1:24 PM Friday3 - May 2024
ಬ್ರೇಕಿಂಗ್ ನ್ಯೂಸ್
ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ… ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ… ಅಶ್ಲೀಲ ವೀಡಿಯೊ ಪ್ರಕರಣ: ಬಂಧನದಿಂದ ತಪ್ಪಿಸಿಕೊಳ್ಳಲು ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ… ದತ್ತಪೀಠ ಬಳಿ 100 ಅಡಿ ಆಳಕ್ಕೆ ಉರುಳಿ ಬಿದ್ದ ಪ್ರವಾಸಿಗರ ಮಿನಿ ಬಸ್:…

ಇತ್ತೀಚಿನ ಸುದ್ದಿ

ಕೆನರಾ ಕಾಲೇಜಿನಲ್ಲಿ ರಕ್ತದಾನ ಶಿಬಿರ: ಉಪನ್ಯಾಸಕ ವರ್ಗ ಹಾಗೂ ವಿದ್ಯಾರ್ಥಿಗಳಿಂದ 156 ಯೂನಿಟ್ ಸಂಗ್ರಹ

30/11/2023, 19:17

ಮಂಗಳೂರು(reporterkarnataka.com): ಕೆನರಾ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ, ಯೂತ್ ರೆಡ್ ಕ್ರಾಸ್, ರೆಡ್ ರಿಬ್ಬನ್ ಕ್ಲಬ್ ಘಟಕಗಳು, ಲಯನ್ಸ್ ಕ್ಲಬ್ ಕದ್ರಿ ಹಿಲ್ಸ್, ಎಚ್ ಡಿಎಫ್ ಸಿ ಬ್ಯಾಂಕ್ ಹಾಗೂ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಜಂಟಿಯಾಗಿ ರಕ್ತದಾನ ಶಿಬಿರವನ್ನು ಆಯೋಜಿಸಿತ್ತು.


ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಅಧ್ಯಕ್ಷ ಶಾಂತರಾಮ ಶೆಟ್ಟಿ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. “ಅಗತ್ಯವಿರುವ ವ್ಯಕ್ತಿಗೆ ರಕ್ತದಾನ ಮಾಡುವುದು ಮನುಕುಲದ ಅಸಾಧಾರಣ ಸೇವೆ. ರಕ್ತಕ್ಕೆ ಧರ್ಮವಿಲ್ಲ, ಅದು ಅನನ್ಯ. ಜೀವ ಉಳಿಸುವ ದ್ರವವು ಒಬ್ಬ ವ್ಯಕ್ತಿಯನ್ನು ಸಾವಿನ ದವಡೆಯಿಂದ ರಕ್ಷಿಸುವ ಸಾಮರ್ಥ್ಯವನ್ನು ಹೊಂದಿದೆ. ವರ್ಷಕ್ಕೆ ಮೂರು ಬಾರಿ ರಕ್ತದಾನ ಮಾಡುವುದರಿಂದ ಆರೋಗ್ಯವಂತರಾಗಿ ಬಾಳಬಹುದು ಎಂದರು. ಲಯನ್ಸ್ ಕ್ಲಬ್ ನ ಗಣೇಶ್ ಡಿ. ಶೆಟ್ಟಿ ಅವರು ಮುಖ್ಯ ಅತಿಥಿಯಾಗಿ ಮಾತನಾಡಿ, ರಕ್ತದಾನವು ಮಾನವೀಯತೆಯ ಸೂಚಕವಾಗಿದೆ. ಇದು ಆರ್ಥಿಕ ವೆಚ್ಚವಿಲ್ಲದ ಉದಾತ್ತ ಕಾರ್ಯವಾಗಿದೆ ಎಂದು ಹೇಳಿದರು.
ಮಂಗಳೂರು ಎಚ್ ಡಿಎಫ್ ಸಿ ಬ್ಯಾಂಕ್ ವ್ಯವಸ್ಥಾಪಕ ಕಿರಣ್ ಶೆಟ್ಟಿ ಅವರು ಶುಭ ಹಾರೈಸಿದರು. ಕೆನರಾ ಆಡಳಿತ ಮಂಡಳಿಯ ಗೌರವಾಧ್ಯಕ್ಷ ಎಂ.ರಂಗನಾಥ ಭಟ್ ಅಧ್ಯಕ್ಷತೆ ವಹಿಸಿದ್ದು,ಮಾನವೀಯತೆ ಇನ್ನೊಬ್ಬರಿಗೆ ಸಲ್ಲಿಸುವ ಸಮರ್ಪಣೆಯಲ್ಲಿ ಅಡಗಿದೆ. ಅದು ಪದಗಳಿಗೆ ಮೀರಿದ ತೃಪ್ತಿ ನೀಡುತ್ತದೆ. ಅವುಗಳಲ್ಲಿ ರಕ್ತದಾನವು ಒಂದು ಎಂದು ಹೇಳಿದರು.
ಕಾಲೇಜಿನ ಪ್ರಾಂಶುಪಾಲೆ ಡಾ.ಪ್ರೇಮಲತಾ ವಿ. ಸ್ವಾಗತಿಸಿದರು. ರಾಸೇಯೋ ಅಧಿಕಾರಿ ಸೀಮಾ ಪ್ರಭು ಎಸ್. ವಂದಿಸಿದರು. ಲಿಖಿತ್ ನಿರೂಪಿಸಿದರು. ಕಾಲೇಜಿನ ಆಡಳಿತಾಧಿಕಾರಿ ಡಾ.ದೀಪ್ತಿ ನಾಯಕ್ , ಯೂತ್ ರೆಡ್ ಕ್ರಾಸ್ ಅಧಿಕಾರಿಗಳಾದ ರೂಪಶ್ರೀ, ರಶ್ಮಿ , ರಾಸೇಯೋ ಅಧಿಕಾರಿ ಕೀರ್ತನಾ ಎಂ. ಭಟ್, ಲಯನ್ಸ್ ಸೇವಾ ಸಂಸ್ಥೆಯ ವಿವಿಧ ಪದಾಧಿಕಾರಿಗಳಾದ ಉಮಾ ಬಿ. ಹೆಗ್ಡೆ, ಸುಮಿತ್ರಾ ಶೆಟ್ಟಿ, ವಿನೋದ್ ಪ್ರಭು, ವಿದ್ಯಾ ಕಾಮತ್, ಮಾಲಾ ಕಿಶೋರ್, ಸಂಧ್ಯಾ, ಸತೀಶನ್ ಮುಂತಾದವರು ಉಪಸ್ಥಿತರಿದ್ದರು.
ಕಾಲೇಜಿನ ಉಪನ್ಯಾಸಕ ವರ್ಗ ಹಾಗೂ ವಿದ್ಯಾರ್ಥಿಗಳಿಂದ 156 ಯೂನಿಟ್ ರಕ್ತವನ್ನು ಸಂಗ್ರಹಿಸುವ ಮೂಲಕ ಕಾರ್ಯಕ್ರಮವು ಯಶಸ್ವಿಯಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು