8:33 PM Friday3 - May 2024
ಬ್ರೇಕಿಂಗ್ ನ್ಯೂಸ್
ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ… ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ… ಅಶ್ಲೀಲ ವೀಡಿಯೊ ಪ್ರಕರಣ: ಬಂಧನದಿಂದ ತಪ್ಪಿಸಿಕೊಳ್ಳಲು ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ… ದತ್ತಪೀಠ ಬಳಿ 100 ಅಡಿ ಆಳಕ್ಕೆ ಉರುಳಿ ಬಿದ್ದ ಪ್ರವಾಸಿಗರ ಮಿನಿ ಬಸ್:…

ಇತ್ತೀಚಿನ ಸುದ್ದಿ

ನಂಜನಗೂಡು: ನುಡಿದಂತೆ ನಡೆಯುತ್ತಿರುವ ಶಾಸಕ ದರ್ಶನ್ ಧ್ರುವನಾರಾಯಣ್; ಅಶ್ವಮೇಧ ಸಾರಿಗೆ ಬಸ್ ವ್ಯವಸ್ಥೆಗೆ ಚಾಲನೆ

05/03/2024, 17:59

*ವಿದ್ಯಾರ್ಥಿಗಳು ಕಾರ್ಮಿಕರು ಮತ್ತು ಸಾರ್ವಜನಿಕರ ಅನುಕೂಲಕ್ಕಾಗಿ ರಸ್ತೆಗಳಿದ 10 ನೂತನ ಅಶ್ವಮೇಧ ಬಸ್*

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದ ಬೆನ್ನಲ್ಲೇ ರಾಜ್ಯದ್ಯಂತ ಮಹಿಳೆಯರಿಗೆ ಸಾರಿಗೆ ಬಸ್‌ನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಿರುವ ರಾಜ್ಯ ಸರ್ಕಾರ ಇದೀಗ ಸಾರಿಗೆ ಸಂಸ್ಥೆಗಳ ಬಸ್ಸುಗಳನ್ನು ಮತ್ತಷ್ಟು ಸುಸಜ್ಜಿತಗೊಳಿಸಲು ಮುಂದಾಗಿದ್ದು, ಇದಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಹೊಸದಾಗಿ ಆರಂಭಿಸಿರುವ ʻಅಶ್ವಮೇಧ ಬಸ್‌ʼ ಸೇವೆಗೆ ಇಂದು ನಂಜನಗೂಡಿನಲ್ಲಿ ಶಾಸಕ ದರ್ಶನ್ ಧ್ರುವನಾರಾಯಣ್ ವಿದುಕ್ತವಾಗಿ ಚಾಲನೆ ನೀಡಿದರು.
ನಂಜನಗೂಡು ಪಟ್ಟಣದ ಹಳೇ ಬಸ್ ನಿಲ್ದಾಣದಲ್ಲಿ ನೂತನವಾಗಿ ಸುಮಾರು 10 ಅಶ್ವಮೇಧ ಬಸ್ ಗಳಿಗೆ ಶಾಸಕ ದರ್ಶನ್ ಧ್ರುವನಾರಾಯಣ್ ವಿಶೇಷ ಪೂಜೆ ಸಲ್ಲಿಸಿ, ಟೇಪ್ ಕತ್ತರಿಸಿ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು.


ನಂಜನಗೂಡು ತಾಲೂಕಿನ ಕಾಡಂಚಿನ ಗಡಿ ಗ್ರಾಮಗಳಿಂದ ಪಟ್ಟಣಕ್ಕೆ ಶಾಲಾ ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳು ಹಾಗೂ ಪ್ರತಿನಿತ್ಯ ಕೆಲಸ ಕಾರ್ಯಗಳಿಗೆ ಹೋಗುವ ಕಾರ್ಮಿಕರಿಗೆ ಹಾಗೂ ಸಾರ್ವಜನಿಕರಿಗೆ ಬಸ್ಸುಗಳ ಕೊರತೆಯಿಂದಾಗಿ ಸಾಕಷ್ಟು ತೊಂದರೆಗಳನ್ನು ಅನುಭವಿಸುತ್ತಿದ್ದರು. ನಾನು ಗ್ರಾಮೀಣ ಪ್ರದೇಶಗಳಿಗೆ ಭೇಟಿ ನೀಡಿದಾಗ ಹೆಡಿಯಾಲ ಸುತ್ತಮುತ್ತಲ ಸಾರ್ವಜನಿಕರು ಸಾರಿಗೆ ವಾಹನಗಳ ಸಮಸ್ಯೆಗಳ ಬಗ್ಗೆ ಸಾಕಷ್ಟು ದೂರು ತಿಳಿಸುತ್ತಿದ್ದರು. ಇದನ್ನು ಮನಗಂಡು ನಾನು ಇತ್ತೀಚಿಗೆ ನಡೆದ ವಿಧಾನಸಭಾ ಅಧಿವೇಶನದಲ್ಲಿ ಎರಡು ಬಾರಿ ನಂಜನಗೂಡು ತಾಲೂಕಿಗೆ ಹೆಚ್ಚುವರಿ ಸಾರಿಗೆ ಬಸ್ ವ್ಯವಸ್ಥೆಯನ್ನು ಕಲ್ಪಿಸಿ ಕೊಡುವಂತೆ ರಾಜ್ಯದ ಮುಖ್ಯಮಂತ್ರಿಗಳು ಮತ್ತು ಸಾರಿಗೆ ಸಚಿವರ ಬಳಿ ಮನವಿ ಮಾಡಿದ್ದೆ ಇದಕ್ಕೆ ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯರವರು ಹಾಗೂ ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ಅವರು ಸ್ಪಂದಿಸಿ, ನಮ್ಮ ತಾಲೂಕಿಗೆ ಪ್ರಥಮ ಬಾರಿಗೆ ನೂತನವಾಗಿ ಈಗಾಗಲೇ 10 ಅಶ್ವಮೇಧ ಬಸ್ ಗಳನ್ನು ಕಲ್ಪಿಸಿಕೊಟ್ಟಿದ್ದಾರೆ. ಮುಂದಿನ ದಿನಗಳಲ್ಲಿ ಇನ್ನು ಹೆಚ್ಚುವರಿ ಬಸ್ ಗಳನ್ನು ನೀಡಲಾಗುವುದು ಎಂದು ಭರವಸೆ ನೀಡಿದ್ದಾರೆ.
ಕೂಲಿ ಕಾರ್ಮಿಕರು ಸಾರ್ವಜನಿಕರು ಮತ್ತು ಶಾಲಾ-ಕಾಲೇಜಿನ ವಿದ್ಯಾರ್ಥಿಗಳು ಈ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳಬೇಕು. ಶಾಲಾ ಕಾಲೇಜುಗಳು ಹೆಚ್ಚುವರಿ ಬಸ್ ಗಳನ್ನು ಬಿಡುವಂತೆ ಸಾರಿಗೆ ಇಲಾಖೆಯ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ ಮುಂಬರುವ ದಿನಗಳಲ್ಲಿ ನಂಜನಗೂಡು ತಾಲೂಕಿನಾದ್ಯಂತ ಸರ್ಕಾರಿ ಸಾರಿಗೆ ವಾಹನಗಳ ಕೊರತೆ ಇರುವುದಿಲ್ಲ ಎಂದು ಶಾಸಕ ದರ್ಶನ್ ದ್ರುವ ನಾರಾಯಣ ತಿಳಿಸಿದರು
ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ಮೈಸೂರು ಸಾರಿಗೆ ವಿಭಾಗದ ವಿಭಾಗಿಯ ನಿಯಂತ್ರಣ ಅಧಿಕಾರಿ ವೀರೇಶ್, ನಂಜನಗೂಡು ಡಿಪೋ ಮ್ಯಾನೇಜರ್ ತ್ಯಾಗರಾಜು, ಸಾರಿಗೆ ಭದ್ರತಾ ಜಾಗೃತ ಅಧಿಕಾರಿ ಶಿವರಾಜ್ ಗೌಡ, ಬಸವರಾಜು ಸೇರಿದಂತೆ ಹಲವರು ಭಾಗವಹಿಸಿದ್ದರು.
ಇತ್ತೀಚೆಗೆ ನಡೆದ ವಿಧಾನಸಭಾ ಅಧಿವೇಶನದ ಸಂದರ್ಭದಲ್ಲಿ ನಾನು ಎರಡು ಬಾರಿ ಅವಕಾಶ ಸಿಕ್ಕಿದ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಗ್ರಾಮೀಣ ಪ್ರದೇಶಗಳಿಂದ ಪಟ್ಟಣಕ್ಕೆ ಆಗಮಿಸುವ ಕೂಲಿ ಕಾರ್ಮಿಕರಿಗೆ ಹಾಗೂ ದಿನನಿತ್ಯ ಪಟ್ಟಣದಲ್ಲಿ ಸಂಚರಿಸುವ ಸಾರ್ವಜನಿಕರ ಅನುಕೂಲಕ್ಕಾಗಿ ಸಾರಿಗೆ ಬಸ್ ಕುಂದು ಕೊರತೆಗಳ ಬಗ್ಗೆ ನಿವಾರಣೆ ಮಾಡಲು ಮದುವೆಸನದ ಸಂದರ್ಭದಲ್ಲಿ ಚರ್ಚೆ ನಡೆಸಿದೆ ಇದನ್ನು ಅರಿತು ರಾಜ್ಯದ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಸಾರಿಗೆ ಸಚಿವರಾದ ರಾಮಲಿಂಗ ರೆಡ್ಡಿ ಪ್ರಥಮ ಬಾರಿಗೆ ನಂಜನಗೂಡಿನಲ್ಲಿ ಅಶ್ವಮೇಧ ಸಾರಿಗೆ ವಾಹನಗಳಿಗೆ ಚಾಲನೆ ನೀಡಲು ಅನುವು ಮಾಡಿಕೊಟ್ಟಿದ್ದಾರೆ. ಹಾಗಾಗಿ ಮುಖ್ಯಮಂತ್ರಿಗಳಿಗೆ ಮತ್ತು ಸಾರಿಗೆ ಸಚಿವರಿಗೆ ಧನ್ಯವಾದಗಳು ಎಂದು
ದರ್ಶನ್ ಧ್ರುವನಾರಾಯಣ್ ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು