1:08 AM Saturday27 - April 2024
ಬ್ರೇಕಿಂಗ್ ನ್ಯೂಸ್
1.20 ಲಕ್ಷ ಮತಗಳ ಅಂತರದಿಂದ ಗೆಲುವು: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ… ಪ್ರಧಾನಿ ಮೋದಿ ಏ.28ರಂದು ಶಿರಸಿಗೆ: ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಪರ… ಸುಪ್ರೀಂ ಕೋರ್ಟ್ ಸೂಚಿಸಿದ ಬಳಿಕ ಕೊನೆಗೂ ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ಮಾಡಿದ… ಚಳ್ಳಕೆರೆ ತಾಲೂಕಿನಲ್ಲಿ ಶಾಂತಿಯುತ ಮತದಾನ: ಚುನಾವಣೆ ಕರ್ತವ್ಯನಿರತ ಮಹಿಳಾ ಸಿಬ್ಬಂದಿ ಸಾವು ನಂಜನಗೂಡಿನಲ್ಲಿ ಶಾಂತಿಯುತ ಚುನಾವಣೆ: ಸಂಜೆ 4ಕ್ಕೆ ಸುಮಾರು ಶೇ.65 ಮತದಾನ ಸ್ಪೀಕರ್ ಖಾದರ್ ಆಪ್ತ ಸಹಾಯಕ ಮಹಮ್ಮದ್ ಲಿಬ್ಝೆತ್ ಮತದಾನ ; ಪದ್ಮರಾಜ್ ಗೆಲುವಿನ… ಜನಾರ್ದನ ಪೂಜಾರಿ ಮಾದರಿಯಲ್ಲಿ ಪದ್ಮರಾಜ್ ಪೂಜಾರಿ ಅಭಿವೃದ್ಧಿಯ ಹರಿಕಾರ ಆಗಲಿದ್ದಾರೆ: ಲಿಬ್‌ಝಿತ್ ಅಭಿಮತ ನೈಟ್ ಸರ್ವಿಸ್ ಬಸ್ಸಿನಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಆರೋಪಿ ಬೆಳ್ತಂಗಡಿ ನಿವಾಸಿಯ ಬಂಧನ ರಾಜ್ಯದ 14 ಕ್ಷೇತ್ರಗಳಲ್ಲಿ ನಾಳೆ ಮೊದಲ ಹಂತದ ಚುನಾವಣೆ: ಕರಾವಳಿಯಲ್ಲಿ ಸಕಲ ಸಿದ್ದತೆ;… ನಂಜನಗೂಡಿನ ಮಸ್ಟರಿಂಗ್ ಕೇಂದ್ರಕ್ಕೆ ಜಿಲ್ಲಾಧಿಕಾರಿ ಭೇಟಿ: ಮತಗಟ್ಟೆಯ ಅಧಿಕಾರಿಗಳಿಗೆ ಪಾಠ; ಜಾಗೃತಿಯಾಗಿ ಕರ್ತವ್ಯ…

ಇತ್ತೀಚಿನ ಸುದ್ದಿ

ಎನ್ ಡಿಎ ತೆಕ್ಕೆಗೆ ದೇವೇಗೌಡರ ಜೆಡಿಎಸ್ ಸೇರ್ಪಡೆ: ಲೋಕಸಭೆ ಚುನಾವಣೆಗೆ ಜಂಟೀ ಸ್ಪರ್ಧೆ

23/09/2023, 12:48

ಹೊಸದಿಲ್ಲಿ(reporterkarnataka.com): ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಎನ್ ಡಿಎ ಮೈತ್ರಿಕೂಟಕಕ್ಕೆ ಜಾತ್ಯತೀತ ಜನತಾ ದಳ ಸೇರ್ಪಡೆಗೊಂಡಿದೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಎಕ್ಸ್ (ಟ್ವಿಟರ್) ಖಾತೆಯಲ್ಲಿ ಟ್ವೀಟ್ ಮಾಡಿದ್ದಾರೆ. ಆ ಮೂಲಕ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಉಭಯ ಪಕ್ಷಗಳು ಜಂಟೀಯಾಗಿ ಸ್ಪರ್ಧಿಸಲಿದೆ.
ಬಿಜೆಪಿ ಜತೆಗೆ ಸಖ್ಯ ನಡೆಸುವ ಕುರಿತು ದೆಹಲಿಗೆ ತೆರಳಿದ್ದ ಜನತಾ ದಳ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು.
ದೆಹಲಿಯಲ್ಲಿರುವ ಗೃಹ ಸಚಿವರ ನಿವಾಸದಲ್ಲಿ ಮಹತ್ವದ ಮಾತುಕತೆ ನಡೆಸಲಾಯಿತು. ಗೋವಾದ ಮುಖ್ಯಮಂತ್ರಿ ಪ್ರಮೋದ್ ಸಾವಂತ್, ಜನತಾ ದಳ ಹಿರಿಯ ಮುಖಂಡರು ಕುಪೇಂದ್ರ ರೆಡ್ಡಿ ಅವರು, ಪಕ್ಷದ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ
ಅವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು