3:32 PM Saturday27 - April 2024
ಬ್ರೇಕಿಂಗ್ ನ್ಯೂಸ್
ಪ್ರಧಾನಿ ಮೋದಿ ಏ.28ರಂದು ಶಿರಸಿಗೆ: ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಪರ… ಸುಪ್ರೀಂ ಕೋರ್ಟ್ ಸೂಚಿಸಿದ ಬಳಿಕ ಕೊನೆಗೂ ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ಮಾಡಿದ… ಚಳ್ಳಕೆರೆ ತಾಲೂಕಿನಲ್ಲಿ ಶಾಂತಿಯುತ ಮತದಾನ: ಚುನಾವಣೆ ಕರ್ತವ್ಯನಿರತ ಮಹಿಳಾ ಸಿಬ್ಬಂದಿ ಸಾವು ನಂಜನಗೂಡಿನಲ್ಲಿ ಶಾಂತಿಯುತ ಚುನಾವಣೆ: ಸಂಜೆ 4ಕ್ಕೆ ಸುಮಾರು ಶೇ.65 ಮತದಾನ ಸ್ಪೀಕರ್ ಖಾದರ್ ಆಪ್ತ ಸಹಾಯಕ ಮಹಮ್ಮದ್ ಲಿಬ್ಝೆತ್ ಮತದಾನ ; ಪದ್ಮರಾಜ್ ಗೆಲುವಿನ… ಜನಾರ್ದನ ಪೂಜಾರಿ ಮಾದರಿಯಲ್ಲಿ ಪದ್ಮರಾಜ್ ಪೂಜಾರಿ ಅಭಿವೃದ್ಧಿಯ ಹರಿಕಾರ ಆಗಲಿದ್ದಾರೆ: ಲಿಬ್‌ಝಿತ್ ಅಭಿಮತ ನೈಟ್ ಸರ್ವಿಸ್ ಬಸ್ಸಿನಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಆರೋಪಿ ಬೆಳ್ತಂಗಡಿ ನಿವಾಸಿಯ ಬಂಧನ ರಾಜ್ಯದ 14 ಕ್ಷೇತ್ರಗಳಲ್ಲಿ ನಾಳೆ ಮೊದಲ ಹಂತದ ಚುನಾವಣೆ: ಕರಾವಳಿಯಲ್ಲಿ ಸಕಲ ಸಿದ್ದತೆ;… ನಂಜನಗೂಡಿನ ಮಸ್ಟರಿಂಗ್ ಕೇಂದ್ರಕ್ಕೆ ಜಿಲ್ಲಾಧಿಕಾರಿ ಭೇಟಿ: ಮತಗಟ್ಟೆಯ ಅಧಿಕಾರಿಗಳಿಗೆ ಪಾಠ; ಜಾಗೃತಿಯಾಗಿ ಕರ್ತವ್ಯ… ನಾವು ಇಂದೇ ಹೊಂಟೇವು ಮತಗಟ್ಟೆಗೆ; ನೀವು ನಾಳೆ ತಪ್ಪದೆ ಬನ್ನಿ ಮತದಾನಕ್ಕೆ

ಇತ್ತೀಚಿನ ಸುದ್ದಿ

ಸ್ನೇಹಿತರ ಜತೆ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು: ರಜೆ ಸವಿಯುವ ವೇಳೆ ದುರಂತ

28/03/2024, 14:16

*ನೀರಾವರಿ ಇಲಾಖೆ ಅಧಿಕಾರಿಗಳೇ ಕೆರೆ, ಕಟ್ಟೆ, ನದಿ ಪಾತ್ರಗಳಲ್ಲಿ ಅಪಾಯದ ಸ್ಥಳಗಳನ್ನು ಗುರುತಿಸಿ ನಾಮಫಲಕ ಅಳವಡಿಸಿ ಯುವಕರ ಜೀವ ರಕ್ಷಿಸಿ*

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com
ರಜೆ ಕಳೆಯಲು ಸ್ನೇಹಿತರ ಜೊತೆ ಬಂದು ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲಾದ ಘಟನೆ ನಂಜನಗೂಡು ತಾಲೂಕಿನ ಹುಲ್ಲಹಳ್ಳಿ ಬಳಿ ಇರುವ ಹುಲ್ಲಹಳ್ಳಿ ಅಣೆಕಟ್ಟೆಯಲ್ಲಿ ನಡೆದಿದೆ.
ನಂಜನಗೂಡಿನ ಎಂಐಟಿ ಕಾಲೇಜು ವಿಧ್ಯಾರ್ಥಿ ಅಭಿಷೇಕ್(23) ಮೃತ ದುರ್ದೈವಿ. ಕಾಲೇಜು ರಜೆ ಇದ್ದ ಕಾರಣ ಅಭಿಷೇಕ್ ತನ್ನ ಸ್ನೇಹಿತರಾದ ಸಮರ್ಥ್ ಹಾಗೂ ಪ್ರೀತಂ ಜೊತೆ ಹುಲ್ಲಹಳ್ಳಿಯ ಸಮೀಪವಿರುವ ಅಣೆ ಕಟ್ಟೆಯಲ್ಲಿ ಈಜಲು ತೆರಳಿದ್ದಾನೆ.
ಸ್ನೇಹಿತರ ಜೊತೆಗೆ ನೀರಿಗೆ ಧುಮುಕಿ ಈಜುತ್ತಾ ಮುಂದೆ ಸಾಗಿದ ಅಭಿಷೇಕ್ ಹಿಂದಕ್ಕೆ ಬರಲು ಸಾಧ್ಯವಾಗದೆ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ಹುಲ್ಲಹಳ್ಳಿ ಪೊಲೀಸರ ನೆರವಿನಿಂದ ಅಭಿಷೇಕ್ ಮೃತದೇಹ ಹೊರತೆಗೆಯಲಾಗಿದೆ.ಈ ಸಂಬಂಧ ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


15 ದಿನಗಳ ಹಿಂದೆ ಇದೇ ಸ್ಥಳದಲ್ಲಿ ಮೈಸೂರಿನ ಯುವಕ ಸ್ನೇಹಿತರ ಜೊತೆ ಈಜಲು ತೆರಳಿ ನೀರುಪಾಲಾಗಿದ್ದ. ನಂತರ ಎರಡು ದಿನಗಳ ಹಿಂದೆ ನಂಜನಗೂಡಿನ ಗೊದ್ದನಪುರ ಗ್ರಾಮದ ಕಪಿಲಾ ನದಿಯಲ್ಲಿ ಈಜಲು ಮೂವರು ಹೊರ ರಾಜ್ಯದ ಕಾರ್ಮಿಕರು ಮುಳುಗಿ ಸಾವನ್ನಪ್ಪಿದ್ದರು.ಈ ಘಟನೆ ಮಾಸುವ ಮುನ್ನವೇ ಈ ಸ್ಥಳದಲ್ಲಿ ಮತ್ತೊಂದು ದುರಂತ ನಡೆದಿದೆ.
ನೀರಾವರಿ ಇಲಾಖೆ ಅಧಿಕಾರಿಗಳು ಎಚ್ಚೆತ್ತುಕೊಂಡು ನದಿ ಪಾತ್ರದಲ್ಲಿ ಹಾಗೂ ಕೆರೆಕಟ್ಟೆಗಳ ಬಳಿ ಮುನ್ನೆಚ್ಚರಿಕೆ ಫಲಕಗಳನ್ನ ಅಳವಡಿಸಿ ಯುವಕರ ಜೀವ ಬದುಕಿಸಲು ಮುಂದಾಗ ಬೇಕಿದೆ.
ಘಟನಾ ಸ್ಥಳಕ್ಕೆ ಹುಲ್ಲಹಳ್ಳಿ ಪೊಲೀಸ್ ಠಾಣೆಯ ಪಿಎಸ್ಐ ಚೇತನ್ ಕುಮಾರ್, ದೊಡ್ಡಯ್ಯ, ರಸುಲ್ ಸಾಗವಾಲೆ, ಮೂರ್ತಿ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು