2:06 PM Monday6 - May 2024
ಬ್ರೇಕಿಂಗ್ ನ್ಯೂಸ್
ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,… ಮಾಜಿ ಪ್ರಧಾನಿ ದೇವೇಗೌಡರಿಗೆ ನೀಡಿದ್ದ, ಸಂಸದ ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸನದ ಸರಕಾರಿ… ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ…

ಇತ್ತೀಚಿನ ಸುದ್ದಿ

ಬಂಟ್ವಾಳ: ಕಾನೂನು ಅರಿವು ಹಾಗೂ ಮಾದಕ ದ್ರವ್ಯ ವ್ಯಸನ ಜಾಗೃತಿ ಕಾರ್ಯಕ್ರಮ

30/09/2023, 10:39

ಬಂಟ್ವಾಳ (reporterkarnataka.com): ಮೊಡಂಕಾಪು ಕಾರ್ಮೆಲ್ ಕಾಲೇಜು, ಬಂಟ್ವಾಳ ತಾಲೂಕು ಕಾನೂನು ಸೇವೆಗಳ ಸಮಿತಿ, ಬಂಟ್ವಾಳ ವಕೀಲರ ಸಂಘ, ಬಂಟ್ವಾಳ ಪೋಲಿಸ್ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಕಾನೂನು ಅರಿವು ಹಾಗೂ ಮಾದಕ ದ್ರವ್ಯ ವ್ಯಸನ ಜಾಗೃತಿ ಕಾರ್ಯಕ್ರಮ ಮಂಗಳವಾರ ಕಾಲೇಜು ಸಭಾಂಗಣದಲ್ಲಿ ಜರುಗಿತು.


ವೇದಿಕೆಯಲ್ಲಿ ಕಾರ್ಯಕ್ರಮದ ಉದ್ಘಾಟಕರು ಹಾಗೂ ಸಂಪನ್ಮೂಲ ವ್ಯಕ್ತಿಯಾದ ಹರಣಿ ಕುಮಾರಿ ಡಿ, (ಸಹಾಯಕ ಸರ್ಕಾರಿ ಅಭಿಯೋಜಕರು), ಅನಂತ ಪದ್ಮನಾಭ, (ಆರಕ್ಷಕ ನಿರೀಕ್ಷಕರು ಬಂಟ್ವಾಳ ನಗರ ಪೊಲೀಸ್ ಠಾಣೆ), ರಾಮಕೃಷ್ಣ (ಪಿ ಎಸ್ ಐ ಬಂಟ್ವಾಳ), ಡಾ. ಲತಾ ಫೆರ್ನಾಂಡಿಸ್ ಎ ಸಿ, (ಪ್ರಾಂಶುಪಾಲರು ಕಾರ್ಮೆಲ್ ಕಾಲೇಜ್ ಮೊಡಂಕಾಪು), ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ವಿಜೇತಾ, ಮಾನವ ಹಕ್ಕುಗಳ ಸಂಯೋಜಕರು ನಿಹಾರಿಕಾ ಶೆಟ್ಟಿ ಉಪಸ್ಥಿತರಿದ್ದರು.
ಹರೇಣಿ ಕುಮಾರಿ ಡಿ. ಕಾರ್ಯಕ್ರಮವನ್ನು ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಕಾನೂನು ಅರಿವು ಹಾಗೂ ಮಾದಕ ದ್ರವ್ಯ ವ್ಯಸನದಿಂದಾಗುವ ದುಷ್ಪರಿಣಾಮಗಳ ಬಗ್ಗೆ ಮಾಹಿತಿ ನೀಡಿದರು. ಅನಂತ ಪದ್ಮನಾಭ ಮಾತಾಡಿ, ವಿದ್ಯಾರ್ಥಿಗಳು ಮಾದಕ ದ್ರವ್ಯ ವ್ಯಸನಕ್ಕೆ ಗುರಿಯಾಗದೆ ತಮ್ಮ ಭವಿಷ್ಯದ ಬಗ್ಗೆ ನಿಗಾವಹಿಸಬೇಕೆಂಬ ಸಂದೇಶ ನೀಡಿದರು. ಜೊಸ್ವಿಟ ಕಾರ್ಯಕ್ರಮವನ್ನು ನಿರೂಪಿಸಿದರು. ಡಾ ಲತಾ ಫೆರ್ನಾಂಡಿಸ್ ಎ ಸಿ, ಸ್ವಾಗತಿಸಿದರು. ಪ್ರೇಕ್ಷಾ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು