜಿಟಲ್ ತೂಕ ಮಾಪನವನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ ರೂ 1,96,000 ಎಂದು ಅಂದಾಜಿಸಲಾಗಿದೆ. ಆರೋಪಿಗಳ ವಿರುದ್ಧ ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಈ ಮಾದಕ ವಸ್ತು ಮಾರಾಟ ಪ್ರಕರಣದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಪತ್ತೆ ಕಾರ್ಯ ಮುಂದುವರಿದಿದೆ.
ಆರೋಪಿಗಳ ಪೈಕಿ ಅಬ್ದುಲ್ ಅಜೀಜ್ ಯಾನೆ ಅಜೀಜ್ ಎಂಬಾತನ ವಿರುದ್ಧ ಈ ಹಿಂದೆ ಉಪ್ಪಿನಂಗಡಿ, ವಿಟ್ಲ ಹಾಗೂ ಉರ್ವಾ ಪೊಲೀಸ್ ಠಾಣೆಯಲ್ಲಿ ಮಾದಕ ವಸ್ತು ಮಾರಾಟಕ್ಕೆ ಸಂಬಂಧಿಸಿದ ಮೂರು ಪ್ರಕರಣ ದಾಖಲಾಗಿರುತ್ತದೆ. ಇತ್ತೀಚೆಗೆ ಸುಮಾರು 15 ದಿನಗಳ ಹಿಂದೆ ನ್ಯಾಯಾಲಯದಿಂದ ಜಾಮೀನು ಪಡೆದುಕೊಂಡು ಬಿಡುಗಡೆಗೊಂಡಿದ್ದ ಈತ ಮತ್ತೆ ಅದೇ ಮಾದಕ ವಸ್ತು ಮಾರಾಟ ದಂಧೆ ನಡೆಸುತ್ತಿದ್ದನು.
ಈ ಮಾದಕ ವಸ್ತು ಮಾರಾಟ ಜಾಲದ ಪತ್ತೆ ಕಾರ್ಯವನ್ನು ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ ವಾಲ್ ಅವರ ಮಾರ್ಗದರ್ಶನದಲ್ಲಿ ಸಿಸಿಬಿ ಘಟಕದ ಅಧಿಕಾರಿ ಮತ್ತು ಸಿಬ್ಬಂದಿಯವರು ನಡೆಸಿರುತ್ತಾರೆ.

ಇತ್ತೀಚಿನ ಸುದ್ದಿ

ಜಾಹೀರಾತು