12:53 PM Sunday19 - May 2024
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ: ಮೇ 20ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನ ನಟಿ ಪವಿತ್ರಾ ಜಯರಾಂ ಸ್ನೇಹಿತ ಚಂದ್ರಕಾಂತ್ ಆತ್ಮಹತ್ಯೆ: ಸ್ನೇಹಿತೆ ಸಾವನ್ನಪ್ಪಿ ವಾರದೊಳಗೆ ಚಂದ್ರು… ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ…

ಇತ್ತೀಚಿನ ಸುದ್ದಿ

ಮಂಗಳೂರು: ಅ. 29ರಂದು ಕೇಂದ್ರ ಸರಕಾರದ ರೈತ, ಕಾರ್ಮಿಕ ಹಾಗೂ ಜನವಿರೋಧಿ ನೀತಿಗಳ ವಿರುದ್ಧ ದ.ಕ.ಜಿಲ್ಲಾ ಮಟ್ಟದ ಜಂಟಿ ಸಮಾವೇಶ

27/10/2023, 23:04

ಮಂಗಳೂರು(reporterkarnataka.com): ಕೇಂದ್ರ ಸರ್ಕಾರದ ರೈತ ಕಾರ್ಮಿಕ ವಿರೋಧಿ ಹಾಗೂ ಜನವಿರೋಧಿ ನೀತಿಗಳನ್ನು ಹಿಮ್ಮೆಟ್ಟಿಸಲು, ವಿದ್ಯುತ್ ಹಾಗೂ ರೈಲ್ವೇ ಖಾಸಗೀಕರಣದ ವಿರುದ್ಧ ಪ್ರಬಲ ಜನಾಂದೋಲನ ರೂಪಿಸಲು ಹಾಗೂ ಜನಪರ ಪರ್ಯಾಯ ನೀತಿಗಳಿಗಾಗಿ ಆಗ್ರಹಿಸಿ ಅಕ್ಟೋಬರ್‌ 29ರಂದು ಆದಿತ್ಯವಾರ ಬೆಳಿಗ್ಗೆ 10ಕ್ಕೆ ನಗರದ ಬಲ್ಮಠದಲ್ಲಿರುವ ಬಿಷಪ್ ಜತ್ತನ್ನ ಸಭಾಂಗಣದಲ್ಲಿ ರೈತ ಕಾರ್ಮಿಕ ವಿದ್ಯಾರ್ಥಿ ಯುವಜನ ಮಹಿಳಾ ದಲಿತ ಆದಿವಾಸಿ ಹಾಗೂ ಜನಪರ ಸಂಘಟನೆಗಳ ದ.ಕ.ಜಿಲ್ಲಾ ಮಟ್ಟದ ಜಂಟಿ ಸಮಾವೇಶ ಜರುಗಲಿದೆ ಎಂದು ರೈತ ಕಾರ್ಮಿಕ ಜನಪರ ಸಂಘಟನೆಗಳ ಒಕ್ಕೂಟವು ಪತ್ರಿಕಾ ಹೇಳಿಕೆಯೊಂದರಲ್ಲಿ ತಿಳಿಸಿದೆ.
ಒಳ್ಳೆಯ ದಿನಗಳು ಬರಲಿದೆ ಎಂದು ದೇಶದ ಜನತೆಗೆ ಮಂಕುಬೂದಿ ಎರಚಿ ಅಧಿಕಾರದ ಗದ್ದುಗೆಯೇರಿ ಕಳೆದ 9 ವರ್ಷಗಳಿಂದ ಜನಸಾಮಾನ್ಯರ ಬದುಕನ್ನು ಸರ್ವನಾಶಗೊಳಿಸಿದ ಕೇಂದ್ರದ ನರೇಂದ್ರ ಮೋದಿ ಸರಕಾರವು ನಿತ್ಯನಿರಂತರವಾಗಿ ಕಾರ್ಪೊರೇಟ್ ಪರ ನೀತಿಗಳನ್ನು ಜಾರಿಗೊಳಿಸುತ್ತಿದೆ. ದೇಶಕ್ಕೆ ಅನ್ನ ನೀಡುವ ರೈತರ ಬದುಕಿಗೆ ಮಾರಕವಾಗುವ ಕಾನೂನುಗಳನ್ನು ಜಾರಿಗೊಳಿಸಲು ಸತತ ಪ್ರಯತ್ನ ನಡೆಸುವ ಕೇಂದ್ರ ಸರಕಾರ ದೇಶದ ಕ್ರಷಿ ವ್ಯವಸ್ಥೆಯನ್ನೇ ಬುಡಮೇಲುಗೊಳಿಸುತ್ತಿದೆ. ಸಮಾಜದಲ್ಲಿ ಸಂಪತ್ತನ್ನು ಸೃಷ್ಠಿಸುವ ಕಾರ್ಮಿಕ ವರ್ಗದ 29 ಪ್ರಮುಖ ಕಾನೂನುಗಳನ್ನು 4 ಸಂಹಿತೆಗಳನ್ನಾಗಿ ರೂಪಿಸಿ ಮತ್ತೆ ಕಾರ್ಮಿಕರನ್ನು ಗುಲಾಮರನ್ನಾಗಿಸುವ ಪಿತೂರಿ ನಡೆಸುತ್ತಿದೆ. ಕೈಗಾರಿಕೆಗಳ ತಾಯಿ ಹಾಗೂ ಆಧುನಿಕ ನಾಗರಿಕ ಸಮಾಜದ ಕೇಂದ್ರ ನರಮಂಡಲದಂತೆ ಕಾರ್ಯ ನಿರ್ವಹಿಸುವ ವಿದ್ಯುತ್ ಕ್ಷೇತ್ರವನ್ನು ಖಾಸಗೀಕರಣಗೊಳಿಸಲು ಸರಕಾರ ಮುಂದಾಗಿದೆ. ಹಾಗೂ ಜನರ ಜೀವನಾಡಿಯಾದ ರೈಲ್ವೇ ಕ್ಷೇತ್ರವನ್ನೂ ಕೂಡ ಖಾಸಗೀಕರಣಗೊಳಿಸುವ ಮೂಲಕ ದೇಶದ ಆರ್ಥಿಕತೆಗೆ ಗಂಭೀರ ಅಪಾಯ ಬಂದೊದಗಿದೆ. ಇಂತಹ ಸಂಕಷ್ಟದ ಕಾಲಘಟ್ಟದಲ್ಲಿ ದೇಶವನ್ನು ಉಳಿಸಲು ಮತ್ತು ಜನತೆಯ ಬದುಕನ್ನು ರಕ್ಷಿಸಲು ದೇಶದ ಸಮಸ್ತ ಜನತೆ ಒಂದಾಗಬೇಕಾಗಿದೆ. ಈ ನಿಟ್ಟಿನಲ್ಲಿ ನವೆಂಬರ್ ತಿಂಗಳಲ್ಲಿ ದೇಶಾದ್ಯಂತ ಬ್ರಹತ್ ಹೋರಾಟ ನಡೆಯಲಿದ್ದು, ಅದರ ವ್ಯಾಪಕ ತಯಾರಿಗಾಗಿ ಹಲವು ವಿಧದ ಕಾರ್ಯಕ್ರಮ ಹೋರಾಟಗಳನ್ನು ದ.ಕ.ಜಿಲ್ಲೆಯಲ್ಲಿಯೂ ಹಮ್ಮಿಕೊಳ್ಳಲಾಗಿದೆ.
ಸಮಾವೇಶದಲ್ಲಿ ಪ್ರದಾನ ಭಾಷಣಕಾರರಾಗಿ ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಮೀನಾಕ್ಷಿ ಸುಂದರಂ ಹಾಗೂ ಎಐಟಿಯುಸಿ ರಾಜ್ಯ ಉಪಾಧ್ಯಕ್ಷರಾದ ಬಿ.ಅಮ್ಜದ್ ರವರು ಭಾಗವಹಿಸಲಿದ್ದು,ಉಳಿದಂತೆ ಒಕ್ಕೂಟದಲ್ಲಿರುವ ಎಲ್ಲಾ ಪ್ರಧಾನ ಸಂಘಟನೆಗಳ ಪ್ರಮುಖರು ಭಾಷಣ ಮಾಡಲಿದ್ದಾರೆ ಎಂದು ಹೇಳಿಕೆಯಲ್ಲಿ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು