4:17 PM Sunday19 - May 2024
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ: ಮೇ 20ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನ ನಟಿ ಪವಿತ್ರಾ ಜಯರಾಂ ಸ್ನೇಹಿತ ಚಂದ್ರಕಾಂತ್ ಆತ್ಮಹತ್ಯೆ: ಸ್ನೇಹಿತೆ ಸಾವನ್ನಪ್ಪಿ ವಾರದೊಳಗೆ ಚಂದ್ರು… ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ…

ಇತ್ತೀಚಿನ ಸುದ್ದಿ

2 ಜಿಲ್ಲೆಗಳ ಹೊರತುಪಡಿಸಿ ರಾಜ್ಯಾದ್ಯಂತ ಏಕಕಾಲದಲ್ಲಿ ಜನತಾ ದರ್ಶನ: ಒಟ್ಟು 6684 ಅಹವಾಲು ಸ್ವೀಕಾರ; ಹಾವೇರಿಯಲ್ಲಿ ಅತ್ಯಧಿಕ

25/09/2023, 21:10

ಬೆಂಗಳೂರು(reporterkarnataka.com): ರಾಜ್ಯಾದ್ಯಂತ ಏಕ‌ಕಾಲಕ್ಕೆ ಎಲ್ಲ ಜಿಲ್ಲೆಗಳಲ್ಲಿ ನಡೆದ ಜನತಾ ದರ್ಶನಕ್ಕೆ ಸಾರ್ವಜನಿಕರು ಮತ್ತು ಅಧಿಕಾರಿಗಳಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದ್ದು, ರಾಜ್ಯಾದ್ಯಂತ 6684 ಅಹವಾಲು ಮತ್ತು ಮನವಿಗಳು ಸ್ವೀಕೃತಗೊಂಡು 21 ಅಹವಾಲುಗಳಿಗೆ ಸ್ಥಳದಲ್ಲೇ ಪರಿಹಾರ ಒದಗಿಸಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆಯಂತೆ ಮೊಟ್ಟ ಮೊದಲ ಬಾರಿಗೆ ರಾಜ್ಯಾದ್ಯಂತ ಜನತಾ ದರ್ಶನ ನಡೆದಿದೆ.
ಹಾವೇರಿ ಜಿಲ್ಲೆಯಲ್ಲಿ ಅತಿ ಹೆಚ್ಚು ಅಹವಾಲುಗಳು ದಾಖಲಾಗಿವೆ. ಹಾವೇರಿ ಜಿಲ್ಲೆಯಲ್ಲಿ ಬೆಳೆ ಹಾನಿ ಪರಿಹಾರದ ಸಂಬಂಧ ಸಾವಿರಾರು ಅರ್ಜಿಗಳು ಬಂದಿವೆ. ಸ್ವೀಕರಿಸುವ ವೇಳೆ ಕೆಲವು ಅನಾನುಕೂಲಗಳು ಸಂಭವಿಸಿದ್ದರಿಂದ ಅವುಗಳನ್ನೂ upload ಮಾಡಲು ಸಾಧ್ಯವಾಗಿಲ್ಲ.
774 ಅಹವಾಲುಗಳ ಮೂಲಕ ಹಾವೇರಿ ಜಿಲ್ಲೆ ಮೊದಲ ಸ್ಥಾನದಲ್ಲಿದ್ದರೆ, 432 ಅಹವಾಲುಗಳ ಮೂಲಕ ಹಾಸನ ಎರಡನೇ ಸ್ಥಾನದಲ್ಲಿ, 423 ಅಹವಾಲುಗಳ ಮೂಲಕ ಕೋಲಾರ ಜಿಲ್ಲೆ ಮೂರನೇ ಸ್ಥಾನದಲ್ಲಿದೆ.
ಅನಿವಾರ್ಯ ಕಾರಣಗಳಿಂದ ಗದಗ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಇಂದು ಜನತಾ ದರ್ಶನ ನಡೆಯಲಿಲ್ಲ. ಬೆಳಗಾವಿಯಲ್ಲಿ ನಾಳೆ (ಸೆ 26 ರ ಮಂಗಳವಾರ) ನಡೆಯಲಿದೆ
ರಾಜ್ಯಾದ್ಯಂತ 6684 ಅಹವಾಲು ಮತ್ತು ಮನವಿಗಳು ಸ್ವೀಕೃತಗೊಂಡು 21ಕ್ಕೆ ಸ್ಥಳದಲ್ಲೇ ಪರಿಹಾರ ಒದಗಿಸಲಾಗಿದೆ. ಉಳಿದಂತೆ 6663 ಅರ್ಜಿ, ಅಹವಾಲುಗಳು ದಾಖಲಾಗಿ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ರವಾನಿಯಾಗಿವೆ. (ಇದರಲ್ಲಿ ಮೌಖಿಕ ದೂರುಗಳು ಮತ್ತು ಪರಿಹಾರಗಳು ದಾಖಲಾಗಿಲ್ಲ).
ಸ್ವೀಕರಿಸಲಾಗಿರುವ ಅಹವಾಲುಗಳಲ್ಲಿ ಕಂದಾಯ ಇಲಾಖೆಯದ್ದೇ ಸಿಂಹಪಾಲು ಆಗಿವೆ. ಸಂಜೆ 6 ಗಂಟೆವರೆಗೂ ಸಿಕ್ಕಿರುವ ಅಂಕಿ ಅಂಶಗಳ ಪ್ರಕಾರ 2100 ಕ್ಕೂ ಹೆಚ್ಚು ಅಹವಾಲುಗಳು ಕಂದಾಯ ಇಲಾಖೆಗೆ ಸೇರಿದ್ದಾಗಿವೆ. ನಂತರದ ಸ್ಥಾನದಲ್ಲಿ ಗ್ರಾಮೀಣಾಭಿವೃದ್ಧಿ ಇಲಾಖೆಗೆ ಸೇರಿದ್ದಾಗಿದ್ದ ಸಾವಿರಕ್ಕೂ ಅಧಿಕ ಅಹವಾಲುಗಳು ಈ ಇಲಾಖೆಗೆ ಸಂಬಂಧಿಸಿದ್ದಾಗಿವೆ. ಮೂರನೇ ಅತಿ ಹೆಚ್ಚು ಅಹವಾಲುಗಳು ನಗರಾಡಳಿತಕ್ಕೆ ಸಂಬಂಧಿಸಿದ್ದಾಗಿವೆ.
ಜಿಲ್ಲಾಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಎದುರಿಗೆ ಅತಿ ಹೆಚ್ಚು ಸಮಸ್ಯೆಗಳು ಮತ್ತು ಅಹವಾಲುಗಳು ಸಲ್ಲಿಕೆಯಾಗಿವೆ. ಉಳಿದಂತೆ ಜಿಲ್ಲಾಧಿಕಾರಿಗಳ ಮುಂದೆ ಸಲ್ಲಿಕೆಯಾದವುಗಳಾಗಿವೆ. ಜಿಲ್ಲಾ ರಕ್ಷಣಾಧಿಗಳ ಎದುರಿಗೆ ಕೆಲವು ಜಿಲ್ಲೆಗಳನ್ನು ಹೊರತು ಪಡಿಸಿದರೆ ಹೆಚ್ಚಿನ‌ ಕಡೆ ಅತಿ ಕಡಿಮೆ ಅಹವಾಲುಗಳು ಸಲ್ಲಿಕೆ ಆಗಿರುವುದು ಆಶ್ಚರ್ಯದ ಜತೆಗೆ ವಿಶ್ಲೇಷಣೆ ಮಾಡಬೇಕಾದ ಸಂಗತಿಯಾಗಿದೆ.
ಒಟ್ಟು ಅರ್ಜಿ ರೂಪದಲ್ಲಿ ಬಂದ ಅಹವಾಲುಗಳನ್ನು ದಾಖಲಿಸಿಕೊಳ್ಳುವ ಮತ್ತು ಸ್ಥಳದಲ್ಲೇ ಪರಿಹಾರಕ್ಕೆ ಪ್ರಯತ್ನಿಸುವ ಪ್ರಕ್ರಿಯೆ ಒಂದು ಕಡೆ ನಡೆದಿದೆ. ಮತ್ತೊಂದು ಕಡೆ ಅರ್ಜಿ ಇಲ್ಲದೆ ಮೌಖಿಕವಾಗಿ ಬಂದ ಅಹವಾಲುಗಳನ್ನೂ ದಾಖಲಿಸಿಕೊಳ್ಳುವ ಜತೆಗೆ ಸ್ಥಳದಲ್ಲೇ ಪರಿಹಾರ ಒದಗಿಸಲಾಗಿದೆ.
ಮೌಖಿಕವಾಗಿ ದೂರು ಕೊಡಲು ಬಂದವರನ್ನು ಕುಳ್ಳಿರಿಸಿ ಅಧಿಕಾರಿ ಮತ್ತು ಸಿಬ್ಬಂದಿಯೇ ಅಹವಾಲುಗಳನ್ನು ಬರೆದು, ಬಳಿಕ ಅದನ್ನು ಓದಿಹೇಳಿ ಅರ್ಜಿದಾರರಿಂದ ಸಹಿ ಪಡೆದು ದಾಖಲಿಸಿಕೊಳ್ಳುವ ಪ್ರಯತ್ನಗಳೂ ನಡೆದಿವೆ.
ರಾಜ್ಯಾದ್ಯಂತ ಏಕ ಕಾಲಕ್ಕೆ ನಡೆಸಿದ ಜನತಾ ದರ್ಶನ ನಮಗೂ ಮೊದಲ ಅನುಭವ. ನಾವು ನಿರೀಕ್ಷಿಸಿದ್ದಕ್ಕಿಂತ ಹೆಚ್ಚಿನ ರೀತಿಯ ಪ್ರತಿಕ್ರಿಯೆ ಸಾರ್ವಜನಿಕರಿಂದ ಸಿಕ್ಕಿದೆ. ಅಧಿಕಾರಿಗಳ‌ ಸ್ಪಂದನೆ ಕೂಡ ಸಮಾಧಾನಕರವಾಗಿದೆ. ಇವತ್ತಿನ ಅನುಭವದ ಹಿನ್ನೆಲೆಯಲ್ಲಿ ಮುಂದಿನ‌ ಜನತಾ ದರ್ಶನದ ಗುಣಮಟ್ಟವನ್ನು ಇನ್ನಷ್ಟು ಹೆಚ್ಚಿಸುವ ಪ್ರಯತ್ನ ಮಾಡುತ್ತೇವೆ ಎನ್ನುವ ಅಭಿಪ್ರಾಯಗಳು ಕಾರ್ಯದರ್ಶಿಗಳ ಮಟ್ಟದ ಅಧಿಕಾರಿಗಳಿಂದ ವ್ಯಕ್ತವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು