3:55 AM Wednesday1 - May 2024
ಬ್ರೇಕಿಂಗ್ ನ್ಯೂಸ್
ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ… ಅಶ್ಲೀಲ ವೀಡಿಯೊ ಪ್ರಕರಣ: ಬಂಧನದಿಂದ ತಪ್ಪಿಸಿಕೊಳ್ಳಲು ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ… ದತ್ತಪೀಠ ಬಳಿ 100 ಅಡಿ ಆಳಕ್ಕೆ ಉರುಳಿ ಬಿದ್ದ ಪ್ರವಾಸಿಗರ ಮಿನಿ ಬಸ್:… ರಾಜ್ಯದಲ್ಲಿ ಅಭಿವೃದ್ಧಿ ಸ್ಥಗಿತ, ಕಾನೂನು ಸುವ್ಯವಸ್ಥೆ ಚಿಂತಾಜನಕ: ಬೆಳಗಾವಿಯಲ್ಲಿ ಪ್ರಧಾನಿ ಮೋದಿ ವಾಗ್ದಾಳಿ ಬೆಳಗಾವಿಯಲ್ಲಿ ಉತ್ತರ ಕರ್ನಾಟಕ ಶೈಲಿಯ ಜೋಳ ರೊಟ್ಟಿ ಸವಿದ ಪ್ರಧಾನಿ ಮೋದಿ ವಿಜಯಪುರದ ಶಿರನಾಳದಲ್ಲಿ ಶತಾಯುಷಿ ಭಾಗವ್ವ ಮತ ಚಲಾವಣೆ: 108ರ ಹರೆಯದ ಹಿರಿಯಜ್ಜಿ ಪ್ರಧಾನಿ ಮೋದಿ ಏ.28ರಂದು ಶಿರಸಿಗೆ: ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಪರ…

ಇತ್ತೀಚಿನ ಸುದ್ದಿ

ಮಾರ್ಚ್ 25ರಂದು ಕುಲಶೇಖರದ ಹೋಲಿ ಕ್ರಾಸ್ ಚರ್ಚಿನಲ್ಲಿ ‘ಶಿಲುಬೆಯ ಹಾದಿ’: 12 ಚರ್ಚುಗಳ ಪಾಲ್ಗೊಳ್ಳುವಿಕೆ

23/03/2024, 17:27

ಮಂಗಳೂರು(reporterkarnataka.com): ನಗರದ ಕುಲಶೇಖರದ ಹೋಲಿ ಕ್ರಾಸ್ ಚರ್ಚಿನಲ್ಲಿ ಮಾ. 25 ರಂದು ಸಂಜೆ 4.30 ಗಂಟೆಗೆ ನಗರದ ಸಿಟಿ ವಲಯದ 12 ಚರ್ಚುಗಳ ಸುಮಾರು 200ಕ್ಕೂ ಮಿಕ್ಕಿ ಕಲಾವಿದರು ಹಾಗೂ ನಿರೂಪಕರಿಂದ “ಶಿಲುಬೆಯ ಹಾದಿ” (ಖುರ್ಸಾಚಿ ವಾಟ್)ನ್ನು ನಡೆಸಲಾಗುವುದು ಎಂದು ಕಾರ್ಡೆಲ್ ಚರ್ಚಿನ ಪ್ರಧಾನ ಧರ್ಮಗುರುಗಳಾದ ವಂ| ಫಾ| ಕ್ಲಿಫರ್ಡ್ ಫೆರ್ನಾಂಡಿಸ್ ತಿಳಿಸಿದ್ದಾರೆ.
ಮಂಗಳೂರಿನ ಕುಲಶೇಖರ (ಕಾರ್ಡೆಲ್), ವಾಮಂಜೂರು, ಪಾಲ್ದಾನೆ, ಬೊಂದೇಲ್, ದೇರೇಬೈಲು, ನೀರುಮಾರ್ಗ, ಕೆಲರೈ, ಬಜ್ಜೊಡಿ, ಕಪಿತಾನಿಯೋ, ಬಜಾಲ್, ಪೆರ್ಮಾಯಿ, ಶಕ್ತಿನಗರ ಚರ್ಚುಗಳ ಕಲಾವಿದರು ಹಾಗೂ ಪ್ರತಿ ಚರ್ಚಿನಿಂದ ಪ್ರತಿ ನಿಲ್ದಾಣಕ್ಕೆ (ಸ್ಟೇಶನ್) 3 ಜನ ನಿರೂಪಕರು ಈ ಶಿಲುಬೆಯ ಹಾದಿಯನ್ನು ನಡೆಸಲಿರುವರು. ಕಾರ್ಡೆಲ್ ಚರ್ಚಿನ ವಠಾರದಲ್ಲಿ ಈ ಕಾರ್ಯಕ್ರಮ ನಡೆಯಲಿರುವುದು. 12 ಚರ್ಚುಗಳ ಎಲ್ಲಾ ಭಕ್ತವೃಂದದವರು ಶಿಲುಬೆಯ ಹಾದಿಯಲ್ಲಿ ಭಾಗವಹಿಸಲಿದ್ದು, ಸುಮಾರು 6ರಿಂದ 7 ಸಾವಿರ ಜನರು ಭಾಗವಹಿಸುವ ನಿರೀಕ್ಷೆ ಇದೆ.

ಇತ್ತೀಚಿನ ಸುದ್ದಿ

ಜಾಹೀರಾತು