4:15 PM Friday17 - May 2024
ಬ್ರೇಕಿಂಗ್ ನ್ಯೂಸ್
ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ… ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,…

ಇತ್ತೀಚಿನ ಸುದ್ದಿ

ಮನೆ ಬಾಗಿಲಿಗೆ ವೈದ್ಯಕೀಯ ಸೇವೆ: ನಾಳೆ ಬೃಹತ್ ಉಚಿತ ಆರೋಗ್ಯ ತಪಾಸಣೆ ಶಿಬಿರ: ಡಾ ಮಲ್ಲಿಕಾರ್ಜುನ ಹಂಜಿ

02/02/2024, 13:45

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಕರ್ನಾಟಕದ ಇತಿಹಾಸದಲ್ಲಿ ಪ್ರತಿ ಮನೆ ಬಾಗಿಲಿಗೆ ವೈದ್ಯಕೀಯ ಸೇವೆಯನ್ನು ಕೊಟ್ಟಿದ್ದು ಕೆಎಲ್ಇ ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ಜವಾಹರ ಲಾಲ್ ನೆಹರು ವೈದ್ಯಕೀಯ ಮಹಾವಿದ್ಯಾಲಯ ಎಂಬುವುದು ಹೆಮ್ಮೆಯ ವಿಷಯ, ಅದೇ ಸೇವೆಯನ್ನು ತಾಲೂಕಿನ ಪ್ರತಿಯೊಬ್ಬ ವ್ಯಕ್ತಿಗೂ ನೀಡುವ ಉದ್ದೇಶದಿಂದ ಬರುವ ಶನಿವಾರ 3 ರಂದು ತಾಲೂಕಿನ ತೆಲಸಂಗ ಗ್ರಾಮದ ಬಿ ವಿ ಸಂಘದ ಶಾಲೆಯಲ್ಲಿ ಅಮೀತ ಪ್ರಭಾಕರ ಕೋರೆ ಅಭಿಮಾನಿ ಬಳಗ, ಕೆಎಲ್ಇ ವೈದ್ಯಕೀಯ ಸಂಸ್ಥೆ ಹಾಗೂ ಜೆ ಎನ್ ಎಮ್ ಸಿ ಸಹಯೋಗದಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು ಹಿರಿಯ ವೈದ್ಯ ಡಾ ಮಲ್ಲಿಕಾರ್ಜುನ ಹಂಜಿ ಅವರು ಹೇಳಿದರು.
ಅವರು ಸ್ಥಳೀಯ ಎಸ್ ಎಸ್ ಎನ್ ಎಸ್ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡುತ್ತಾ ಈ ಬೃಹತ್ ಆರೋಗ್ಯ ಶಿಬಿರದಲ್ಲಿ ಹೃದಯ ರೋಗ, ಹೃದಯ ಶಸ್ತ್ರ ಚಿಕಿತ್ಸೆ, ಮೂತ್ರಕೋಶ, ಮೂತ್ರಪಿಂಡ ಚಿಕಿತ್ಸೆ, ಗ್ಯಾಸ್ಕೋ ಸರ್ಜರಿ, ಮಧುಮೇಹ ಚಿಕಿತ್ಸೆ, ನೇತ್ರ ಶಸ್ತ್ರ ಚಿಕಿತ್ಸೆಣ ಶ್ವಾಸಕೋಶ ಚಿಕಿತ್ಸೆ, ಎಲುಬು ಕೀಲು ಮರುಜೋಡನೆ, ಕಿವಿ ಮೂಗು ಗಂಟಲು ಚಿಕಿತ್ಸೆ, ಕ್ಯಾನ್ಸರ್ ರೋಗ ಚಿಕಿತ್ಸೆ, ಸ್ತ್ರೀ ರೋಗ ಚಿಕಿತ್ಸೆ, ಚಿಕ್ಕಮಕ್ಕಳ ಚಿಕಿತ್ಸೆ, ಚರ್ಮರೋಗ ಚಿಕಿತ್ಸೆ, ದಂತರೋಗ ಚಿಕಿತ್ಸೆ ಸೇರಿದಂತೆ ಅನೇಕ ಗಂಭೀರ ಚಿಕಿತ್ಸೆಗಳನ್ನೂ ಸಹ ಮಾಡುವ ವ್ಯವಸ್ಥೆ ಮಾಡಲಾಗಿದೆ.
ಹಲವು ರೋಗಗಳಿಗೆ ಸ್ಥಳದಲ್ಲೇ ಚಿಕಿತ್ಸೆ ನೀಡಲಾಗುತ್ತಿದ್ದು ಗಂಭೀರ ಚಿಕಿತ್ಸೆಗಳಿಗಾಗಿ ಬೆಳಗಾವಿಯ ಕೆಎಲ್ಇ ಆಸ್ಪತ್ರೆಗೆ ಪಾಸ್ ಕೊಟ್ಟು ಕಳಿಸಿ ಚಿಕಿತ್ಸೆ ನೀಡುವ ವ್ಯವಸ್ಥೆ ಮಾಡಲಾಗಿದೆ, ಅಲ್ಲಿ ಬರುವ ಪ್ರತಿಯೊಬ್ಬ ವ್ಯಕ್ತಿಗೆ ಊಟದ ವ್ಯವಸ್ಥೆ ಮಾಡಿದ್ದು ಪ್ರತಿಯೊಬ್ಬ ಸಾರ್ವಜನಿಕರು ಅಮೀತ ಪ್ರಭಾಕರ ಕೋರೆ ಅಭಿಮಾನಿ ಬಳಗದ ಈ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರದ ಸದುಪಯೋಗ ಪಡೆಸಿಕೊಳ್ಳಿ ಎಂದು ಸಲಹೆ ನೀಡಿದರು.


ಈ ವೇಳೆ ಶಂಭು ಮಮದಾಪೂರ, ವಿಜಯ ಬುರ್ಲಿ, ಡಾ ಅಲ್ಲಂಪ್ರಭು, ಅಲ್ಲಪ್ಪ ನಿಡೋಣಿ, ರಾಜು ಹಾದಿಮನಿ, ಅಶೋಕ ಬುರ್ಲಿ, ಪ್ರಕಾಶ ಪಾಟೀಲ, ಎಸ್ ಜಿ ಸಲಗರೆ, ಬಿ ಎಸ್ ಕಾಂಬಳೆ, ಶಿವು ಹಂಜಿ ಸೇರಿದಂತೆ ಇತರರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು