7:12 PM Saturday20 - April 2024
ಬ್ರೇಕಿಂಗ್ ನ್ಯೂಸ್
ಮಂಗಳೂರು ಮಾಜಿ ಮೇಯರ್ ಕವಿತಾ ಸನಿಲ್ ಬಿಜೆಪಿ ಸೇರ್ಪಡೆ: ಪಕ್ಷದ ಧ್ವಜ ನೀಡಿ… ಮಂಗಳೂರಿನಲ್ಲಿ ಕರ್ಕಶ ಹಾರ್ನ್ ಗಳ ಕಿರಿಕಿರಿ ತಪ್ಪಿಸಲು ಪೊಲೀಸ್ ಕಾರ್ಯಾಚರಣೆ: ಹಾರ್ನ್ ಕಿತ್ತೆಸೆದು… ಎಡಪದವು: ಅಂಗಡಿಗೆ ಗುದ್ದಿದ ಲಾರಿಯಿಂದ ಸರಣಿ ಅಪಘಾತ; ಬಸ್, ಕಾರು, ಸ್ಕೂಟರ್ ಜಖಂ;… ಈ ಚುನಾವಣೆ ಎರಡು ಸಿದ್ದಾಂತಗಳ ನಡುವಿನ ಹೋರಾಟ; ಸಂವಿಧಾನ, ಪ್ರಜಾತಂತ್ರ ಉಳಿವಿಗೆ ಕಾಂಗ್ರೆಸ್… ನಂಜನಗೂಡಿನಲ್ಲಿ ಸಂಭ್ರಮ- ಸಡಗರದ ಶ್ರೀ ರಾಮೇಶ್ವರ ರಥೋತ್ಸವ, ಜಾತ್ರಾ ಮಹೋತ್ಸವ ಬೈಕಿಗೆ ಕಾರು ಡಿಕ್ಕಿ: ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿ ದಾರುಣ ಸಾವು ರಾಮೇಶ್ವರ ದೇಗುಲಕ್ಕೆ ಮಾಜಿ ಪ್ರಧಾನಿ ದೇವೇಗೌಡ ಭೇಟಿ; ವಿಶೇಷ ಪೂಜೆ ಸಲ್ಲಿಕೆ; ಬಿಜೆಪಿ… ದಕ್ಷಿಣ ಕನ್ನಡ ಜಿಲ್ಲೆ ಮತ್ತೊಮ್ಮೆ ಕಾಂಗ್ರೆಸಿನ ಭದ್ರಕೋಟೆಯಾಗಲಿದೆ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಏ.24ರಂದು ಉಡುಪಿಗೆ: ಕೋಟ ಪರ ರೋಡ್… ವಿಜಯಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ನಾಮಪತ್ರ ಸಲ್ಲಿಕೆ: ಬೃಹತ್…

ಇತ್ತೀಚಿನ ಸುದ್ದಿ

ದೇಶದ ಗದ್ದುಗೆಗೆ ಬಿಗ್ ಫೈಟ್: ಮತ್ತೊಮ್ಮೆ ಮೋದಿ- ರಾಹುಲ್ ಮುಖಾಮುಖಿ; ರಾಜ್ಯದಲ್ಲಿ ಏ.26 ಮತ್ತು ಮೇ 7ರಂದು ಎಲೆಕ್ಷನ್

16/03/2024, 19:02

ಹೊಸದಿಲ್ಲಿ(reporterkarnataka.com): ಮುಂಬರುವ ಲೋಕಸಭೆ ಚುನಾವಣೆಯ ದಿನಾಂಕ ಪ್ರಕಟಿಸಲಾಗಿದೆ. ದೇಶದಲ್ಲಿ ಒಟ್ಟು 7 ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಕರ್ನಾಟಕದಲ್ಲಿ 2 ಹಂತಗಳಲ್ಲಿ ಮತದಾನ ನಡೆಯಲಿದೆ. ಏಪ್ರಿಲ್ 26ರಂದು ದಕ್ಷಿಣ ಕರ್ನಾಟಕ ಹಾಗೂ ಮೇ 7ರಂದು ಉತ್ತರ ಕರ್ನಾಟಕದಲ್ಲಿ ಚುನಾವಣೆ ನಡೆಯಲಿದೆ ಎಂದು
ಎಂದು ಭಾರತೀಯ ಚುನಾವಣಾ ಆಯೋಗ ತಿಳಿಸಿದೆ.
ಚುನಾವಣೆಗಳ ಎಣಿಕೆ ಜೂನ್ 4ಕ್ಕೆ ನಿಗದಿಯಾಗಿದೆ.
ಲೋಕಸಭೆಗೆ ಏಪ್ರಿಲ್ 19 ರಂದು ಮತದಾನ ಆರಂಭ, ಜೂನ್ 4 ರಂದು ಎಣಿಕೆ
ನರೇಂದ್ರ ಮೋದಿ ಮತ್ತು ರಾಹುಲ್ ಗಾಂಧಿ ಮತ್ತೊಮ್ಮೆ ಮುಖಾಮುಖಿಯಾಗಲಿದ್ದಾರೆ, ಚುನಾವಣಾ ಫಲಿತಾಂಶಗಳನ್ನು ಜೂನ್ 4 ರಂದು ಪ್ರಕಟಿಸಲಾಗುವುದು.
ಪ್ರಸ್ತುತ ಸರ್ಕಾರದ ಅವಧಿ ಜೂನ್ 16ಕ್ಕೆ ಕೊನೆಗೊಳ್ಳುತ್ತಿದೆ.

*ಲೋಕಸಭೆ ಚುನಾವಣೆ ಪೂರ್ಣ ವೇಳಾಪಟ್ಟಿ;*

• ಹಂತ 1- ಏಪ್ರಿಲ್ 19, 2024
• ಹಂತ 2- 26 ಏಪ್ರಿಲ್ 2024
• ಹಂತ 3-7 ಮೇ 2024
• ಹಂತ 4 – 13 ಮೇ 2024
• ಹಂತ 5 – 20 ಮೇ 2024
• ಹಂತ 6 – 25 ಮೇ 2024
• ಹಂತ 7 – 1 ಜೂನ್ 2024
• ಜೂನ್ 4 ರಂದು ಎಣಿಕೆ

ಮತದಾರರು ಎಷ್ಟು?:
ಮುಖ್ಯ ಚುನಾವಣಾ ಕಮಿಷನರ್ ರಾಜೀವ್ ಕುಮಾರ್ ಪ್ರಕಾರ, ಮುಂಬರುವ ಚುನಾವಣೆಯಲ್ಲಿ 12 ಲಕ್ಷಕ್ಕೂ ಹೆಚ್ಚು ಮತಗಟ್ಟೆಗಳಲ್ಲಿ 96.8 ಕೋಟಿ ಜನರು ಮತ ಚಲಾಯಿಸಲು ಅರ್ಹರಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು