8:14 PM Sunday28 - April 2024
ಬ್ರೇಕಿಂಗ್ ನ್ಯೂಸ್
ದತ್ತಪೀಠ ಬಳಿ 100 ಅಡಿ ಆಳಕ್ಕೆ ಉರುಳಿ ಬಿದ್ದ ಪ್ರವಾಸಿಗರ ಮಿನಿ ಬಸ್:… ರಾಜ್ಯದಲ್ಲಿ ಅಭಿವೃದ್ಧಿ ಸ್ಥಗಿತ, ಕಾನೂನು ಸುವ್ಯವಸ್ಥೆ ಚಿಂತಾಜನಕ: ಬೆಳಗಾವಿಯಲ್ಲಿ ಪ್ರಧಾನಿ ಮೋದಿ ವಾಗ್ದಾಳಿ ಬೆಳಗಾವಿಯಲ್ಲಿ ಉತ್ತರ ಕರ್ನಾಟಕ ಶೈಲಿಯ ಜೋಳ ರೊಟ್ಟಿ ಸವಿದ ಪ್ರಧಾನಿ ಮೋದಿ ವಿಜಯಪುರದ ಶಿರನಾಳದಲ್ಲಿ ಶತಾಯುಷಿ ಭಾಗವ್ವ ಮತ ಚಲಾವಣೆ: 108ರ ಹರೆಯದ ಹಿರಿಯಜ್ಜಿ ಪ್ರಧಾನಿ ಮೋದಿ ಏ.28ರಂದು ಶಿರಸಿಗೆ: ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಪರ… ಸುಪ್ರೀಂ ಕೋರ್ಟ್ ಸೂಚಿಸಿದ ಬಳಿಕ ಕೊನೆಗೂ ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ಮಾಡಿದ… ಚಳ್ಳಕೆರೆ ತಾಲೂಕಿನಲ್ಲಿ ಶಾಂತಿಯುತ ಮತದಾನ: ಚುನಾವಣೆ ಕರ್ತವ್ಯನಿರತ ಮಹಿಳಾ ಸಿಬ್ಬಂದಿ ಸಾವು ನಂಜನಗೂಡಿನಲ್ಲಿ ಶಾಂತಿಯುತ ಚುನಾವಣೆ: ಸಂಜೆ 4ಕ್ಕೆ ಸುಮಾರು ಶೇ.65 ಮತದಾನ ಸ್ಪೀಕರ್ ಖಾದರ್ ಆಪ್ತ ಸಹಾಯಕ ಮಹಮ್ಮದ್ ಲಿಬ್ಝೆತ್ ಮತದಾನ ; ಪದ್ಮರಾಜ್ ಗೆಲುವಿನ… ಜನಾರ್ದನ ಪೂಜಾರಿ ಮಾದರಿಯಲ್ಲಿ ಪದ್ಮರಾಜ್ ಪೂಜಾರಿ ಅಭಿವೃದ್ಧಿಯ ಹರಿಕಾರ ಆಗಲಿದ್ದಾರೆ: ಲಿಬ್‌ಝಿತ್ ಅಭಿಮತ

ಇತ್ತೀಚಿನ ಸುದ್ದಿ

ನಂಜನಗೂಡು: ಕಳಲೆ ಜಾತ್ರಾ ಮಹೋತ್ಸವದಲ್ಲಿ ನಡೆದ ಅದ್ದೂರಿ ತೇರಡಿ ಉತ್ಸವ

29/03/2024, 12:31

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ನಂಜನಗೂಡು ತಾಲೂಕಿನ ಕಳಲೆ ಗ್ರಾಮದ ಪುರಾಣ ಪ್ರಸಿದ್ಧ ಶ್ರೀ ಲಕ್ಷ್ಮಿಕಾಂತ ಸ್ವಾಮಿ ದೇವಾಲಯದಲ್ಲಿ ನಡೆದ ಜಾತ್ರಾ ಮಹೋತ್ಸವದ ಅಂಗವಾಗಿ ಗುರುವಾರ ರಾತ್ರಿ ಪುಷ್ಪಾಲಂಕಾರ ತೇರಡಿ ಹಾಗೂ ಶಾಂತ್ಯುತ್ಸವವು ಬಹಳ ವಿಜೃಂಭಣೆ ಹಾಗೂ ಶ್ರದ್ಧಾ ಭಕ್ತಿಯಿಂದ ನೆರವೇರಿತು.


ಬೆಳಗ್ಗೆ ರಥಾರೋಹಣ ನಡೆದ ಮೇಲೆ ರಾತ್ರಿ ವೇಳೆಗೆ ರಥದಲ್ಲಿ ಪ್ರತಿಷ್ಠಾಪಿಸಲಾಗಿದ್ದ ಶ್ರೀ ಆಂಡಾಳಮ್ಮ ಹಾಗೂ ಶ್ರೀ ಅರವಿಂದ ನಾಯಕಿ ಅಮ್ಮನವರ ಸಮೇತ ಶ್ರೀ ಲಕ್ಷ್ಮಿಕಾಂತ ಸ್ವಾಮಿ ಅವರ ಉತ್ಸವ ಮೂರ್ತಿಗಳನ್ನು ಹೊರ ತೆಗೆದು ಬಳಿಕ ಮೇಲುಕೋಟೆ ಶ್ರೀ ವೈರಮುಡಿ ಉತ್ಸವದ ಮಾದರಿಯಲ್ಲಿ ವಿಶೇಷವಾಗಿ ಹೂಗಳಿಂದ ಅಲಂಕರಿಸಲಾದ ಉತ್ಸವ ಮೂರ್ತಿಗಳನ್ನು ಶುಕ್ರವಾರದ ಬೆಳಗಿನ ಜಾವದವರೆಗೂ ಗ್ರಾಮದಲ್ಲಿ ಉತ್ಸವ ನಡೆಸಲಾಗುತ್ತದೆ. ವಿದ್ಯುತ್ ದೀಪಗಳಿಂದ ವಿಶೇಷವಾಗಿ ಮಂಟಪದ ರೀತಿಯಲ್ಲಿ ಅಲಂಕರಿಸಿದ ನಡು ಚಪ್ಪರದಲ್ಲಿ ಅಲಂಕೃತ ಉತ್ಸವ ಮೂರ್ತಿಗಳನ್ನು ಗ್ರಾಮಸ್ಥರು ಹೆಗಲ ಮೇಲೆ ಹೊತ್ತು ನಡೆಸುವ ಉತ್ಸವವನ್ನು ಭಕ್ತರು ಕಣ್ತುಂಬಿಕೊಂಡು ದೇವರಿಗೆ ಪೂಜೆ ಸಲ್ಲಿಸುವ ಮೂಲಕ ತಮ್ಮ ಭಕ್ತಿ ಭಾವ ಮೆರೆದರು.
ತೇರಡಿ ಉತ್ಸವದ ಅಂಗವಾಗಿ ಗ್ರಾಮದ ಎಲ್ಲ ದೇವಾಲಯಗಳು ಸೇರಿದಂತೆ ರಥ ಬೀದಿಗಳನ್ನು ಬಣ್ಣ ಬಣ್ಣದ ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿತ್ತು. ಅಹೋರಾತ್ರಿ ಮಂಗಳವಾದ್ಯ ಗೋಷ್ಠಿಗಳು ನಡೆದವು.
ತಿಂಡಿ ತಿನಿಸು, ಪೂಜಾ ಸಾಮಗ್ರಿಗಳು, ಸ್ಟೇಷನರಿ, ತಂಪು ಪಾನೀಯ ಸೇರಿದಂತೆ ವಿವಿಧ ಬಗೆಯ ಅಂಗಡಿ ಮುಂಗಟ್ಟುಗಳನ್ನು ತೆರೆದಿದ್ದು ವ್ಯಾಪಾರ ವಹಿವಾಟುಗಳು ಜೋರಾಗಿಯೇ ನಡೆದವು.
ಗ್ರಾಮವು ಸೇರಿದಂತೆ ಅಕ್ಕಪಕ್ಕದ ಗ್ರಾಮಗಳ ಸಾವಿರಾರು ಭಕ್ತರು ತೇರಡಿ ಉತ್ಸವದಲ್ಲಿ ಪಾಲ್ಗೊಂಡು ಸಂಭ್ರಮಿಸಿದರು.
ದೇವಾಲಯದ ಪಾರುಪತೆಗಾರ ಜಯರಾಮ್ ಹಾಗೂ ಗ್ರಾಮಸ್ಥರ ನೇತೃತ್ವದಲ್ಲಿ ತೇರಡಿ ಉತ್ಸವವು ಅದ್ದೂರಿಯಾಗಿ ನಡೆಯಿತು. ಆಗಮಿಕರಾದ ವಿನಯ್ ಭಟ್ ಮಾತನಾಡಿ ಉತ್ಸವದ ಬಗ್ಗೆ ವಿವರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು