9:59 PM Sunday19 - May 2024
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ: ಮೇ 20ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನ ನಟಿ ಪವಿತ್ರಾ ಜಯರಾಂ ಸ್ನೇಹಿತ ಚಂದ್ರಕಾಂತ್ ಆತ್ಮಹತ್ಯೆ: ಸ್ನೇಹಿತೆ ಸಾವನ್ನಪ್ಪಿ ವಾರದೊಳಗೆ ಚಂದ್ರು… ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ…

ಇತ್ತೀಚಿನ ಸುದ್ದಿ

ಬ್ರ್ಯಾಂಡ್ ಮಂಗಳೂರು ಸೌಹಾರ್ದ ಕ್ರಿಕೆಟ್ ಪಂದ್ಯಾವಳಿ: ಪೊಲೀಸ್ ಕಮಿಷನರ್ ನೇತೃತ್ವದ ತಂಡ ಪ್ರಥಮ, ಎಸ್ಪಿ ತಂಡ ದ್ವಿತೀಯ

08/10/2023, 23:12

ಮಂಗಳೂರು(reporterkarnataka.com): ನಗರದ ಹೊರವಲಯದ ಅಡ್ಯಾರ್ ಸಹ್ಯಾದ್ರಿ ಮೈದಾನದಲ್ಲಿ ಭಾನುವಾರ ನಡೆದ ಬ್ರ್ಯಾಂಡ್ ಮಂಗಳೂರು ಸೌಹಾರ್ದ ಕ್ರಿಕೆಟ್ ಪಂದ್ಯಾವಳಿಯ ಅಂತಿಮ ಸುತ್ತಿನಲ್ಲಿ ಮಂಗಳೂರು ಪೊಲೀಸ್ ಆಯುಕ್ತರ ಮತ್ತು ದ.ಕ. ಜಿಲ್ಲಾ ಎಸ್ಪಿ ನೇತೃತ್ವದ ತಂಡದ ನಡುವೆ ನಡೆದು ಪೊಲೀಸ್ ಆಯುಕ್ತರ ನೇತೃತ್ವದ ತಂಡ ಪ್ರಥಮ ಸ್ಥಾನ ಗಳಿಸಿದೆ. ದ.ಕ. ಜಿಲ್ಲಾ ಎಸ್ಪಿ ನೇತೃತ್ವದ ತಂಡ ದ್ವಿತೀಯ ಬಹುಮಾನ ಪಡೆದಿದೆ.
ದ.ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ದ.ಕ. ಜಿಲ್ಲಾಡಳಿತ, ದ.ಕ. ಜಿಲ್ಲಾ ಪಂಚಾಯತ್ ಮಂಗಳೂರು ಪೊಲೀಸ್ ಅಯುಕ್ತಾಲಯ,ದ.ಕ‌. ಜಿಲ್ಲಾ ಪೊಲೀಸ್ ಇಲಾಖೆ ಹಾಗೂ ಸಹ್ಯಾದ್ರಿ ತಾಂತ್ರಿಕ ಮಹಾ ವಿದ್ಯಾಲಯ, ರೋಹನ್ ಕಾರ್ಫೋರೇಷನ್ ಸಹಯೋಗದಲ್ಲಿ ಪಂದ್ಯ ಆಯೋಜಿಸಲಾಗಿತ್ತು.
ಪಂದ್ಯ ಪುರುಷ ಪ್ರಶಸ್ತಿಯನ್ನು ಪೊಲೀಸ್ ಆಯುಕ್ತ ರ ತಂಡದ ಗಾಲಿಬ್ ಸರಣಿ ಶ್ರೇಷ್ಠ ಪುರಸ್ಕಾರವನ್ನು ಪೊಲೀಸ್ ಆಯುಕ್ತರ ತಂಡದ ಸಿದ್ದು ಪಡೆದಿದ್ದಾರೆ. ಉತ್ತಮ ಎಸೆತಗಾರ ಪುರಸ್ಕಾರ ಪೊಲೀಸ್ ಆಯುಕ್ತರ ತಂಡದ ರಂಜನ್, ಉತ್ತಮ ದಾಂಡಿಗ ಪುರಸ್ಕಾರ ದ.ಕ. ಜಿಲ್ಲಾ ಎಸ್ಪಿ ತಂಡದ ಶಿವಕುಮಾರ್ ಪಡೆದಿದ್ದಾರೆ.
ಸಮಾರೋಪ ಸಮಾರಂಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರ ಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ, ಹಿರಿಯ ಪತ್ರಕರ್ತ ಮನೋಹರ ಪ್ರಸಾದ್ , ಮಂಗಳೂರು ಪ್ರಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ,ರಾಜ್ಯ ಕಾರ್ಯ ಕಾರಿ ಸಮಿತಿ ಸದಸ್ಯ ಇಬ್ರಾಹಿಂ ಅಡ್ಕಸ್ಥಳ, ಪೊಲೀಸ್ ಇನ್ಸ್ ಪೆಕ್ಟರ್ ಗುರುದತ್ತ ಕಾಮತ್, ದ.ಕ.ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ, ಕೋಶಾಧಿಕಾರಿ ಪುಷ್ಪ ರಾಜ್ ಬಿ.ಎನ್., ಕಾರ್ಯಕಾರಿ ಸಮಿತಿ ಸದಸ್ಯ ರಾಜೇಶ್ ದಡ್ಡಂಗಡಿ, ರೇಮಂಡ್ ಡಿ ಕುನ್ಹಾ ಉಪಸ್ಥಿತ ರಿದ್ದು ಪ್ರಶಸ್ತಿ ವಿತರಿಸಿದರು. ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ ಕಾರ್ಯಕ್ರಮ ನಿರೂಪಿಸಿದರು.


ಪಂದ್ಯಾಟದಲ್ಲಿ ಪೊಲೀಸ್ ಕಮಿಷನರ್ ತಂಡ, ಜಿಲ್ಲಾ ಎಸ್ಪಿ ನೇತೃತ್ವದ ತಂಡ, ಜಿಲ್ಲಾಪಂಚಾಯತ್ ಸಿಇಒ ನೇತೃತ್ವದ ತಂಡ, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಅಧ್ಯಕ್ಷರ ನೇತೃತ್ವದ ತಂಡಗಳು ಭಾಗವಹಿಸಿವೆ.
ಉದ್ಘಾಟನೆ: ಬ್ರಾಂಡ್ ಮಂಗಳೂ ರು ಸೌಹಾರ್ದ ಕ್ರಿಕೆಟ್ ಪಂದ್ಯಾವಳಿಯನ್ನು ಸಹ್ಯಾದ್ರಿ ಕಾಲೇಜು ಕ್ರೀಡಾಂಗ ಣದಲ್ಲಿ ದ.ಕ ಜಿಲ್ಲಾ ಕಾರ್ಯ ನಿರ್ವಹಣಾಧಿಕಾರಿ ಮತ್ತು ದ.ಕ ಜಿಲ್ಲಾ ಪ್ರಭಾರ ಜಿಲ್ಲಾಧಿಕಾರಿ ಡಾ.ಕೆ.ಆನಂದ ಉದ್ಘಾಟಿಸಿ ಶುಭ ಹಾರೈಸಿದರು.
ಕಮಿಷನರ್ ಅನುಪಮ್ ಅಗರ್ವಾಲ್ ಶುಭ ಹಾರೈಸಿ, ಮಂಗಳೂರಿನ ಸಮಗ್ರ ಅಭಿವೃದ್ಧಿಗೆ ಎಲ್ಲರ ಸಹಕಾರ, ಸೌಹಾರ್ದ ವಾತವರಣ ಅಗತ್ಯ ಎಂದರು. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರ ಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಅಧ್ಯಕ್ಷತೆ ವಹಿಸಿದ್ದರು.
ವೇದಿಕೆಯಲ್ಲಿ ಹಿರಿಯ ಪತ್ರಕರ್ತ ಮನೋಹರ ಪ್ರಸಾದ್ , ಮಂಗಳೂರು ಪ್ರಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ,ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿಣಿ ಸಮಿತಿ ಸದಸ್ಯ ಜಗನ್ನಾಥ ಶೆಟ್ಟಿ ಬಾಳ, ದ.ಕ. ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಕೋಶಾಧಿಕಾರಿ ಪುಷ್ಪ ರಾಜ್ ಬಿ.ಎನ್. ಉಪಸ್ಥಿತರಿದ್ದರು. ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು