12:40 PM Tuesday7 - May 2024
ಬ್ರೇಕಿಂಗ್ ನ್ಯೂಸ್
ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,… ಮಾಜಿ ಪ್ರಧಾನಿ ದೇವೇಗೌಡರಿಗೆ ನೀಡಿದ್ದ, ಸಂಸದ ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸನದ ಸರಕಾರಿ… ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು…

ಇತ್ತೀಚಿನ ಸುದ್ದಿ

ರಾಜಕೀಯ ಕೂಡ ಕ್ರಿಕೆಟ್ ತರಹ; ಆದರೆ, ಇಲ್ಲಿ ಬಾಲ್ ಎಲ್ಲಿಂದ ಬರುತ್ತೆ ಎನ್ನುವುದೇ ಗೊತ್ತಾಗೊಲ್ಲ: ಸ್ಪೀಕರ್ ಯು.ಟಿ. ಖಾದರ್ ಚಟಾಕಿ

06/01/2024, 12:41

ಮಂಗಳೂರು(reporterkarnataka.com): ರಾಜಕೀಯ‌ ಕೂಡ ಕ್ರಿಕೆಟ್ ಆಟದಂತೆ. ನೈಜ ಕ್ರಿಕೆಟ್ ನಲ್ಲಿ ಬಾಲ್ ಎಲ್ಲಿಂದ ಬರುತ್ತದೆ ಎಂದು ಗೊತ್ತಾಗುತ್ತದೆ. ಆದರೆ ರಾಜಕೀಯ ಕ್ರಿಕೆಟ್ ನಲ್ಲಿ ಬಾಲ್ ಎಲ್ಲಿಂದ ಬರುತ್ತೆ ಎನ್ನುವುದೇ ಗೊತ್ತಾಗೊಲ್ಲ ಎಂದು ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಅವರು ಮಾರ್ಮಿಕವಾಗಿ ನುಡಿದರು.
ನಗರದ ಹೊರವಲಯದ ಅಡ್ಯಾರ್‌ ಸಹ್ಯಾದ್ರಿ ಕಾಲೇಜು ಕ್ರೀಡಾಂಗಣದಲ್ಲಿ ಕೆಯುಡಬ್ಲ್ಯೂಜೆ ರಾಜ್ಯ ಮಟ್ಟದ ಬ್ರ್ಯಾಂಡ್‌ ಮಂಗಳೂರು ರೋಹನ್‌ ಕಪ್‌-2024
ಕ್ರಿಕೆಟ್‌ ಪಂದ್ಯಾವಳಿ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.
ಸಾಮಾಜಿಕ ಹೊಣೆಗಾರಿಕೆ ಅರಿತು ಪತ್ರಕರ್ತರು ಕಾರ್ಯನಿರ್ವಹಿಸಬೇಕು. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಮಾದರಿಯಾಗಿ ಕಾರ್ಯನಿರ್ವಹಿಸುತ್ತಿದೆ.
ಬ್ರ್ಯಾಂಡ್‌ ಮಂಗಳೂರು ಸ್ಲೋಗನ್‌ ಮೂಲಕ ಇಲ್ಲಿನ ಪತ್ರಕರ್ತರು ಕರಾವಳಿಯ ರಾಯಭಾರಿಗಳಾಗಿದ್ದಾರೆ. ಪತ್ರಕರ್ತರ ಸಂಘಗಳ ಅನ್ಯೋನ್ಯ ಚಟುವಟಿಕೆಗಳಿಗೆ ಎಲ್ಲರಿಗೂ ಮಾದರಿಯಾಗಿದ್ದು, ಇದು ಸಾಮಾಜಿಕ ಹಿತಾಸಕ್ತಿಯನ್ನು ಬೆಳೆಸಲು ಸಹಕಾರಿಯಾಗಿದೆ ಎಂದು ಶ್ಲಾಘಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು