2:43 PM Friday17 - May 2024
ಬ್ರೇಕಿಂಗ್ ನ್ಯೂಸ್
ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ… ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,…

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು ಜಿಲ್ಲೆಯಲ್ಲಿ ಮತ್ತೊಂದು ಮಂಗನಕಾಯಿಲೆ ಪ್ರಕರಣ: ಮಹಿಳೆಯಲ್ಲಿ ವೈರಸ್ ಪತ್ತೆ; ಸೋಂಕಿತ ಸಂಖ್ಯೆ 9ಕ್ಕೇರಿಕೆ

08/02/2024, 14:17

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಂಗನ ಕಾಯಿಲೆ ಆತಂಕ ಮತ್ತಷ್ಟು ಹೆಚ್ಚುತ್ತಿದ್ದು, ಮಹಿಳೆಯೊಬ್ಬರಲ್ಲಿ ಕೆ.ಎಫ್.ಡಿ ವೈರಸ್ ದೃಢಪಟ್ಟಿದೆ. ಇದರೊಂದಿಗೆ ಮಂಗನಕಾಯಿಲೆ ಈಡಾದವರ ಸಂಖ್ಯೆ 9ಕ್ಕೇರಿದೆ.
ಜಿಲ್ಲೆಯಲ್ಲಿ ಈಗಾಗಲೇ ಒಬ್ಬರು ಮಂಗನಕಾಯಿಲೆಗೆ ಬಲಿಯಾಗಿದ್ದಾರೆ. ಇದೀಗ 55 ವರ್ಷದ ಮಹಿಳೆಯೊಬ್ಬರಲ್ಲಿ ಕೆ.ಎಫ್.ಡಿ ಪ್ರಕರಣ ಧೃಡಪಟ್ಟಿದೆ.

9 ಮಂದಿಯಲ್ಲಿ‌‌ ಓರ್ವ ವೃದ್ಧ ಮೃತಪಟ್ಟಿದ್ದಾರೆ. ನಾಲ್ವರು ಗುಣಮುಖರಾಗಿದ್ದಾರೆ. ನಾಲ್ವರು ಕೆ.ಎಫ್.ಡಿ ಪೀಡಿತರಿಗೆ ಕೊಪ್ಪ ತಾಲೂಕು ಆಸ್ಪತ್ರೆಯಲ್ಲಿ‌ ಚಿಕಿತ್ಸೆ ನೀಡಲಾಗುತ್ತಿದೆ. ಪರೀಕ್ಷೆಗೊಳಪಟ್ಟಿದ್ದ 7 ಮಂದಿ ಪೈಕಿ ಒಬ್ಬರಲ್ಲಿ ಕೆ.ಎಫ್.ಡಿ ಪತ್ತೆಯಾಗಿತ್ತು.ಕಾಫಿ ಎಸ್ಟೇಟ್ ಭಾಗದಲ್ಲಿ ಕೆ.ಎಫ್‌.ಡಿ ಪ್ರಕರಣಗಳು ಹೆಚ್ಚಾಗಿ ಕಂಡುಬರುತ್ತಿದೆ. ಕೊಪ್ಪ ತಾಲೂಕಿನಲ್ಲೇ ಹೆಚ್ಚಾಗಿ ಕಂಡು ಬರುತ್ತಿರುವ ಮಂಗನ ಕಾಯಿಲೆ ಪ್ರಕರಣದಿಂದ ಜನರು ಆತಂಕಕ್ಕೀಡಾಗಿದ್ದಾರೆ.
ಮುಂಜಾಗ್ರತಾ ಕ್ರಮವಾಗಿ ಆರೋಗ್ಯ ಇಲಾಖೆ ಕೊಪ್ಪ ಸರ್ಕಾರಿ ಆಸ್ಪತ್ರೆಯಲ್ಲಿ ಕೆ.ಎಫ್.ಡಿ ವಾರ್ಡ್ ತೆರೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು