12:04 AM Monday6 - May 2024
ಬ್ರೇಕಿಂಗ್ ನ್ಯೂಸ್
ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,… ಮಾಜಿ ಪ್ರಧಾನಿ ದೇವೇಗೌಡರಿಗೆ ನೀಡಿದ್ದ, ಸಂಸದ ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸನದ ಸರಕಾರಿ… ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು…

ಇತ್ತೀಚಿನ ಸುದ್ದಿ

ಕಾರ್ತಿಕ ಮಾಸದ ದೀಪೋತ್ಸವ: ದಕ್ಷಿಣ ಕಾಶಿ ನಂಜನಗೂಡಿನ ಶ್ರೀಕಂಠೇಶ್ವರ ಸ್ವಾಮಿ ದೇವಾಲಯದಲ್ಲಿ ಹೂವಿನ ಪಲ್ಲಕ್ಕಿ ಉತ್ಸವ

12/12/2023, 14:46

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಕಾರ್ತಿಕ ಮಾಸದ ಕಡೆಯ ಸೋಮವಾರದ ಪ್ರಯುಕ್ತ ದಕ್ಷಿಣ ಕಾಶಿ ನಂಜನಗೂಡಿನ ಶ್ರೀ ಶ್ರೀಕಂಠೇಶ್ವರ ಸ್ವಾಮಿ ದೇವಾಲಯದಲ್ಲಿ ಹೂವಿನ ಪಲ್ಲಕ್ಕಿ ಉತ್ಸವವನ್ನು ಸಡಗರ ಸಂಭ್ರಮ ಹಾಗು ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು.


ನಂಜನಗೂಡು ತಾಲೂಕಿನ ಸ್ಥಳೀಯ ನಯನಜಕ್ಷತ್ರಿಯ ಜನಾಂಗ ಹಾಗೂ ಮುಡಿ ಕಟ್ಟೆ ಸಂಘದ ವತಿಯಿಂದ ಅನಾದಿ ಕಾಲದಿಂದಲೂ ಶ್ರೀ ಶ್ರೀಕಂಠೇಶ್ವರ ಸ್ವಾಮಿಯವರ ಪಲ್ಲಕ್ಕಿ ಉತ್ಸವ
ನಡೆಸಿಕೊಂಡು ಬರುತ್ತಿದೆ.
ಚಿನ್ನಾಭರಣ ಹಾಗೂ ಬಣ್ಣ,ಬಣ್ಣದ ಹೂಗಳಿಂದ ಅಲಂಕರಿಸಲಾದ ಪಾರ್ವತಿ ಸಮೇತ ಶ್ರೀ ಶ್ರೀಕಂಠೇಶ್ವರ ಸ್ವಾಮಿ ಅವರ ಉತ್ಸವ ಮೂರ್ತಿಗಳನ್ನು ದೇವಾಲಯದಿಂದ ಹೊರ ತಂದು ವಿದ್ಯುತ್ ದೀಪ ಹಾಗೂ ಹೂಗಳಿಂದ ಅಲಂಕರಿಸಲಾಗಿದ್ದ ರಥದಲ್ಲಿ ಕೂರಿಸಲಾಯಿತು.
ಮೂರ್ತಿಗಳಿಗೆ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಬೆಂಗಳೂರಿನ ಹೆಸರಾಂತ ವಾದ್ಯಗೋಷ್ಠಿ ಮುಖಾಂತರ ಪಟ್ಟಣದ ರಥ ಬೀದಿಯಲ್ಲಿ ಉತ್ಸವ ನಡೆಸಲಾಯಿತು.
ಉತ್ಸವದಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಉತ್ಸವವನ್ನು ಕಣ್ತುಂಬಿಕೊಂಡು ತಮ್ಮ ಭಕ್ತಿ ಭಾವ ಮೆರೆದರು. ಉತ್ಸವದ ಉದ್ದಕ್ಕೂ ಸಂಘದ ವತಿಯಿಂದ ವಿವಿಧ ಬಗೆಯ ಪಟಾಕಿ ಬಾಣ ಬಿರುಸುಗಳನ್ನು ಸಿಡಿಸಿ ನೆರೆದಿದ್ದ ಭಕ್ತರ ಮನಸೂರೆಗೊಂಡರು.
ಇದೇ ಸಂದರ್ಭ ದೇವಾಲಯದ ಹೊರಗೆ ನೂರಾರು ಭಕ್ತರು ವಿವಿಧ ಬಗೆಯ ದೀಪಾರತಿಗಳನ್ನು ಬೆಳಗುವ ಮೂಲಕ ತಮ್ಮ ಭಕ್ತಿ ನಮನ ಸಲ್ಲಿಸಿದರು. ಜನಾಂಗದ ಮುಖಂಡ ಶ್ರೀನಿವಾಸ್ ಮಾತನಾಡಿ ನಮ್ಮ ಜನಾಂಗ ಹಾಗೂ ಮುಡಿಕಟ್ಟೆ ವತಿಯಿಂದ ಕಾರ್ತಿಕ ಮಾಸದ ಕಡೆ ಸೋಮವಾರದಂದು ಪ್ರತಿ ವರ್ಷದಂತೆ ಹೆಸರಾಂತ ವಾದ್ಯಗೋಷ್ಠಿಯವರನ್ನು ಕರೆಸಿ ಶ್ರೀ ಶ್ರೀಕಂಠೇಶ್ವರ ಸ್ವಾಮಿಯವರ ಪಲ್ಲಕ್ಕಿ ಉತ್ಸವವನ್ನು ವಿಜೃಂಭಣೆಯಿಂದ ನಡೆಸುತ್ತಾ ಬಂದಿದ್ದೇವೆ ಎಂದು ಕಾರ್ಯಕ್ರಮದ ಬಗ್ಗೆ ತಿಳಿಸಿದರು
ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಜಗದೀಶ್ ಕುಮಾರ್ ಸೇರಿದಂತೆ ನಯನಜ ಕ್ಷತ್ರಿಯ ಹಾಗೂ ಮುಡಿಕಟ್ಟೆ ಸಂಘದ ಪದಾಧಿಕಾರಿಗಳು ಮತ್ತು ಮುಖಂಡರುಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು