2:17 AM Wednesday1 - May 2024
ಬ್ರೇಕಿಂಗ್ ನ್ಯೂಸ್
ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ… ಅಶ್ಲೀಲ ವೀಡಿಯೊ ಪ್ರಕರಣ: ಬಂಧನದಿಂದ ತಪ್ಪಿಸಿಕೊಳ್ಳಲು ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ… ದತ್ತಪೀಠ ಬಳಿ 100 ಅಡಿ ಆಳಕ್ಕೆ ಉರುಳಿ ಬಿದ್ದ ಪ್ರವಾಸಿಗರ ಮಿನಿ ಬಸ್:… ರಾಜ್ಯದಲ್ಲಿ ಅಭಿವೃದ್ಧಿ ಸ್ಥಗಿತ, ಕಾನೂನು ಸುವ್ಯವಸ್ಥೆ ಚಿಂತಾಜನಕ: ಬೆಳಗಾವಿಯಲ್ಲಿ ಪ್ರಧಾನಿ ಮೋದಿ ವಾಗ್ದಾಳಿ ಬೆಳಗಾವಿಯಲ್ಲಿ ಉತ್ತರ ಕರ್ನಾಟಕ ಶೈಲಿಯ ಜೋಳ ರೊಟ್ಟಿ ಸವಿದ ಪ್ರಧಾನಿ ಮೋದಿ ವಿಜಯಪುರದ ಶಿರನಾಳದಲ್ಲಿ ಶತಾಯುಷಿ ಭಾಗವ್ವ ಮತ ಚಲಾವಣೆ: 108ರ ಹರೆಯದ ಹಿರಿಯಜ್ಜಿ ಪ್ರಧಾನಿ ಮೋದಿ ಏ.28ರಂದು ಶಿರಸಿಗೆ: ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಪರ…

ಇತ್ತೀಚಿನ ಸುದ್ದಿ

ಕೋಮುವಾದಿ ಬಿಜೆಪಿ ಸೋಲಿಸಿ ಪ್ರಜಾಪ್ರಭುತ್ವ ಉಳಿಸಿ: ಸಚಿವ ಡಾ ಎಚ್. ಸಿ. ಮಹದೇವಪ್ಪ

04/04/2024, 02:26

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಪ್ರಜಾಪ್ರಭುತ್ವ ಹಾಗೂ ಸಂವಿಧಾನ ರಕ್ಷಣೆಗಾಗಿ ಕೋಮುವಾದಿ ಹಾಗೂ ಮತೀಯವಾದಿ ಬಿಜೆಪಿಯನ್ನು ಸೋಲಿಸುವ ಮೂಲಕ ಬಿಜೆಪಿಯನ್ನು ದೂರವಿಡಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ ಎಚ್. ಸಿ. ಮಹದೇವಪ್ಪ ಹೇಳಿದರು.
ನಂಜನಗೂಡು


ತಾಲೂಕಿನ ಸಿಂಧುವಳ್ಳಿ ಗ್ರಾಮದ ಸಂತಾನ ಗಣಪತಿ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾದ ಚಾಮರಾಜನಗರ ಲೋಕಸಭಾ ಕ್ಷೇತ್ರದ ಚುನಾವಣಾ ಪ್ರಚಾರ ಹಾಗೂ ಕಾಂಗ್ರೆಸ್ ಕಾರ್ಯಕರ್ತ ಮುಖಂಡರ ಸಭೆಯಲ್ಲಿ ಅವರು ಮಾತನಾಡಿದರು.
ಡಾ ಮಹದೇವಪ್ಪ ಹಾಗೂ ಮತ್ತಿತರ ಗಣ್ಯರು ದೀಪ ಬೆಳಗಿಸಿ ದಿವಂಗತ ಧೃವ ನಾರಾಯಣ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಉದ್ಘಾಟಿಸಿದರು.
ನಂಜನಗೂಡಿನಲ್ಲಿ ಎಲ್ಲಾ ಕಾಂಗ್ರೆಸ್ ಕಾರ್ಯಕರ್ತ ಮುಖಂಡರು ಯಾವುದೇ ಭಿನ್ನಮತವಿಲ್ಲದೆ ಒಗ್ಗಟ್ಟಿನಿಂದ ಶಾಸಕ ದರ್ಶನ್ ದ್ರುವನಾರಾಯಣ್ ಅವರ ನೇತೃತ್ವದಲ್ಲಿ ಚುನಾವಣೆ ಎದುರಿಸಿ ನಮ್ಮ ಪಕ್ಷದ ಅಭ್ಯರ್ಥಿ ಸುನಿಲ್ ಬೋಸ್ ಅವರಿಗೆ ಹೆಚ್ಚಿನ ಮತ ಕೊಡಿಸುವ ಮೂಲಕ ಕ್ಷೇತ್ರದ ಅಭಿವೃದ್ಧಿಗೆ ಸಹಕರಿಸಿ. ಇದಕ್ಕೆ ನನ್ನ ಮತ್ತು ಸಿಎಂ ಸಿದ್ದರಾಮಯ್ಯನವರ ಸಂಪೂರ್ಣ ಬೆಂಬಲವಿದೆ ಎಂದು ಪುತ್ರ ಸುನಿಲ್ ಬೋಸ್ ಪರ ಮತಯಾಚನೆ ಮಾಡಿದರು.
ಶಾಸಕ ದರ್ಶನ್ ದ್ರುವ ನಾರಾಯಣ್ ಮಾತನಾಡಿ, ನಮ್ಮ ಜನಪ್ರಿಯ ಮುಖ್ಯಮಂತ್ರಿಗಳು ಈ ಸಾಲಿನ ಬಜೆಟ್ ನಲ್ಲಿ ಮೈಸೂರು ನಂಜನಗೂಡು ಚಾಮರಾಜನಗರ ಸೇರಿದಂತೆ ಹಲವಾರು ಅಭಿವೃದ್ಧಿ ಯೋಜನೆಗಳಿಗೆ ಅನುದಾನ ನೀಡಿದ್ದಾರೆ ಅಲ್ಲದೆ ಚುನಾವಣೆಗೆ ಮುನ್ನ ಭರವಸೆ ನೀಡಿದ್ದ ಗ್ಯಾರಂಟಿಗಳನ್ನು ಅನುಷ್ಠಾನಕ್ಕೆ ತಂದು ನುಡಿದಂತೆ ನಡೆದ ಸರ್ಕಾರವಾಗಿದೆ. ಹಾಗಾಗಿ ನಮ್ಮ ಕಾರ್ಯಕರ್ತ, ಮುಖಂಡರು ಇದನ್ನು ಮತದಾರರಿಗೆ ತಿಳಿಸುವ ಮೂಲಕ ನಮ್ಮ ಪಕ್ಷದ ಅಭ್ಯರ್ಥಿ ಸುನಿಲ್ ಬೋಸ್ ಅವರನ್ನು ಹೆಚ್ಚಿನ ಮತಗಳ ಅಂತರದಿಂದ ಗೆಲ್ಲಿಸುವಂತೆ ಮನವಿ ಮಾಡಿಕೊಂಡರು.
ಪಕ್ಷದ ಅಭ್ಯರ್ಥಿ ಸುನಿಲ್ ಬೋಸ್ ಮಾತನಾಡಿ, ಪಕ್ಷದ ಹೈಕಮಾಂಡ್ ಮತ್ತು ನಮ್ಮ ವರಿಷ್ಠರು ಈ ಚುನಾವಣೆಯಲ್ಲಿ ನನಗೊಂದು ಅವಕಾಶ ನೀಡಿದ್ದಾರೆ ಹಾಗಾಗಿ ನುಡಿದಂತೆ ನಡೆಯದ ಬಿಜೆಪಿ ಪಕ್ಷವನ್ನು ದೂರವಿಟ್ಟು ನುಡಿದಂತೆ ನಡೆದ ನಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹಾಗೂ ಕಾಂಗ್ರೆಸ್ ಪಕ್ಷದ ಕೈ ಬಲಪಡಿಸುವ ಉದ್ದೇಶದಿಂದ ಈ ಬಾರಿ ನನ್ನನ್ನು ಗೆಲ್ಲಿಸುವಂತೆ ಮನವಿ ಮಾಡಿಕೊಂಡರು.
ಕಾರ್ಯಕ್ರಮದಲ್ಲಿ ಪಕ್ಷದ ಅಭಿಮಾನಿಗಳು ತಮ್ಮ ನೆಚ್ಚಿನ ನಾಯಕರಿಗೆ ಹಾಗೂ ಅಭ್ಯರ್ಥಿಗೆ ಮಾಲಾರ್ಪಣೆ ಮಾಡಿ ಅಭಿನಂದಿಸಿದರು.
ಡಾ , ಯತೀಂದ್ರ ಸಿದ್ದರಾಮಯ್ಯ, ಶಾಸಕರುಗಳಾದ ಗಣೇಶ್ ಪ್ರಸಾದ್, ಅನಿಲ್ ಚಿಕ್ಕಮಾದು, ಮಾಜಿ ಶಾಸಕರುಗಳಾದ ಕಳಲೆ ಕೇಶವಮೂರ್ತಿ, ಭಾರತೀ ಶಂಕರ್ ನಂಜುಂಡಸ್ವಾಮಿ, ವಾಲ್ಮೀಕಿ ನಿಗಮದ ಮಾಜಿ ಅಧ್ಯಕ್ಷ ಎಸ್ಸಿ ಬಸವರಾಜ್, ನಂಜನಗೂಡಿನ ಉಸ್ತುವಾರಿಗಳಾದ ಶ್ರೀಕಂಠು, ಸೋಮೇಶ್ ಕೆಪಿಸಿಸಿ ಕಾರ್ಯದರ್ಶಿ ಕಾವೇರಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕುರಟ್ಟಿ, ಮಹೇಶ್ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಲತಾ ಸಿದ್ದ ಶೆಟ್ಟಿ, ಮುಖಂಡರಾದ ಇಂದನ್ ಬಾಬು, ಬುಲೆಟ್ ಮಹಾದೇವಪ್ಪ, ಕಳಲೆ ಮಹೇಶ್, ನಾಗೇಶ್ ರಾಜ್, ಗಿರೀಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು