7:12 PM Tuesday7 - May 2024
ಬ್ರೇಕಿಂಗ್ ನ್ಯೂಸ್
ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,… ಮಾಜಿ ಪ್ರಧಾನಿ ದೇವೇಗೌಡರಿಗೆ ನೀಡಿದ್ದ, ಸಂಸದ ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸನದ ಸರಕಾರಿ… ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು…

ಇತ್ತೀಚಿನ ಸುದ್ದಿ

ಬೆಳಗಾವಿ ಅಧಿವೇಶನ: ಕೂಡ್ಲಿಗಿ ಗಡಿ ಗ್ರಾಮಗಳ ಸಂಕಷ್ಟಗಳನ್ನು ಸದನದಲ್ಲಿ ಪ್ರಸ್ತಾಪಿಸಿದ ಶಾಸಕ ಡಾ.ಎನ್.ಟಿ.ಶ್ರೀನಿವಾಸ್

12/12/2023, 19:44

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com
ಕೂಡ್ಲಿಗಿ ತಾಲೂಕಿನ ಕಟ್ಟಕಡೆಯ ಗಡಿಗ್ರಾಮಗಳ ಜನರು ಅಭಿವೃದ್ಧಿಯಿಂದ ವಂಚಿತವಾಗಿರುವುದರ ಕುರಿತು
ಶಾಸಕ ಡಾ. ಶ್ರೀನಿವಾಸ್ ಎನ್. ಟಿ. ಅವರು ಬೆಳಗಾವಿ ಅಧಿವೇಶನದಲ್ಲಿ  ಪ್ರಸ್ತಾಪಿಸಿ   ಸರ್ಕಾರದ ಗಮನ ಸೆಳೆದರು. ಕಲ್ಯಾಣ ಕರ್ನಾಟಕದ  ಅನುದಾನ ಹಂಚಿಕೆಯ ಅಸಮಾನತೆಯನ್ನು ಸರಿಪಡಿಸುವ ನಿಟ್ಟಿನಲ್ಲಿ ಶಾಸಕರು ಅಧಿವೇಶನದಲ್ಲಿ ನಂಜುಂಡಪ್ಪ ವರದಿ ಚರ್ಚೆಯ ವೇಳೆ, ತಮಗೆ ದೊರೆತ ಅಲ್ಪ ಸಮಯಾವಕಾಶದಲ್ಲಿಯೇ ಸರ್ಕಾರವನ್ನು ಆಗ್ರಹಿಸಿದರು. ಕಲ್ಯಾಣ ಕರ್ನಾಟಕದ ಅಭಿವೃದ್ಧಿ ವಿಚಾರದಲ್ಲಿ ಕೂಡ್ಲಿಗಿ ತಾಲೂಕು ವಂಚಿತವಾಗಿದೆ. ನಂಜುಂಡಪ್ಪ ವರದಿಯನ್ನು ಜಾರಿ ಮಾಡಲು ಸರ್ಕಾರವನ್ನು  ಒತ್ತಾಯಿಸಿದರು.


ಅವರು ಮಾತನಾಡಿ, ಕೂಡ್ಲಿಗಿ ತಾಲೂಕಿನ ಕಟ್ಟ ಕಡೆಯ ಗಡಿ ಗ್ರಾಮಗಳ ವಿದ್ಯಾರ್ಥಿಗಳು 371 ಜೆ ಅನ್ವಯ ಪಡೆದುಕೊಳ್ಳಬೇಕಾದ ಸವಲತ್ತುಗಳಿಂದ  ವಂಚಿತರಾಗುತ್ತಿರುವ  ಸಂಕಷ್ಟಗಳನ್ನು ಸದನದಲ್ಲಿ ಪ್ರಸ್ತಾಪಿಸಿದರು.‌

ಇತ್ತೀಚಿನ ಸುದ್ದಿ

ಜಾಹೀರಾತು