8:46 PM Wednesday1 - May 2024
ಬ್ರೇಕಿಂಗ್ ನ್ಯೂಸ್
ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ… ಅಶ್ಲೀಲ ವೀಡಿಯೊ ಪ್ರಕರಣ: ಬಂಧನದಿಂದ ತಪ್ಪಿಸಿಕೊಳ್ಳಲು ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ… ದತ್ತಪೀಠ ಬಳಿ 100 ಅಡಿ ಆಳಕ್ಕೆ ಉರುಳಿ ಬಿದ್ದ ಪ್ರವಾಸಿಗರ ಮಿನಿ ಬಸ್:… ರಾಜ್ಯದಲ್ಲಿ ಅಭಿವೃದ್ಧಿ ಸ್ಥಗಿತ, ಕಾನೂನು ಸುವ್ಯವಸ್ಥೆ ಚಿಂತಾಜನಕ: ಬೆಳಗಾವಿಯಲ್ಲಿ ಪ್ರಧಾನಿ ಮೋದಿ ವಾಗ್ದಾಳಿ ಬೆಳಗಾವಿಯಲ್ಲಿ ಉತ್ತರ ಕರ್ನಾಟಕ ಶೈಲಿಯ ಜೋಳ ರೊಟ್ಟಿ ಸವಿದ ಪ್ರಧಾನಿ ಮೋದಿ ವಿಜಯಪುರದ ಶಿರನಾಳದಲ್ಲಿ ಶತಾಯುಷಿ ಭಾಗವ್ವ ಮತ ಚಲಾವಣೆ: 108ರ ಹರೆಯದ ಹಿರಿಯಜ್ಜಿ ಪ್ರಧಾನಿ ಮೋದಿ ಏ.28ರಂದು ಶಿರಸಿಗೆ: ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಪರ… ಸುಪ್ರೀಂ ಕೋರ್ಟ್ ಸೂಚಿಸಿದ ಬಳಿಕ ಕೊನೆಗೂ ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ಮಾಡಿದ…

ಇತ್ತೀಚಿನ ಸುದ್ದಿ

ಬಿಜೆಪಿ ದ.ಕ. ಜಿಲ್ಲಾ ಚುನಾವಣಾ ಪ್ರಭಾರಿಯಾಗಿ ಕ್ಯಾ. ಗಣೇಶ್ ಕಾರ್ಣಿಕ್, ಸಂಚಾಲಕರಾಗಿ ನಿತಿನ್ ಕುಮಾರ್ ನೇಮಕ

01/04/2024, 21:13

ಮಂಗಳೂರು(reporterkarnataka.com): ರಾಜ್ಯದ 28 ಲೋಕಸಭಾ ಕ್ಷೇತ್ರಗಳಿಗೆ ಭಾರತೀಯ ಜನತಾ ಪಕ್ಷ ತನ್ನ ಚುನಾವಣಾ ಪ್ರಭಾರಿಗಳನ್ನು ನೇಮಕ ಮಾಡಿದ್ದು, ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಪ್ರಭಾರಿಯಾಗಿ ವಿಧಾನ ಪರಿಷತ್ತಿನ ಮಾಜಿ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ.
ಕ್ಯಾ. ಗಣೇಶ್ ಕಾರ್ಣಿಕ್ ಅವರು ಈ ಹಿಂದೆ ಪಕ್ಷದ ರಾಜ್ಯ ವಕ್ತಾರರಾಗಿ ಕಾರ್ಯನಿರ್ವಹಿಸಿದ್ದರು. ಪ್ರಸ್ತುತ ಅನಿವಾಸಿ ಭಾರತೀಯರ ಘಟಕದ ಸಂಚಾಲಕರಾಗಿಯೂ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ.
ಈ ಹಿಂದೆ ಪ್ರಭಾರಿ ಹುದ್ದೆಗೆ ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ನೇಮಿಸಲಾಗಿತ್ತು. ಆದರೆ ಅವರನ್ನು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ನಿಯೋಜಿಸಿರುವುದರಿಂದ ಈ ಬದಲಾವಣೆ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಇದೇ ವೇಳೆ ಜಿಲ್ಲಾ ಚುನಾವಣಾ ಸಂಚಾಲಕರಾಗಿ ಹಿರಿಯ ನಾಯಕರಾದ ನಿತಿನ್ ಕುಮಾರ್ ಅವರನ್ನು ನೇಮಕ ಮಾಡಲಾಗಿದೆ ಎಂದು ಜಿಲ್ಲಾ ಬಿಜೆಪಿ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು