7:59 PM Saturday20 - April 2024
ಬ್ರೇಕಿಂಗ್ ನ್ಯೂಸ್
ಮಂಗಳೂರು ಮಾಜಿ ಮೇಯರ್ ಕವಿತಾ ಸನಿಲ್ ಬಿಜೆಪಿ ಸೇರ್ಪಡೆ: ಪಕ್ಷದ ಧ್ವಜ ನೀಡಿ… ಮಂಗಳೂರಿನಲ್ಲಿ ಕರ್ಕಶ ಹಾರ್ನ್ ಗಳ ಕಿರಿಕಿರಿ ತಪ್ಪಿಸಲು ಪೊಲೀಸ್ ಕಾರ್ಯಾಚರಣೆ: ಹಾರ್ನ್ ಕಿತ್ತೆಸೆದು… ಎಡಪದವು: ಅಂಗಡಿಗೆ ಗುದ್ದಿದ ಲಾರಿಯಿಂದ ಸರಣಿ ಅಪಘಾತ; ಬಸ್, ಕಾರು, ಸ್ಕೂಟರ್ ಜಖಂ;… ಈ ಚುನಾವಣೆ ಎರಡು ಸಿದ್ದಾಂತಗಳ ನಡುವಿನ ಹೋರಾಟ; ಸಂವಿಧಾನ, ಪ್ರಜಾತಂತ್ರ ಉಳಿವಿಗೆ ಕಾಂಗ್ರೆಸ್… ನಂಜನಗೂಡಿನಲ್ಲಿ ಸಂಭ್ರಮ- ಸಡಗರದ ಶ್ರೀ ರಾಮೇಶ್ವರ ರಥೋತ್ಸವ, ಜಾತ್ರಾ ಮಹೋತ್ಸವ ಬೈಕಿಗೆ ಕಾರು ಡಿಕ್ಕಿ: ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿ ದಾರುಣ ಸಾವು ರಾಮೇಶ್ವರ ದೇಗುಲಕ್ಕೆ ಮಾಜಿ ಪ್ರಧಾನಿ ದೇವೇಗೌಡ ಭೇಟಿ; ವಿಶೇಷ ಪೂಜೆ ಸಲ್ಲಿಕೆ; ಬಿಜೆಪಿ… ದಕ್ಷಿಣ ಕನ್ನಡ ಜಿಲ್ಲೆ ಮತ್ತೊಮ್ಮೆ ಕಾಂಗ್ರೆಸಿನ ಭದ್ರಕೋಟೆಯಾಗಲಿದೆ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಏ.24ರಂದು ಉಡುಪಿಗೆ: ಕೋಟ ಪರ ರೋಡ್… ವಿಜಯಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ನಾಮಪತ್ರ ಸಲ್ಲಿಕೆ: ಬೃಹತ್…

ಇತ್ತೀಚಿನ ಸುದ್ದಿ

2047ಕ್ಕೆ ಮೋದಿಯವರ ಪರಿಕಲ್ಪನೆಯ ವಿಕಸಿತ ಭಾರತದ ಅಭಿವೃದ್ಧಿಗಾಗಿ ಬಿಜೆಪಿ ಬೆಂಬಲಿಸಿ: ಬಾಲರಾಜ್‌

01/04/2024, 17:55

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

2047ಕ್ಕೆ ದೇಶದ ಸಮಗ್ರ ಅಭಿವೃದ್ಧಿಯೊಂದಿಗೆ ವಿಕಸಿತ ಭಾರತದ ಪರಿಕಲ್ಪನೆಯನ್ನು ಹೊಂದಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಕೈ ಬಲಪಡಿಸಲು ನನ್ನನ್ನು ಆಯ್ಕೆ ಮಾಡುವ ಮೂಲಕ ಅವರನ್ನು ಮೂರನೇ ಭಾರಿಗೆ ಪ್ರಧಾನ ಮಂತ್ರಿಯಾಗಿ ಮಾಡಬೇಕು ಎಂದು ಚಾಮರಾಜನಗರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಾಲರಾಜ್‌ ಮತದಾರರಲ್ಲಿ ಮನವಿ ಮಾಡಿದರು.
ನಂಜನಗೂಡು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹೆಗ್ಗಡಹಳ್ಳಿ, ಹುಲ್ಲಹಳ್ಳಿ, ಹುರ ಹಾಗೂ ಕಳಲೆ ಯಲ್ಲಿ ಮಹಾ ಶಕ್ತಿ ಕೇಂದ್ರಗಳ ಕಾರ್ಯಕರ್ತರ ಸಭೆ ನಡೆಸಿ ಮತಯಾಚನೆ ಮಾಡಿ ಅವರು ಮಾತನಾಡಿದರು.


ಕಳೆದ 10 ವರ್ಷಗಳಿಂದ ದೇಶದ ಸಮಗ್ರ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ನಮ್ಮ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿಯವರನ್ನು ಅತ್ಯಂತ ಹೆಚ್ಚಿನ ಬಹುಮತದಿಂದ ಮತ್ತೊಮ್ಮೆ ಪ್ರಧಾನ ಮಂತ್ರಿಗಳಾಗಿ ಮಾಡಬೇಕಾಗಿದೆ, ರಾಜ್ಯದಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ರಾಜ್ಯಾಧ್ಯಕ್ಷರಾದ ವಿಜಯೇಂದ್ರ ಅವರ ನಾಯಕತ್ವದಲ್ಲಿ ಪಕ್ಷ ಸಂಘಟಿತವಾಗಿ ಕಾರ್ಯಕ್ರಮ ರೂಪಿಸುತ್ತಿದ್ದು, ರಾಜ್ಯದಲ್ಲಿ 28 ಕ್ಷೇತ್ರಗಳಲ್ಲಿ ಬಿಜೆಪಿ-ಜೆಡಿಎಸ್‌ ಮೈತ್ರಿಕೂಟ ಅಭೂತಪೂರ್ವ ಗೆಲುವು ಸಾಧಿಸಲಿದೆ ಎಂದು ಹೇಳಿದರು.
ಸಜ್ಜನ ಹಾಗೂ ಮುತ್ಸದ್ದಿ ರಾಜಕಾರಣಿ ದಿವಂಗತ ಎಂ. ರಾಜಶೇಖರ ಮೂರ್ತಿಯವರ ಪಟ್ಟ ಶಿಷ್ಯನಾಗಿ ನನ್ನ 32 ವರ್ಷಗಳ ರಾಜಕೀಯ ಜೀವನದಲ್ಲಿ ಒಂದು ಬಾರಿ ಕೊಳ್ಳೆಗಾಲ ಕ್ಷೇತ್ರದ ಶಾಸಕನಾಗಿ ಕ್ಷೇತ್ರದ ಅಭಿವೃದ್ಧಿಗಾಗಿ ಶ್ರಮಿಸಿದ್ದೇನೆ. ಈ ಬಾರಿ ಲೋಕಸಭಾ ಕ್ಷೇತ್ರದಲ್ಲಿ ಮತದಾರರು ಬೆಂಬಲ ನೀಡಿ ಆರಿಸಿ ಕಳುಹಿಸಿದರೆ, ಲೋಕಸಭಾ ಕ್ಷೇತ್ರದಲ್ಲಿ ನಮ್ಮ ಪಕ್ಷದ ಶಾಸಕರ ಕೊರತೆಯನ್ನು ನೀಗಿಸಿ ಕ್ಷೇತ್ರದ ಅಭಿವೃದ್ಧಿಗಾಗಿ ಶ್ರಮಿಸುತ್ತೇನೆ ಎಂದರು.
ಮಾಜಿ ಶಾಸಕ ಬಿ.ಹರ್ಷವರ್ಧನ್‌ ಮಾತನಾಡಿ, ಈ ಚುನಾವಣೆ ನಡೆದ ಆರು ತಿಂಗಳಲ್ಲಿ ರಾಜ್ಯ ಸರ್ಕಾರ ಪತನವಾಗಲಿದೆ ಎಂದು ಭವಿಷ್ಯ ನುಡಿದ ಅವರು 10 ತಿಂಗಳಿಂದ ಏನಾದರೂ ಅಭಿವೃದ್ಧಿ ಕೆಲಸ ಆಗಿದೆಯಾ ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿ ದೇಶದಲ್ಲಿ 18 ವರ್ಷ ತುಂಬಿದ ಯುವಕರ ಭವಿಷ್ಯಕ್ಕಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಸಂಕಲ್ಪ ಮಾಡಿದ್ದಾರೆ. ಅದಕ್ಕಾಗಿ ನಾವೆಲ್ಲರೂ ಬಿಜೆಪಿಯನ್ನು ಬೆಂಬಲಿಸಬೇಕಿದೆ ಎಂದು ಹೇಳಿದರು.
ಇನ್ನು ಕೆಲವರು ತಮ್ಮ ಸ್ವಾರ್ಥಕ್ಕಾಗಿ ಪಕ್ಷಾಂತರ ಮಾಡುವುದು ಸಹಜ. ಆದರೆ ಮತದಾರರು ನಮ್ಮ ಬಳಿಯೇ ಇದ್ದಾರೆ, ಅವರ ಬಗ್ಗೆ ತಲೆ ಕೆಡಿಸಿಕೊಳ್ಳಬೇಡಿ ಈ ಬಾರಿ ನಂಜನಗೂಡು ಕ್ಷೇತ್ರದಿಂದ ನಮ್ಮ ಅಭ್ಯರ್ಥಿ ಬಾಲರಾಜ್ ಅವರಿಗೆ ಹೆಚ್ಚಿನ ಲೀಡ್ ಕೊಡುವುದಾಗಿ ತಿಳಿಸಿದರು.
ನಿಕಟ ಪೂರ್ವ ಬಿಜೆಪಿ ಜಿಲ್ಲಾಧ್ಯಕ್ಷೆ ಮಂಗಳಾ ಸೋಮಶೇಖರ್ ಹಾಗೂ ಜಿಲ್ಲಾ ಉಪಾಧ್ಯಕ್ಷ ಚಿಕ್ಕರಂಗನಾಯಕ ಮಾತನಾಡಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಲ್ಲಿ ಬಿಜೆಪಿಯವರ ಸಾಧನೆ ಮತ್ತು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ದೇಶಕ್ಕೆ ಕೊಟ್ಟ ಕೊಡುಗೆಗಳ ಬಗ್ಗೆ ತಿಳಿಸಿ ಈ ಬಾರಿಯೂ ಅವರನ್ನೇ ಪ್ರಧಾನಮಂತ್ರಿ ಮಾಡಬೇಕು ಅದಕ್ಕಾಗಿ ನಮ್ಮ ಅಭ್ಯರ್ಥಿ ಬಾಲರಾಜ್ ಅವರಿಗೆ ಮತ ನೀಡುವಂತೆ ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಎಲ್.ಆರ್. ಮಹದೇವಸ್ವಾಮಿ, ಜಿಲ್ಲಾ ಜೆಡಿಎಸ್ ಅಧ್ಯಕ್ಷ ನರಸಿಂಹಸ್ವಾಮಿ, ಮುಖಂಡರಾದ ಅಶೋಕ್, ಚಿಕ್ಕರಂಗನಾಯ್ಕ, ವಕೀಲ ಮಹೇಶ್, ಮಹಾಶಕ್ತಿ ಕೇಂದ್ರದ ಅಧ್ಯಕ್ಷರುಗಳಾದ ಪರಶಿವಮೂರ್ತಿ ಗೋವಿಂದರಾಜ್, ಕಾರ್ಯದರ್ಶಿ ಪುಟ್ಟಸ್ವಾಮಿ ಹೆಮ್ಮರಗಾಲ ಸೋಮಣ್ಣ,ಶಿವಣ್ಣ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು