3:07 PM Friday17 - May 2024
ಬ್ರೇಕಿಂಗ್ ನ್ಯೂಸ್
ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ… ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,…

ಇತ್ತೀಚಿನ ಸುದ್ದಿ

ಮಂಗಳೂರಿನಲ್ಲಿ ಬೃಹತ್ ಬೀದಿ ವ್ಯಾಪಾರ ವಲಯ ನಿರ್ಮಾಣ: ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಭರವಸೆ

11/01/2024, 21:48

ಮಂಗಳೂರು(reporterkarnataka.com): ಬೀದಿಬದಿ ವ್ಯಾಪಾರಿಗಳ ಆರ್ಥಿಕ ಹಿತರಕ್ಷಣೆ ಮತ್ತು ಸ್ವಾವಲಂಬಿ ಬದುಕಿಗಾಗಿ ದಕ್ಷಿಣ ಕನ್ನಡ ಬೀದಿಬದಿ ವ್ಯಾಪಾರಸ್ಥರ ಸಹಕಾರ ಸಂಘ (ನಿ) ಉದ್ಘಾಟನೆ ಕಾರ್ಯಕ್ರಮ ನಗರದ ಕುದ್ಮುಲ್ ರಂಗ ರಾವ್ ಪುರಭವನದಲ್ಲಿ ನಡೆಯಿತು.


ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಅವರು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿ, ಬೀದಿಬದಿ ವ್ಯಾಪಾರಿಗಳು ಸ್ವಾವಲಂಬಿಗಳಾಗಳು. ಕೇಂದ್ರ ಮತ್ತು ರಾಜ್ಯ ಸರಕಾರ ಅನೇಕ ಕಾರ್ಯಕ್ರಮ ಹಮ್ಮಿಕೊಂಡಿದೆ. ಮಂಗಳೂರು ಮಹಾ ನಗರ ಪಾಲಿಕೆ ಬೀದಿಬದಿ ವ್ಯಾಪಾರಿಗಳಿಗಾಗಿ ನಗರದ ಹೃದಯ ಭಾಗದಲ್ಲಿ ಬೃಹತ್ ಬೀದಿ ವ್ಯಾಪಾರ ವಲಯ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗಿದೆ. ನಗರದ ಎಲ್ಲಾ 60 ವಾರ್ಡ್ ಗಳಲ್ಲಿ ಬೀದಿಬದಿ ವ್ಯಾಪಾರಿಗಳ ಸಮೀಕ್ಷೆ ನಡೆಸಿ ಪ್ರತಿ ವಾರ್ಡ್ ಗಳಲ್ಲಿ ನಗರ ಪಾಲಿಕೆ ವ್ಯಾಪಾರ ವಲಯ ನಿರ್ಮಿಸಿ ಕೊಡಲಿದೆ ಎಂದು ಭರವಸೆ ನೀಡಿದರು. ಬೀದಿಬದಿ ವ್ಯಾಪಾರಿಗಳು ಸಹಕಾರ ಸಂಘ ರಚಿಸಿರುವುದು ಬೀದಿಬದಿ ವ್ಯಾಪಾರಿಗಳನ್ನು ಪ್ರಗತಿಶೀಲರನ್ನಾಗಿ ಮಾಡಲು ಅನುಕೂಲವಾಗಲಿದೆ ಎಂದರು.
ಪ್ರಾಸ್ತಾವಿಕ ಮಾತುಗಳನ್ನಾಡಿದ ಸಂಘದ ಅಧ್ಯಕ್ಷ ಬಿ.ಕೆ. ಇಮ್ತಿಯಾಝ್ ಅವರು ಬೀದಿಬದಿ ವ್ಯಾಪಾರಿಗಳ ರಕ್ತ ಹೀರುತ್ತಿರುವ ಬಡ್ಡಿ ದಂಧೆಕೋರರಿಂದ ಮುಕ್ತಿಗೊಳಿಸಲಿಕ್ಕಾಗಿ ಮತ್ತು ಬೀದಿ ವ್ಯಾಪಾರಿಗಳನ್ನು ಗುರಿಯಾಗಿಸಿಕೊಂಡು ಪಂಗನಾಮ ಹಾಕುತ್ತಿದ್ದ ಬ್ಲೇಡ್ ಕಂಪೆನಿಗಳಿಂದ ಬೀದಿ ವ್ಯಾಪಾರಿಗಳನ್ನು ರಕ್ಷಿಸಿ ಆರ್ಥಿಕ ಸ್ವಾವಲಂಬಿಗಳಾಗಿ ಮಾಡಿ ಅವರನ್ನು ಪ್ರಗತಿಶೀಲರನ್ನಾಗಿ ಮಾಡುವ ನಿಟ್ಟಿನಲ್ಲಿ ಸಹಕಾರ ಸಂಘವನ್ನು ರಚಿಸಲಾಗಿದೆ ಎಂದರು.
ಪಾಲಿಕೆಯ ಪ್ರತಿಪಕ್ಷ ನಾಯಕ ಪ್ರವೀಣ್ ಚಂದ್ರ ಆಳ್ವ ಅವರು ಸಹಕಾರ ಸಂಘದ ಸದಸ್ಯರಿಗೆ ಷೇರು ಪ್ರಮಾಣ ಪತ್ರ ವಿತರಿಸಿ ಬೀದಿಬದಿ ವ್ಯಾಪಾರಿಗಳ ಸಹಕಾರ ಸಂಘ ಮಾಡಿರುವುದು ಒಂದು ಐತಿಹಾಸಿಕ ಹೆಜ್ಜೆ ಎಂದು ಶ್ಲಾಘಸಿದರು.
ನಗರದ ಅಭಿವೃದ್ಧಿಗೆ ಬೀದಿ ವ್ಯಾಪಾರಿಗಳು ಕೈಜೋಡಿಸಬೇಕೆಂದು ಕರೆ ನೀಡಿದರು.
ಮುಖ್ಯ ಅತಿಥಿಯಾಗಿದ್ದ ಪದ್ಮಶ್ರೀ ಹಾಜಬ್ಬ ಹರೇಕಳ ಮಾತನಾಡುತ್ತಾ ನಾನು ಸ್ವತಃ ಬೀದಿ ವ್ಯಾಪಾರಿಯಾಗಿ ಅವರ ಹೊಟ್ಟೆಪಾಡಿನ ಕಷ್ಟಗಳು ನನಗೆ ಚೆನ್ನಾಗಿ ತಿಳಿದಿದೆ. ನಾನು ಇಂದು ಪ್ರಧಾನಿ, ರಾಷ್ಟ್ರಪತಿಗಳಿಂದ ಪ್ರಶಸ್ತಿ ಸ್ವೀಕರಿಸಿರಬಹುದು ಆದರೆ ನನ್ನ ಕಷ್ಟದ ದಿನಗಳ ಬಗ್ಗೆ ಇನ್ನು ನೆನಪಿದೆ ಎಂದ ಅವರು, ಬೀದಿವ್ಯಾಪಾರಿಗಳು ಸ್ವಾಭಿಮಾನವನ್ನು ಎಂದೂ ಬಿಟ್ಟು ಕೊಡುವವರಲ್ಲ ಎಂದರು.
ಕಾರ್ಮಿಕ ಮುಖಂಡ ಸುನಿಲ್ ಕುಮಾರ್ ಬಜಾಲ್, ಭಗವತಿ ಕೋ ಆಪರೇಟಿವ್ ಬ್ಯಾಂಕಿನ ಅಧ್ಯಕ್ಷರಾದ ಬಿ. ಎಂ. ಮಾಧವ, ಪರಿವರ್ತನ ಗ್ರಾಮೀಣ ಸೊಸೈಟಿಯ ನಿರ್ದೇಶಕ ಡಿ ಕೃಷ್ಣಾನಂದ, ಚಿಂತಕಿ ಡಾ. ರೀಟಾ ನೋರೋನ್ಹ, ಡಿವೈಎಫ್ಐ ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್, ಸಾಮರಸ್ಯ ಮಂಗಳೂರಿನ ಅಧ್ಯಕ್ಷೆ ಮಂಜುಳಾ ನಾಯಕ್, ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾಧ್ಯಕ್ಷ ಕೃಷ್ಣಪ್ಪ ಸಾಲಿಯಾನ್, ಸಂಘದ ಉಪಾಧ್ಯಕ್ಷ ಹರೀಶ್ ಪೂಜಾರಿ ಶುಭ ಹಾರೈಸಿ ಮಾತನಾಡಿದರು.
ಸಿಐಟಿಯು ಅಧ್ಯಕ್ಷರೂ ನಾಗುರಿ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕಿನ ಉಪಾಧ್ಯಕ್ಷರಾದ ಜೆ. ಬಾಲಕೃಷ್ಣ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ವಕೀಲರಾದ ಚರಣ್ ಶೆಟ್ಟಿ, ಸಾಮಾಜಿಕ ಕಾರ್ಯಕರ್ತರಾದ ಬಾವ ಪದರಂಗಿ, ಗ್ಲೋಬಲ್ ಮಾರ್ಕೆಟ್ ವರ್ತಕರ ಸಂಘದ ಅಧ್ಯಕ್ಷರಾದ ಮೊಹಮ್ಮದ್ ಫೈರೋಜ್, ಕಾರ್ಮಿಕ ಮುಖಂಡ ಸುಕುಮಾರ್ ತೊಕ್ಕೊಟ್ಟು, ಜಾತ್ರೆ ವ್ಯಾಪಾರಸ್ಥರ ಸಮನ್ವಯ ಸಮಿತಿಯ ಉಡುಪಿ ಜಿಲ್ಲಾ ಸಂಚಾಲಕ ಕವಿರಾಜ್ ಉಡುಪಿ, ಮಾಜಿ ಪಾಲಿಕೆ ಸದಸ್ಯ ದಯಾನಂದ ಶೆಟ್ಟಿ, ಬೀದಿಬದಿ ವ್ಯಾಪಾರಸ್ಥರ ಸಂಘದ ಅಧ್ಯಕ್ಷರಾದ ಮೊಹಮ್ಮದ್ ಮುಸ್ತಫಾ, ಮುಖಂಡರಾದ ಮೊಹಮ್ಮದ್ ಆಸೀಫ್, ಶ್ರೀಧರ ಭಂಡಾರಿ, ಮೇರಿ ಡಿಸೋಜ, ಮೇಬಲ್ ಡಿಸೋಜ, ನೌಶಾದ್ ಉಳ್ಳಾಲ, ಇಸ್ಮಾಯಿಲ್ ಉಳ್ಳಾಲ ಅಬ್ದುಲ್ ರಹಿಮಾನ್, ಹಸನ್ ಕುದ್ರೋಳಿ, ಆದಂ ಬಜಾಲ್, ಶಂಕರ್ ಸಿ. ಎಸ್, ಶ್ರೀನಿವಾಸ್ ಕಾವೂರು, ಕಾಜ ಮೊಯಿದಿನ್, ಹನೀಫ್ ಸುರತ್ಕಲ್, ಪಿ ಜಿ ರಫೀಕ್ ಬೆಂಗರೆ, ಗಜಾನಂದ ರೈ, ಜಿತೇಂದ್ರ, ರೂಪೇಶ್ ನಾಯಕ್, ಹಂಝ ಪಡುಬಿದ್ರೆ, ನವಾಜ್,ಆನಂದ, ಅನಿಲ್ ಕಂದಕ್,ನಜೀರ್ ಮುಂತಾದವರು ಉಪಸ್ಥಿತರಿದ್ದರು.
ಸಂಘದ ನಿರ್ದೇಶಕರಾದ ಪ್ರವೀಣ್ ಕುಮಾರ್ ಅವರು ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರೆ, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಶ್ರೇಯಾ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು