6:48 PM Saturday20 - April 2024
ಬ್ರೇಕಿಂಗ್ ನ್ಯೂಸ್
ಮಂಗಳೂರು ಮಾಜಿ ಮೇಯರ್ ಕವಿತಾ ಸನಿಲ್ ಬಿಜೆಪಿ ಸೇರ್ಪಡೆ: ಪಕ್ಷದ ಧ್ವಜ ನೀಡಿ… ಮಂಗಳೂರಿನಲ್ಲಿ ಕರ್ಕಶ ಹಾರ್ನ್ ಗಳ ಕಿರಿಕಿರಿ ತಪ್ಪಿಸಲು ಪೊಲೀಸ್ ಕಾರ್ಯಾಚರಣೆ: ಹಾರ್ನ್ ಕಿತ್ತೆಸೆದು… ಎಡಪದವು: ಅಂಗಡಿಗೆ ಗುದ್ದಿದ ಲಾರಿಯಿಂದ ಸರಣಿ ಅಪಘಾತ; ಬಸ್, ಕಾರು, ಸ್ಕೂಟರ್ ಜಖಂ;… ಈ ಚುನಾವಣೆ ಎರಡು ಸಿದ್ದಾಂತಗಳ ನಡುವಿನ ಹೋರಾಟ; ಸಂವಿಧಾನ, ಪ್ರಜಾತಂತ್ರ ಉಳಿವಿಗೆ ಕಾಂಗ್ರೆಸ್… ನಂಜನಗೂಡಿನಲ್ಲಿ ಸಂಭ್ರಮ- ಸಡಗರದ ಶ್ರೀ ರಾಮೇಶ್ವರ ರಥೋತ್ಸವ, ಜಾತ್ರಾ ಮಹೋತ್ಸವ ಬೈಕಿಗೆ ಕಾರು ಡಿಕ್ಕಿ: ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿ ದಾರುಣ ಸಾವು ರಾಮೇಶ್ವರ ದೇಗುಲಕ್ಕೆ ಮಾಜಿ ಪ್ರಧಾನಿ ದೇವೇಗೌಡ ಭೇಟಿ; ವಿಶೇಷ ಪೂಜೆ ಸಲ್ಲಿಕೆ; ಬಿಜೆಪಿ… ದಕ್ಷಿಣ ಕನ್ನಡ ಜಿಲ್ಲೆ ಮತ್ತೊಮ್ಮೆ ಕಾಂಗ್ರೆಸಿನ ಭದ್ರಕೋಟೆಯಾಗಲಿದೆ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಏ.24ರಂದು ಉಡುಪಿಗೆ: ಕೋಟ ಪರ ರೋಡ್… ವಿಜಯಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ನಾಮಪತ್ರ ಸಲ್ಲಿಕೆ: ಬೃಹತ್…

ಇತ್ತೀಚಿನ ಸುದ್ದಿ

ಪಾಲಿಕೆಯ ಚರಿತ್ರೆಯಲ್ಲೇ ಮೊದಲ ಬಾರಿಗೆ ಅಂಗಳಕ್ಕೂ ತೆರಿಗೆ: ಪ್ರತಿಪಕ್ಷದ ನಾಯಕ ಪ್ರವೀಣ್ ಚಂದ್ರ ಆಳ್ವ ಆಕ್ರೋಶ

02/03/2024, 10:55

ಮಂಗಳೂರು(reporterkarnataka.com): ಮಂಗಳೂರು ಮಹಾನಗರ ಪಾಲಿಕೆಯ ಚರಿತ್ರೆಯಲ್ಲೇ ಮೊದಲ ಬಾರಿಗೆ ತೆರಿಗೆ ಖಾಲಿ ಜಾಗಕ್ಕೂ ಹಾಕುವ ಮೂಲಕ ಅಂಗಳಕ್ಕೂ ತೆರಿಗೆ ಕಟ್ಟುವ ಪರಿಸ್ಥಿತಿ ನಿರ್ಮಿಸಲಾಗಿದೆ ಎಂದು ಪಾಲಿಕೆ ಪ್ರತಿಪಕ್ಷದ ನಾಯಕ ಪ್ರವೀಣ್ ಚಂದ್ರ ಆಳ್ವ ಆಕ್ರೋಶ ವ್ಯಕ್ತಪಡಿಸಿದರು.

ನಗರದ ಮಲ್ಲಿಕಟ್ಟೆಯ ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು,ಕೇಂದ್ರ ಸರಕಾರದ ನಿರ್ದೇಶನದ ಮೇರೆಗೆ 2021ರ ಫೆಬ್ರವರಿಯಲ್ಲಿ ಜಾರಿಗೊಳಿಸಲಾದ ಆಸ್ತಿ ತೆರಿಗೆ ಹೆಚ್ಚಳವನ್ನು ಆ ಸಂದರ್ಭದಲ್ಲಿ ಬಿಜೆಪಿಯ ತ್ರಿಬಲ್ ಇಂಜಿನ್ ಸರಕಾರವಿದ್ದರೂ ಮಾತನಾಡದೆ, ಇದೀಗ ರಾಜ್ಯದ ಕಾಂಗ್ರೆಸ್ ಸರಕಾರದ ವಿರುದ್ಧ ಆರೋಪ ಮಾಡುತ್ತಿರುವುದು ಬಿಜೆಪಿಯ ಇಬ್ಬಗೆಯ ನೀತಿ ಎಂದು ಆಳ್ವ ನುಡಿದರು.
ಮನಪಾ ಚರಿತ್ರೆಯಲ್ಲೇ ಮೊದಲ ಬಾರಿಗೆ ತೆರಿಗೆ ಖಾಲಿ ಜಾಗಕ್ಕೂ ಹಾಕುವ ಮೂಲಕ ಅಂಗಳಕ್ಕೂ ತೆರಿಗೆ ಕಟ್ಟುವ ಪರಿಸ್ಥಿತಿ ನಿರ್ಮಿಸಲಾಗಿದೆ. ಕೇಂದ್ರ ಸರಕಾರದ ನಿರ್ದೇಶನದ ಮೇರೆಗೆ ತೆರಿಗೆ ಹೆಚ್ಚಳಕ್ಕೆ ಸಂಬಂಧಿಸಿ 2021ರ ಫೆಬ್ರವರಿ 19ರಂದು ರಾಜ್ಯ ಸರಕಾರದಿಂದ ನಿರ್ದೇಶನ ಬಂದಿರುವ ಬಗ್ಗೆ ಆಗಿನ ಮೇಯರ್ ಅವರು ಪ್ರಸ್ತಾಪಿಸಿದ್ದರು. ಮನಪಾ ಸಾಮಾನ್ಯ ಪರಿಷತ್ನಲ್ಲಿ ಈ ಬಗ್ಗೆ ಚರ್ಚೆಯಾದಾಗ ಪ್ರತಿಪಕ್ಷವಾದ ಕಾಂಗ್ರೆಸ್ ಖಾಲಿ ಜಾಗಕ್ಕೆ ತೆರಿಗೆ ಹಾಕಿದರೆ ಜನಸಾಮಾನ್ಯರಿಗೆ ತೊಂದರೆ ಆಗಲಿದೆ ಎಂದು ವಿರೋಧ ವ್ಯಕ್ತಪಡಿಸಿತ್ತು. ಆ ಸಂದರ್ಭ ಅಂದಿನ ಮೇಯರ್ ಮೌನವಾಗಿದ್ದರು. ಇದೀಗ ಮೇಯರ್ ಅವರು ನಿನ್ನೆ ಮಾಧ್ಯಮಕ್ಕೆ ಮಾಹಿತಿ ನೀಡಿ, ಆಸ್ತಿ ತೆರಿಗೆಗೆ ಸಂಬಂಧಿಸಿ ಚರ್ಚಿಸಲು ಸಭೆ ಕರೆಯಲಾಗಿದ್ದು, ಪ್ರತಿಪಕ್ಷದವರು ಭಾಗವಹಿಸಿದ್ದರು ಎಂದು ಹೇಳಿದ್ದಾರೆ. ನಾವು ಸಭೆಗಾಗಿ ಹೋಗಿದ್ದರೂ ವಿರೋಧಿಸಿ ಹೊರನಡೆದಿದ್ದೆವು ಎಂದು ಪ್ರವೀಣ್ ಚಂದ್ರ ಆಳ್ವ ಹೇಳಿದರು.
ಸ್ವಯಂ ಘೋಷಿತ ಆಸ್ತಿ ತೆರಿಗೆ ಜಾರಿಯಾದ ಬಳಿಕ ಪಾಲಿಕೆಯಲ್ಲಿ 2008-09ನೇ ಸಾಲಿನ ಭೂ ನಿರ್ದೇಶನ ಮೌಲ್ಯದ ಆಧಾರದಲ್ಲಿ ತೆರಿಗೆ ವಿಧಿಸಲಾಗುತ್ತಿತ್ತು. 2013ರ ಸಂದರ್ಭದಲ್ಲಿಯೂ ಬಿಜೆಪಿಯು ಚುನಾವಣೆಯ ಸಂದರ್ಭ, ಕಾಂಗ್ರೆಸ್ ಆಡಳಿತದ ಮೇಲೆ ಆರೋಪ ಮಾಡಿ ತುಳಸಿಕಟ್ಟೆಗೂ ತೆರಿಗೆ ಎಂದಿದ್ದರು. ಆದರೆ ತೆರಿಗೆ ಹೆಚ್ಚಳಕ್ಕೆ ಕಾಂಗ್ರೆಸ್ ಅವಧಿಯಲ್ಲಿ ಅವಕಾಶ ನೀಡಿರಲಿಲ್ಲ. ಆದರೆ 2019ರಲ್ಲಿ ರಾಜ್ಯ ಹಾಗೂ ಮನಪಾದಲ್ಲಿ ಬಿಜೆಪಿ ಆಡಳಿತ ಬಂದ ಬಳಿಕ ತೆರಿಗೆ ಹೆಚ್ಚಳದ ಜತೆಗೆ ನೀರಿನ ದರದಲ್ಲೂ ಏರಿಕೆಯಾಗಿದೆ. 24000 ಲೀಟರ್ವರೆಗೆ 65 ರೂ.ಗಳಿಗೆ ಸಿಗುತ್ತಿದ್ದ ನೀರು, ಬಿಜೆಪಿ ಆಡಳಿತಾವಧಿಯಲ್ಲಿ 8000 ಲೀಟರ್ ಗೆ ಇಳಿಕೆ ಮಾಡಿ 102 ರೂ.ಗಳಿಗೆ ಏರಿಕೆ ಮಾಡಲಾಗಿದೆ. ತ್ರಿಬಲ್ ಇಂಜಿನ್ ಸರಕಾರವಿದ್ದರೂ ನೀರಿನ ಬೆಲೆ ಇಳಿಸುವಲ್ಲಿಯೂ ಬಿಜೆಪಿ ಕ್ರಮ ವಹಿಸಿಲ್ಲ ಎಂದು ಆರೋಪಿಸಿದರು.
ಗುರುವಾರ ಪಾಲಿಕೆಯ ಸಾಮಾನ್ಯ ಸಭೆಯಲ್ಲಿಯೂ ಮೇಯರ್ ಅವರ ನಡೆ ಸದನಕ್ಕೆ ಅಗೌರವ ನೀಡುವಂತಾಗಿತ್ತು. ಆಸ್ತಿ ತೆರಿಗೆ ವಿಚಾರದಲ್ಲಿ ಪ್ರತಿಪಕ್ಷದವರನ್ನು ತಮ್ಮ ಚೇಂಬರಿಗೆ ಕರೆಸಿ ಮಾತನಾಡುವ ಸೌಜನ್ಯ ತೋರಿಸಿಲ್ಲ. ಬದಲಾಗಿ ಸದನ ಮೊಟಕುಗೊಳಿಸಿ ಏನೂ ಹೇಳದೆ ಎದ್ದು ಹೋಗಿದ್ದಾರೆ. ಬಳಿಕ ರಾಜ್ಯ ಸರಕಾರದ ವಿರುದ್ಧ ಸುಳ್ಳು ಆರೋಪ ಮಾಡಿದ್ದಾರೆ ಎಂದರು. .
ಕಾಂಗ್ರೆಸ್ ಸರಕಾರದಿಂದ ಮನಪಾದ ತೆರಿಗೆ ಹೆಚ್ಚಳ ಜಾಸ್ತಿ ಮಾಡಲಾಗಿದೆ ಎಂದು ಆರೋಪಿಸುತ್ತಿರುವ ಬಿಜೆಪಿ ನಮ್ಮ ಜತೆಗೆ ನೇರಾ ನೇರಾ ಸಂವಾದಕ್ಕೆ ಬರಲಿ. ದಾಖಲೆಗಳೊಂದಿಗೆ ನಾವು ಉತ್ತರ ನೀಡಲು ತಯಾರಿದ್ದೇವೆ ಎಂದು ಮನಪಾ ಸದಸ್ಯ ವಿನಯರಾಜ್ ಸವಾಲು ಹಾಕಿದರು.
ಪತ್ರಿಕಾಗೋಷ್ಠಿಯಲ್ಲಿ ಮಾಜಿ ಮೇಯರ್ ಶಶಿಧರ ಹೆಗ್ಡೆ, ಲ್ಯಾನ್ಸಿಲಾಟ್ ಪಿಂಟೋ, ಅಬ್ದುಲ್ ರವೂಫ್, ನವೀನ್ ಡಿಸೋಜ, ಅನಿಲ್ ಪೂಜಾರಿ, ಕೇಶವ ಮರೋಳಿ, ಸಂಶುದ್ದೀನ್, ಝೀನತ್ ಸಂಶುದ್ದೀನ್ ಮತ್ತಿತರರು ಉಪಸ್ಥಿರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು