11:46 PM Wednesday1 - May 2024
ಬ್ರೇಕಿಂಗ್ ನ್ಯೂಸ್
ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ… ಅಶ್ಲೀಲ ವೀಡಿಯೊ ಪ್ರಕರಣ: ಬಂಧನದಿಂದ ತಪ್ಪಿಸಿಕೊಳ್ಳಲು ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ… ದತ್ತಪೀಠ ಬಳಿ 100 ಅಡಿ ಆಳಕ್ಕೆ ಉರುಳಿ ಬಿದ್ದ ಪ್ರವಾಸಿಗರ ಮಿನಿ ಬಸ್:… ರಾಜ್ಯದಲ್ಲಿ ಅಭಿವೃದ್ಧಿ ಸ್ಥಗಿತ, ಕಾನೂನು ಸುವ್ಯವಸ್ಥೆ ಚಿಂತಾಜನಕ: ಬೆಳಗಾವಿಯಲ್ಲಿ ಪ್ರಧಾನಿ ಮೋದಿ ವಾಗ್ದಾಳಿ ಬೆಳಗಾವಿಯಲ್ಲಿ ಉತ್ತರ ಕರ್ನಾಟಕ ಶೈಲಿಯ ಜೋಳ ರೊಟ್ಟಿ ಸವಿದ ಪ್ರಧಾನಿ ಮೋದಿ ವಿಜಯಪುರದ ಶಿರನಾಳದಲ್ಲಿ ಶತಾಯುಷಿ ಭಾಗವ್ವ ಮತ ಚಲಾವಣೆ: 108ರ ಹರೆಯದ ಹಿರಿಯಜ್ಜಿ ಪ್ರಧಾನಿ ಮೋದಿ ಏ.28ರಂದು ಶಿರಸಿಗೆ: ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಪರ…

ಇತ್ತೀಚಿನ ಸುದ್ದಿ

ಪುತ್ತೂರು: ನವೆಂಬರ್ 30ರಂದು ಸಹಕಾರಿ ಸಂಘಗಳ ಹಾಗೂ ನವೋದಯ ಸ್ವ ಸಹಾಯ ಸಂಘಗಳ ಸದಸ್ಯರ ಜಿಲ್ಲಾಮಟ್ಟದ ಕ್ರೀಡಾಕೂಟ

28/11/2023, 19:00

ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಸಂಘ, ನವೋದಯ ಗ್ರಾಮ ವಿಕಾಸ ಟ್ರಸ್ಟ್ ನ ಸಹಭಾಗಿತತ್ವದಲ್ಲಿ ಜಿಲ್ಲೆಯ ಎಲ್ಲ ಸಹಕಾರಿ ಸಂಘಗಳ ಹಾಗೂ ನವೋದಯ ಸ್ವ ಸಹಾಯ ಸಂಘಗಳ ಸದಸ್ಯರ ಜಿಲ್ಲಾಮಟ್ಟದ ಕ್ರೀಡಾಕೂಟ ಪುತ್ತೂರಿನ ಕೊಂಬೆಟ್ಟು ಸರಕಾರಿ ಪದವಿಪೂರ್ವ ಕಾಲೇಜಿನ ಮೈದಾನದಲ್ಲಿ ನವಬರ್ 30ರಂದು ಬೆಳಗ್ಗೆ 9 ಗಂಟೆಗೆ ನಡೆಯಲಿದೆ.


ಗ್ರಾಮೀಣಾಭಿವೃದ್ಧಿಯ ಮೂಲ ಸೆಲೆಯಾಗಿ ಕಾರ್ಯ ನಿರ್ವಹಿಸುತ್ತಿರುವ ಸಹಕಾರಿ ಸಂಘಗಳು ಹಾಗೂ ಗ್ರಾಮೀಣ ಮಟ್ಟದಲ್ಲಿ ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಉತ್ತೇಜನ ನೀಡುವ ನವೋದಯ ಸ್ವ ಸಹಾಯ ಸಂಘಗಳ ಸದಸ್ಯರುಗಳ ಕ್ರೀಡಾ ವಿಕಸನಕ್ಕೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಈ ಕ್ರೀಡಾಕೂಟವನ್ನು ಹಮ್ಮಿಕೊಳ್ಳಲಾಗಿಧ. ಕ್ರೀಡಾಕೂಟದಲ್ಲಿ ಮಹಿಳೆಯರು ಹಾಗೂ ಪುರುಷರಿಗೆ 100 ಮೀಟರ್ ಓಟ, ಗುಂಡು ಎಸೆತ ಹಾಗೂ ಹಗ್ಗ ಜಗ್ಗಾಟ ಸ್ಪರ್ಧೆ ಗಳು ನಡೆಯಲಿದೆ ಎಂದು ಎಸ್ ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ. ಎನ್.ಎಂ. ರಾಜೇಂದ್ರ ಕುಮಾರ್ ಅವರು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಸಹಕಾರಿ ಸಂಘಗಳ ಸದಸ್ಯರು, ಸಿಬ್ಬಂದಿಗಳು, ನವೋದಯ ಸ್ವ ಸಹಾಯ ಸಂಘ ಸದಸ್ಯರು ಹಾಗೂ ಪ್ರೇರಕರು ಮತ್ರು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಸಿಬ್ಬಂದಿ ವರ್ಗ ಒಳಗೊಂಡಂತೆ ಜಿಲ್ಲೆಯ ವಿವಿಧ ತಾಲೂಕುಗಳಿಂದ ಕ್ರೀಡಾಪಟುಗಳು ಈ ಸ್ಪರ್ಧೆ ಯಲ್ಲಿ ಭಾಗವಹಿಸಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂ ಅವರು ಕ್ರೀಡಾಕೂಟಕ್ಕೆ ಚಾಲನೆ ನೀಡುವರು. ಕ್ರೀಡಾ ಸಚಿವ ಆರ್. ಬಿ. ತಿಮ್ಮಾಪುರ ಕ್ರೀಡಾಜ್ಯೋತಿ ಬೆಳಗಿಸುವರು. ಸಂಸದ ನಳಿನ್ ಕುಮಾರ್ ಕಟೀಲ್ ಮೆರವಣಿಗೆ ಯನ್ನು ಉದ್ಘಾಟಿದುವರು ಎಂದು ಡಾ. ರಾಜೇಂದ್ರ ಕುಮಾರ್ ಹೇಳಿದರು.
ಸಮಾರಂಭದ ಅಧ್ಯಕ್ಷತೆಯನ್ನು ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಸಂಘದ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಹಾಗೂ ಮಾಜಿ ಶಾಸಕ ಸಂಜೀವ ಮಠಂದೂರು ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದರು.

ಸಮಾರೋಪ: ಕ್ರೀಡಾಕೂಟದ ಸಮಾರೋಪ ಸಮಾರಂಭ ಸಂಜೆ 4 ಗಂಟೆಗೆ ನಡೆಯಲಿದೆ. ಪುತ್ತೂರು ಆದರ್ಶ ವಿವಿದ್ದೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಕೆ. ಸೀತಾರಾಮ ರೈ ಸವಣೂರು ಪ್ರಶಸ್ತಿ ವಿಜೇತರಿಗೆ ಪ್ರಶಸ್ತಿ ವಿತರಿಸುವರು.
ಮುಖ್ಯ ಅತಿಥಿಗಳಾಗಿ ದಕ್ಷಿಣ ಕನ್ನಡ ಸಹಕಾರಿ ಯೂನಿಯನ್ ನ ಅಧ್ಯಕ್ಷ ಬೆಳ್ಳಿಪ್ಪಾಡಿ ಪ್ರಸಾದ್ ಕೌಶಲ್ ಶೆಟ್ಟಿ, ಪುತ್ತೂರು ರಾಮಕೃಷ್ಣ ಸರಕಾರಿ ಪ್ರೌಢಶಾಲೆಯ ಸಂಚಾಲಕ ಹೇಮನಾಥ ಶೆಟ್ಟಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ನಿಕಟಪೂರ್ವ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ಪುತ್ತೂರು ನಗರಸಭೆ ಮಾಜಿ ಅಧ್ಯಕ್ಷ ಜೀವಂಧರ್ ಜೈನ್ ಹಾಗೂ ಪುತ್ತೂರು ನಗರಸಭೆ ಸದಸ್ಯ ಜಗನ್ನಿವಾಸ್ ರಾವ್ ಭಾಗವಹಿಸುವರು.

ಇತ್ತೀಚಿನ ಸುದ್ದಿ

ಜಾಹೀರಾತು