11:33 PM Tuesday30 - April 2024
ಬ್ರೇಕಿಂಗ್ ನ್ಯೂಸ್
ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ… ಅಶ್ಲೀಲ ವೀಡಿಯೊ ಪ್ರಕರಣ: ಬಂಧನದಿಂದ ತಪ್ಪಿಸಿಕೊಳ್ಳಲು ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ… ದತ್ತಪೀಠ ಬಳಿ 100 ಅಡಿ ಆಳಕ್ಕೆ ಉರುಳಿ ಬಿದ್ದ ಪ್ರವಾಸಿಗರ ಮಿನಿ ಬಸ್:… ರಾಜ್ಯದಲ್ಲಿ ಅಭಿವೃದ್ಧಿ ಸ್ಥಗಿತ, ಕಾನೂನು ಸುವ್ಯವಸ್ಥೆ ಚಿಂತಾಜನಕ: ಬೆಳಗಾವಿಯಲ್ಲಿ ಪ್ರಧಾನಿ ಮೋದಿ ವಾಗ್ದಾಳಿ ಬೆಳಗಾವಿಯಲ್ಲಿ ಉತ್ತರ ಕರ್ನಾಟಕ ಶೈಲಿಯ ಜೋಳ ರೊಟ್ಟಿ ಸವಿದ ಪ್ರಧಾನಿ ಮೋದಿ ವಿಜಯಪುರದ ಶಿರನಾಳದಲ್ಲಿ ಶತಾಯುಷಿ ಭಾಗವ್ವ ಮತ ಚಲಾವಣೆ: 108ರ ಹರೆಯದ ಹಿರಿಯಜ್ಜಿ ಪ್ರಧಾನಿ ಮೋದಿ ಏ.28ರಂದು ಶಿರಸಿಗೆ: ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಪರ… ಸುಪ್ರೀಂ ಕೋರ್ಟ್ ಸೂಚಿಸಿದ ಬಳಿಕ ಕೊನೆಗೂ ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ಮಾಡಿದ… ಚಳ್ಳಕೆರೆ ತಾಲೂಕಿನಲ್ಲಿ ಶಾಂತಿಯುತ ಮತದಾನ: ಚುನಾವಣೆ ಕರ್ತವ್ಯನಿರತ ಮಹಿಳಾ ಸಿಬ್ಬಂದಿ ಸಾವು

ಇತ್ತೀಚಿನ ಸುದ್ದಿ

ಬಿಜೆಪಿ, ಆರೆಸ್ಸೆಸ್, ಜನಸಂಘದ ಯಾರಾದ್ರು ಒಬ್ರು ಸ್ವಾತಂತ್ರ್ಯಕ್ಕಾಗಿ ಹುತಾತ್ಮರಾಗಿದ್ರೆ ತೋರಿಸಿ, ನಾನು ರಾಜಕೀಯ ನಿವೃತ್ತಿಯಾಗುತ್ತೇನೆ: ಸಿಎಂ ಸಿದ್ದರಾಮಯ್ಯ ಸವಾಲು

13/04/2024, 18:24

*ಬಾಂಡ್ ಮೂಲಕ ಸಂಗ್ರಹಿಸಿದ 7600 ಕೋಟಿ ಹಣಕ್ಕೆ ತೆರಿಗೆ ಕಟ್ಟಿದ್ದೀರಾ? ಈಗ ಯಾರನ್ನು ಜೈಲಿಗೆ ಕಳುಹಿಸಬೇಕು ಮೋದಿಯವರೇ: ಸಿ.ಎಂ ಪ್ರಶ್ನೆ*

*ಬಾಂಡ್ ಮೂಲಕ ನೀವು ಸಂಗ್ರಹಿಸಿದ 7600 ಕೋಟಿ ಹಣಕ್ಕೆ ತೆರಿಗೆ ಕಟ್ಟಿದ್ದೀರಾ ಮೋದಿಯವರೇ? ಈಗ ಯಾರನ್ನು ಜೈಲಿಗೆ ಕಳುಹಿಸಬೇಕು ಹೇಳಿ ಮೋದಿಯವರೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಾರವಾಗಿ ಪ್ರಶ್ನಿಸಿದರು*

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಬಿಜೆಪಿ, ಆರೆಸ್ಸೆಸ್, ಜನಸಂಘದ ಯಾರಾದರೂ ಒಬ್ಬ ದೇಶದ ಸ್ವಾತಂತ್ರ್ಯಕ್ಕಾಗಿ ಹುತಾತ್ಮರಾಗಿದ್ರೆ ತೋರಿಸಿ, ನಾನು ರಾಜಕೀಯ ನಿವೃತ್ತಿಯಾಗುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ
ಸವಾಲು ಹಾಕಿದರು.
ನಂಜನಗೂಡು ತಾಲ್ಲೂಕಿನ ಕಳಲೆ ಗೇಟ್ ಬಳಿ ಚಾಮರಾಜನಗರ ಲೋಕಸಭಾ ಕ್ಷೇತ್ರದ ಚುನಾವಣಾ ಪ್ರಚಾರದ ಬೃಹತ್ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಭ್ರಷ್ಟರನ್ನು ಜೈಲಿಗೆ ಕಳುಹಿಸುತ್ತೇವೆ ಎಂದು ಮೋದಿಯವರು ನೆನ್ನೆ ಭಾಷಣ ಮಾಡಿದ್ದಾರೆ. ಆದರೆ, ದೇಶದಲ್ಲಿದ್ದ ಭ್ರಷ್ಟರೆಲ್ಲಾ ಈಗ ಯಾವ ಪಕ್ಷದಲ್ಲಿದ್ದಾರೆ ಎಂದು ಸಿಎಂ ಲೇವಡಿ ಮಾಡಿದರು.
ಐಟಿ, ಇಡಿ, ಸಿಬಿಐ ದುರುಪಯೋಗ ಪಡೆಸಿಕೊಂಡು ಮುಖ್ಯಮಂತ್ರಿಗಳಾದ ಕೇಜ್ರಿವಾಲ್ ಮತ್ತು ಹೇಮಂತ್ ಸೊರೇನ್ ಅವರನ್ನು ಜೈಲಿಗೆ ಕಳುಹಿಸಿದ ಮೋದಿಯವರೇ ಬಿಜೆಪಿ ಸಂಗ್ರಹಿಸಿದ 7600 ಕೋಟಿ ಹಣಕ್ಕೆ ಒಂದು ಪೈಸೆ ತೆರಿಗೆ ಕಟ್ಟಿಲ್ಲವಲ್ಲಾ ಈ ಹಗರಣಕ್ಕಾಗಿ ಯಾರನ್ನು ಜೈಲಿಗೆ ಕಳುಹಿಸಬೇಕು ನೀವೇ ಹೇಳಿ ಎಂದು ಪ್ರಶ್ನಿಸಿದರು.
ಮೋದಿಯವರಾಗಲೀ, ಬಿಜೆಪಿಯವರಾಗಲೀ ಇವತ್ತಿನವರೆಗೂ ಯುವಕರು, ಮಹಿಳೆಯರು, ಹಿಂದುಳಿದವರು, ದಲಿತರು, ರೈತರು, ಶ್ರಮಿಕರು, ದುಡಿಯುವವರ ಪರವಾಗಿ ಒಂದೂ ಸರಿಯಾದ ಕಾರ್ಯಕ್ರಮ ರೂಪಿಸಿಲ್ಲ. ಇದೇನಾ ಅಚ್ಛೆ ದಿನ್ ಎಂದು ಪ್ರಶ್ನಿಸಿದರು.
ಡೀಸೆಲ್, ಪೆಟ್ರೋಲ್, ಗ್ಯಾಸ್, ರಸಗೊಬ್ಬರ, ಬೇಳೆ ಕಾಳು, ಅಡುಗೆ ಎಣ್ಣೆ ಬೆಲೆ ಆಕಾಶಕ್ಕೆ ಏರಿಸಿದ್ದೀರಲ್ಲಾ ಮೋದಿಯವರೇ? ಇದಾ ನಿಮ್ಮ ಅಭಿವೃದ್ಧಿ ಮತ್ತು ಅಚ್ಚೇದಿನ್ ಎನ್ನುತ್ತಾ ಪ್ರಧಾನಿ ಮೋದಿಯವರ ಸಾಲು ಸಾಲು ಸುಳ್ಳುಭರವಸೆಗಳನ್ನು ಪಟ್ಟಿ ಮಾಡಿ ವ್ಯಂಗ್ಯವಾಡಿದರು.
ನಾವು ದೇಶ ಭಕ್ತರು ಎಂದು ಹೇಳಿ ಕೊಳ್ಳುವ ನೀವು ದೇಶಭಕ್ತರಾಗಿದ್ರೆ, ಭಾರತ ಮಾತೆ ಬಗ್ಗೆ ಪ್ರೀತಿ ಇದ್ದಿದ್ರೆ ನೀವೇಕೆ ದೇಶದ ಸ್ವಾತಂತ್ರ ಹೋರಾಟದಲ್ಲಿ ಭಾಗವಹಿಸಲಿಲ್ಲ ?ಮಹಾತ್ಮಗಾಂಧಿಯವರ ನೇತೃತ್ಬದಲ್ಲಿ ಬ್ರಿಟಿಷರ ವಿರುದ್ಧ ಹೋರಾಟ ಮಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದು ನಮ್ಮ ಕಾಂಗ್ರೆಸ್ ಪಕ್ಷ ಹಾಗಾಗಿ ನಾವೇ ನಿಜವಾದ ದೇಶಭಕ್ತರು ಎಂದು ಬಿಜೆಪಿಯವರಿಗೆ ಟಾಂಗ್ ನೀಡಿದರು.
ಸಂಘ ಪರಿವಾರ ಹಾಗೂ ಬಿ ಜೆ ಪಿಯ ಒಬ್ಬನೇ ಒಬ್ಬ ದೇಶಕ್ಕಾಗಿ ಹುತಾತ್ಮರಾಗಿದ್ರೆ ತೋರಿಸಿ, ನಾನು ರಾಜಕೀಯ ಬಿಟ್ಟು ಬಿಡ್ತೀನಿ ಎಂದು ಸಿ.ಎಂ. ನೇರ ಸವಾಲು ಹಾಕಿದರು.
ದೇಶಕ್ಕಾಗಿ ಏನೇನೂ ಮಾಡದವರಿಂದ ನಾವು ದೇಶಭಕ್ತಿ ಪಾಠ ಕಲಿಯಬೇಕಾ ಎಂದು ಪ್ರಶ್ನಿಸಿ ಬಿಜೆಪಿ ಹಾಗೂ ನರೇಂದ್ರ ಮೋದಿಯವರ ವಿರುದ್ಧ ವಾಗ್ದಾಳಿ ನಡೆಸಿದರು.
ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳಿಗೆ ಯಾವುದೇ ಸಿದ್ದಾಂತ ವಿಲ್ಲ ಹಾಗಾಗಿ ನಾಡಿನ ಹಲವಾರು ಮುಖಂಡರು ಬಿಜೆಪಿ -ಜೆ ಡಿ ಎಸ್ ತೊರೆದು ನಮ್ಮ ಪಕ್ಷದ ಸಿದ್ಧಾಂತಗಳನ್ನು ಒಪ್ಪಿ ಸೇರ್ಪಡೆ ಗೊಳ್ಳುತ್ತಿದ್ದಾರೆ ಎಂದರು.

ನುಡಿದಂತೆ ನಡೆಯದ ಬಿಜೆಪಿ ಪಕ್ಷದ ಅಭ್ಯರ್ಥಿಯನ್ನು ಸೋಲಿಸಿ ನುಡಿದಂತೆ ನಡೆದ ನಮ್ಮ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸುನಿಲ್ ಬೋಸ್ ಗೆ ಮತ ನೀಡಿ ಹೆಚ್ಚಿನ ಅಂತರದಿಂದ ಗೆಲ್ಲಿಸಿ ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಉಳಿಸುವಂತೆ ಮನವಿ ಮಾಡಿಕೊಂಡರು

ಜಿಲ್ಲಾ ಉಸ್ತುವಾರಿ ಸಚಿವ ಹೆಚ್ ಸಿ ಮಹದೇವಪ್ಪ ಹಾಗೂ ಶಾಸಕ ದರ್ಶನ್ ಧ್ರುವನಾರಾಯಣ್ ಮಾತನಾಡಿ ಪ್ರಜಾಪ್ರಭುತ್ವ ಹಾಗು ಸಂವಿಧಾನ ಉಳಿವಿಗಾಗಿ ಮತ್ತು ನುಡಿದಂತೆ ನಡೆಯದ ಬಿಜೆಪಿ ಯನ್ನು ತಿರಸ್ಕರಿಸಿ ನುಡಿದಂತೆ ನಡೆದ ಸಿ ಎಂ ಸಿದ್ದರಾಮಯ್ಯ ಅವರ ಕೈ ಬಲಪಡಿಸಲು ಅವರ ಯೋಜನೆಗಳನ್ನು ಮತದಾರರಿಗೆ ತಿಳಿಸುವ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡುವಂತೆ ಕಾರ್ಯಕರ್ತ ಮುಖಂಡರಲ್ಲಿ ಮನವಿ ಮಾಡಿಕೊಂಡರು

ನಂಜನಗೂಡು , ಗುಂಡ್ಲುಪೇಟೆ, ವರುಣಾ ವಿಧಾನಸಭಾ ಕ್ಷೇತ್ರದಿಂದ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತ ಮುಖಂಡರು ಭಾಗವಹಿಸಿದ್ದರು


ಕಾರ್ಯಕ್ರಮದಲ್ಲಿ ಸಚಿವರಾದ ಸತೀಶ್ ಜಾರಕಿಹೊಳಿ, ಕೆ.ವೆಂಕಟೇಶ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ತನ್ವೀರ್ ಸೇಠ್, ಜಿಲ್ಲೆಯ ಶಾಸಕರುಗಳಾದ ದರ್ಶನ್ ದ್ರುವನಾರಾಯಣ್, ಗಣೇಶ್ ಪ್ರಸಾದ್, ಕೃಷ್ಣಮೂರ್ತಿ, ಪುಟ್ಟರಂಗಶೆಟ್ಟಿ, ಮಾಜಿ ಶಾಸಕರಾದ ಕೇಶವಮೂರ್ತಿ, ರಾಜ್ಯ ವಾಲ್ಮೀಕಿ ನಿಗಮದ ಮಾಜಿ ಅಧ್ಯಕ್ಷ ಎಸ್ ಸಿ ಬಸವರಾಜ್,ಡಿಸಿಸಿ ಅಧ್ಯಕ್ಷ ವಿಜಯ್ ಕುಮಾರ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಕುರಟ್ಟಿಮಹೇಶ್, ರಂಗಸ್ವಾಮಿ, ಶಂಕರ್ ಸೇರಿದಂತೆ ಹಲವಾರು ಮುಖಂಡರುಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು