7:43 PM Saturday20 - April 2024
ಬ್ರೇಕಿಂಗ್ ನ್ಯೂಸ್
ಮಂಗಳೂರು ಮಾಜಿ ಮೇಯರ್ ಕವಿತಾ ಸನಿಲ್ ಬಿಜೆಪಿ ಸೇರ್ಪಡೆ: ಪಕ್ಷದ ಧ್ವಜ ನೀಡಿ… ಮಂಗಳೂರಿನಲ್ಲಿ ಕರ್ಕಶ ಹಾರ್ನ್ ಗಳ ಕಿರಿಕಿರಿ ತಪ್ಪಿಸಲು ಪೊಲೀಸ್ ಕಾರ್ಯಾಚರಣೆ: ಹಾರ್ನ್ ಕಿತ್ತೆಸೆದು… ಎಡಪದವು: ಅಂಗಡಿಗೆ ಗುದ್ದಿದ ಲಾರಿಯಿಂದ ಸರಣಿ ಅಪಘಾತ; ಬಸ್, ಕಾರು, ಸ್ಕೂಟರ್ ಜಖಂ;… ಈ ಚುನಾವಣೆ ಎರಡು ಸಿದ್ದಾಂತಗಳ ನಡುವಿನ ಹೋರಾಟ; ಸಂವಿಧಾನ, ಪ್ರಜಾತಂತ್ರ ಉಳಿವಿಗೆ ಕಾಂಗ್ರೆಸ್… ನಂಜನಗೂಡಿನಲ್ಲಿ ಸಂಭ್ರಮ- ಸಡಗರದ ಶ್ರೀ ರಾಮೇಶ್ವರ ರಥೋತ್ಸವ, ಜಾತ್ರಾ ಮಹೋತ್ಸವ ಬೈಕಿಗೆ ಕಾರು ಡಿಕ್ಕಿ: ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿ ದಾರುಣ ಸಾವು ರಾಮೇಶ್ವರ ದೇಗುಲಕ್ಕೆ ಮಾಜಿ ಪ್ರಧಾನಿ ದೇವೇಗೌಡ ಭೇಟಿ; ವಿಶೇಷ ಪೂಜೆ ಸಲ್ಲಿಕೆ; ಬಿಜೆಪಿ… ದಕ್ಷಿಣ ಕನ್ನಡ ಜಿಲ್ಲೆ ಮತ್ತೊಮ್ಮೆ ಕಾಂಗ್ರೆಸಿನ ಭದ್ರಕೋಟೆಯಾಗಲಿದೆ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಏ.24ರಂದು ಉಡುಪಿಗೆ: ಕೋಟ ಪರ ರೋಡ್… ವಿಜಯಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ನಾಮಪತ್ರ ಸಲ್ಲಿಕೆ: ಬೃಹತ್…

ಇತ್ತೀಚಿನ ಸುದ್ದಿ

ನಂಜನಗೂಡು: ಹಳ್ಳಿ ಸೊಗಡಿನ ಕುರುಕ್ಷೇತ್ರ ಪೌರಾಣಿಕ ನಾಟಕ ಪ್ರದರ್ಶನ; ಕಲಾ ರಸಿಕರು ಫುಲ್ ಖುಷಿ

16/03/2024, 19:23

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ನಂಜನಗೂಡು ತಾಲೂಕು ನೆಲತಾಳಪುರ ಗ್ರಾಮದಲ್ಲಿ ಶ್ರೀ ಚಿಕ್ಕದೇವಮ್ಮನವರ ಹಬ್ಬದ ಪ್ರಯುಕ್ತ ಕುರುಕ್ಷೇತ್ರ ಅಥವಾ ಧರ್ಮರಾಜ ಸ್ಥಾಪನೆ ಎಂಬ ಪೌರಾಣಿಕ ನಾಟಕ ಪ್ರದರ್ಶನವನ್ನು ಏರ್ಪಡಿಸಲಾಗಿತ್ತು.


ಗ್ರಾಮದ ಧರೆಗೆ ದೊಡ್ಡವರು ಮತ್ತು ಶ್ರೀ ಚಿಕ್ಕದೇವಮ್ಮನವರ ಕೃಪಾಪೋಷಿತ ನಾಟಕ ಮಂಡಳಿ ವತಿಯಿಂದ ಹೆಸರಾಂತ ಉಮೇಶ್ ಡ್ರಾಮಾ ಸೀನರಿ ಹಾಗೂ ವಿದ್ಯುತ್ ದೀಪಗಳಿಂದ ಅಲಂಕೃತವಾದ ಭವ್ಯ ರಂಗ ಮಂಟಪದಲ್ಲಿ ನಾಟಕ ಪ್ರದರ್ಶನ ನಡೆಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಹಾಗೂ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಚಿಕ್ಕರಂಗನಾಯಕ ಹಾಗೂ ಮತ್ತಿತರರು ದೀಪ ಬೆಳಗಿಸುವ ಮೂಲಕ ನೆರವೇರಿಸಿದರು.
ಬಳಿಕ ಅವರು ಮಾತನಾಡಿ ಇಂದಿನ ಆಧುನಿಕತೆ ಸಿನಿಮಾ ರಂಗದ ನಡುವೆಯೂ ನಾಟಕ ರಂಗಭೂಮಿ ಉಳಿದಿರುವುದು ಹಳ್ಳಿಗಾಡಿನಲ್ಲಿ ಮಾತ್ರ. ಸಿನಿಮಾ ರಂಗದ ದಿಗ್ಗಜ ಡಾ. ರಾಜಕುಮಾರ್ ಕೂಡ ರಂಗಭೂಮಿಯಿಂದಲೇ ಬಂದವರು ಎಂದು ನಾಟಕ ರಂಗಭೂಮಿಯ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿ ನಾಟಕದಲ್ಲಿ ಒಳ್ಳೆಯ ಹಾಗೂ ಕೆಟ್ಟ ಸನ್ನಿವೇಶಗಳು ಮತ್ತು ಪಾತ್ರಗಳು ಬರುತ್ತವೆ. ಪ್ರೇಕ್ಷಕರಾದ ತಾವು ಕೆಟ್ಟದ್ದನ್ನು ಬದಿಗೊತ್ತಿ ಒಳ್ಳೆಯದನ್ನು ಮಾತ್ರ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ತಿಳಿಸಿದರು.
ಇದೇ ಸಂದರ್ಭ ವೇದಿಕೆ ಮೇಲಿನ ಗಣ್ಯರನ್ನು ನಾಟಕ ಮಂಡಳಿ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ನಂತರ ನಡೆದ ನಾಟಕ ಪ್ರದರ್ಶನದಲ್ಲಿ ಶ್ರೀ ಕೃಷ್ಣ, ಅರ್ಜುನ ಹಾಗೂ ಅಭಿಮನ್ಯು ಪಾತ್ರಧಾರಿಗಳು ಉತ್ತಮ ನಟನೆ ಮಾಡುವ ಮೂಲಕ ಪ್ರೇಕ್ಷಕರ ಮನಸೂರೆಗೊಂಡರು.
ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕೆಂಪಮ್ಮ ತೋಪನಾಯ್ಕ, ಸದಸ್ಯರಾದ ಶಶಿಕಲಾಪ್ರಭುಸ್ವಾಮಿ, ರಾಜೇಂದ್ರ, ನಂಜನಗೂಡು ನಗರ ಘಟಕದ ಬಿಜೆಪಿ ಅಧ್ಯಕ್ಷ ಹರ್ಷಿತ್ ಕುಮಾರ್, ಮುಖಂಡರುಗಳಾದ ರಾಮಶೆಟ್ಟಿ, ನಾಗೇಶ್, ಮಹೇಶ್ ಸೇರಿದಂತೆ ಗ್ರಾಮದ ಯಜಮಾನ್ರುಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು