2:31 PM Tuesday30 - April 2024
ಬ್ರೇಕಿಂಗ್ ನ್ಯೂಸ್
ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ… ಅಶ್ಲೀಲ ವೀಡಿಯೊ ಪ್ರಕರಣ: ಬಂಧನದಿಂದ ತಪ್ಪಿಸಿಕೊಳ್ಳಲು ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ… ದತ್ತಪೀಠ ಬಳಿ 100 ಅಡಿ ಆಳಕ್ಕೆ ಉರುಳಿ ಬಿದ್ದ ಪ್ರವಾಸಿಗರ ಮಿನಿ ಬಸ್:… ರಾಜ್ಯದಲ್ಲಿ ಅಭಿವೃದ್ಧಿ ಸ್ಥಗಿತ, ಕಾನೂನು ಸುವ್ಯವಸ್ಥೆ ಚಿಂತಾಜನಕ: ಬೆಳಗಾವಿಯಲ್ಲಿ ಪ್ರಧಾನಿ ಮೋದಿ ವಾಗ್ದಾಳಿ ಬೆಳಗಾವಿಯಲ್ಲಿ ಉತ್ತರ ಕರ್ನಾಟಕ ಶೈಲಿಯ ಜೋಳ ರೊಟ್ಟಿ ಸವಿದ ಪ್ರಧಾನಿ ಮೋದಿ ವಿಜಯಪುರದ ಶಿರನಾಳದಲ್ಲಿ ಶತಾಯುಷಿ ಭಾಗವ್ವ ಮತ ಚಲಾವಣೆ: 108ರ ಹರೆಯದ ಹಿರಿಯಜ್ಜಿ ಪ್ರಧಾನಿ ಮೋದಿ ಏ.28ರಂದು ಶಿರಸಿಗೆ: ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಪರ… ಸುಪ್ರೀಂ ಕೋರ್ಟ್ ಸೂಚಿಸಿದ ಬಳಿಕ ಕೊನೆಗೂ ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ಮಾಡಿದ… ಚಳ್ಳಕೆರೆ ತಾಲೂಕಿನಲ್ಲಿ ಶಾಂತಿಯುತ ಮತದಾನ: ಚುನಾವಣೆ ಕರ್ತವ್ಯನಿರತ ಮಹಿಳಾ ಸಿಬ್ಬಂದಿ ಸಾವು

ಇತ್ತೀಚಿನ ಸುದ್ದಿ

ವಿಜಯ ಬ್ಯಾಂಕ್, ಕಾರ್ಪೊರೇಶನ್ ಬ್ಯಾಂಕ್‌ ಎಲ್ಲಿಗೆ ಹೋಯಿತು?; ಬಿಜೆಪಿ ನಾಯಕರು ಉತ್ತರಿಸಲಿ: ಮಾಜಿ ಸಚಿವ ರಮಾನಾಥ ರೈ ಸವಾಲು

14/04/2024, 11:04

ಮಂಗಳೂರು(reporterkarnataka.com): ಪ್ರಧಾನಿ ನರೇಂದ್ರ ಮೋದಿ ಅವರು
ಮಂಗಳೂರಿನಲ್ಲಿ ರೋಡ್ ಶೋ ನಡೆಸುವುದೇನೋ ಸರಿ. ಆದರೆ, ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು ಎಂಬ ಬಗ್ಗೆ ಉತ್ತರಿಸಬೇಕು ಎಂದು ಮಾಜಿ ಸಚಿವ ರಮಾನಾಥ ರೈ ಬಿಜೆಪಿ ನಾಯಕರಿಗೆ ಆಗ್ರಹಿಸಿದ್ದಾರೆ.
ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಅವರು ಮಾತನಾಡಿದರು.
ಬಿಜೆಪಿ ತಮ್ಮ ಅವಧಿಯಲ್ಲಿ ಅಭಿವೃದ್ಧಿ ವಿಚಾರದಲ್ಲಿ ಯಾವ ಸಾಧನೆ ಮಾಡಿದೆ ಎಂಬುದನ್ನು ಜನರಿಗೆ ತಿಳಿಸಬೇಕು. ಸಾಮಾಜಿಕ ಸಾಮರಸ್ಯಕ್ಕೆ ಧಕ್ಕೆ ಮಾಡುವ ಜತೆ ಅವರಿಗೆ ಓಟು ಹೇಗೆ ಬರುತ್ತೆ ಅನ್ನುವ ನೆಲೆಯಲ್ಲಿ ಜನರ ನಡುವೆ ಕಂದಕ ಸೃಷ್ಟಿಸುವ ಕೆಲಸ ಮಾತ್ರ ಬಿಜೆಪಿ ಅವಧಿಯಲ್ಲಿ ಆಗಿದೆ ಎಂದು ಆರೋಪಿಸಿದರು.
ಕಾಂಗ್ರೆಸ್ ಸಂಸದರ ಅವಧಿಯಲ್ಲಿ ಆಗಿರುವ ವಿಮಾನ ನಿಲ್ದಾಣವನ್ನು ಅದಾನಿಗೆ ಮಾರಾಟ ಮಾಡಲಾಗಿದೆ. ಇಲ್ಲಿ ಹುಟ್ಟಿ ಬೆಳೆದ ವಿಜಯ ಬ್ಯಾಂಕ್, ಕಾರ್ಪೊರೇಶನ್ ಬ್ಯಾಂಕ್‌ಗಳು ಎಲ್ಲಿಗೆ ಹೋಗಿವೆ ಎಂಬುದನ್ನೂ ಬಿಜೆಪಿಯವರು ತಿಳಿಸಬೇಕು.
ಜಿಲ್ಲೆಯಲ್ಲಿ ಅಭಿವೃದ್ಧಿ ಆಗಿದ್ದು ಕಾಂಗ್ರೆಸ್ ಅವಧಿಯಲ್ಲಿ ಮಾತ್ರ. ಜನ ಮತ್ತೆ ಅಭಿವೃದ್ದಿ ಬಗ್ಗೆ ಚರ್ಚೆ ಮಾಡಬೇಕು. ದ.ಕ. ಜಿಲ್ಲೆಯ ಅಭಿವೃದ್ಧಿ ಆಗಿರುವುದು ಬೆನಗಲ್ ಶಿವರಾಯರಿಂದ ಹಿಡಿದು ಜನಾರ್ದನ ಪೂಜಾರಿವರಿಗಿನ ಲೋಕಸಭಾ ಸದಸ್ಯರ ಅವಧಿಯಲ್ಲಿ. ಕಳೆದ ಮೂರು ದಶಕಗಳಿಂದ ಜಿಲ್ಲೆಯ ಅಭಿವೃದ್ಧಿಗೆ ತೊಡಕಾಗಿದ್ದು, ಮತ್ತೆ ಅಭಿವೃದ್ಧಿ ಶಕೆ ನಮ್ಮ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರಿಂದ ಆಗಲಿದೆ ಎಂದು ಹೇಳಿದರು.

ಕಳೆದ 70 ವರ್ಷಗಳಲ್ಲಿ ಕಾಂಗ್ರೆಸ್ ಏನು ಮಾಡಿದೆ ಎಂದು ಪ್ರಶ್ನಿಸುವವರು ಕಳೆದ 10 ವರ್ಷಗಳಲ್ಲಿ ಕೇಂದ್ರದಲ್ಲಿರುವ ಬಿಜೆಪಿ ಏನು ಸಾಧನೆ ಮಾಡಿದೆ ಎಂದು ಹೇಳಲಿ. ಕಪ್ಪು ಹಣ ತರುತ್ತೇವೆ ಎಂದವರು ತಂದಿದ್ದಾರೆಯೇ? ಪ್ರಣಾಳಿಕೆಯಲ್ಲಿ ಘೋಷಿರುವಂತೆ ಉದ್ಯೋಗ ನೀಡಿದಾರೆಯೇ ಎಂದು ಪ್ರಶ್ನಿಸಿದ ಅವರು, ಕಾಂಗ್ರೆಸ್ ಯಾವತ್ತೂ ಜನಪರ, ಬಡವರ ಪರ ಅಭಿವೃದ್ಧಿ ಕೆಲಸಗಳನ್ನು ಮಾಡಿದೆ. ಭೂ ಸುಧಾರಣೆ ಕಾಯ್ದೆಯ ಹೆಚ್ಚು ಫಲಾನುಭವಿಗಳು ದಕ ಜಿಲ್ಲೆಯವರು. 20 ಅಂಶ ಕಾರ್ಯಕ್ರಮ ಸಂಪೂರ್ಣ ಆಗಿ ಅನುಷ್ಟಾನ ಆಗಿರುವುದು ದಕ ಜಿಲ್ಲೆಯಲ್ಲಿ. ಋಣ ಪರಿಹಾರ ಕಾಯ್ದೆ ಮಾಡಿ ವಿವಿಧ ನಿಗಮಗಳ ಮೂಲಕ ನ್ಯಾಯ ಒದಗಿಸುವ ಕಾರ್ಯ, ಬ್ಯಾಂಕ್ ರಾಷ್ಟ್ರೀಕರಣ ಕಾರ್ಯ ಕಾಂಗ್ರೆಸ್ನಿಂದ ಆಗಿದೆ. ಆದರೆ ಕೇಂದ್ರವು ರಾಜ್ಯಕ್ಕೆ ನೀಡಬೇಕಾದ ತೆರಿಗೆ ಪಾಲು ನೀಡುತ್ತಿಲ್ಲ. ಬರ ಪರಿಹಾರಕ್ಕೆ ಮುಂದಾಗಿಲ್ಲ ಎಂದವರು ಆರೋಪಿಸಿದರು.
ಬ್ರಹ್ಮಶ್ರೀ ನಾರಾಯಣ ಗುರುಗಳ ಸ್ತಬ್ಧ ಚಿತ್ರ ನಿರಾಕರಣೆ ವಿಷಯದಲ್ಲಿ ಪ್ರಧಾನಿಯವರು ಬಯಸಿದ್ದರೆ ಅವಕಾಶ ಸಿಗುತ್ತಿತ್ತು. ಆದರೆ ಆ ಕಾರ್ಯ ಮಾಡದೆ ಇದೀಗ ನಾರಾಯಣ ಗುರುಗಳ ಮೂರ್ತಿಗೆ ಹಾರಾರ್ಪಣೆಗೆ ಮುಂದಾಗಿದ್ದಾರೆ ಎಂದು ಟೀಕಿಸಿದರು.
ರಾಜ್ಯದಲ್ಲಿ ಒಂದು ವರ್ಷದಿಂದ ಆಭಿವೃದ್ಧಿ ಆಗಿಲ್ಲ ಎಂದು ಆರೋಪ ಇದೆಯಲ್ಲ ಎಂಬ ಪ್ರಶ್ನೆಗೆ, ಒಂದು ವರ್ಷದಲ್ಲಿ ಸಾಕಷ್ಟು ಕೆಲಸ ಆಗಿದೆ. ಇನ್ನೂ ಅವಕಾಶ ಇದೆ. ಆದರೆ ನಾವು ಜಿಲ್ಲೆಗೆ ಬೆಂಕಿ ಕೊಡುತ್ತೇವೆ ಎಂಬ ಕೋಮು ಪ್ರಚೋದಕ, ಕೊರಗಜ್ಜನಿಗೆ ನ್ಯಾಯ ಕೊಡಿಸುವ ಅತೀ ಬುದ್ದಿವಂತಿಕೆಯ ಮಾತನ್ನು ನಾವು ಆಡಿಲ್ಲ ಎಂದರು.
ಪಕ್ಷದ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ಇಬ್ರಾಹೀಂ ಕೋಡಿಜಾಲ್, ಅಶ್ರಫ್, ಶಶಿಧರ ಹೆಗ್ಡೆ, ಳಾವೆಚ್ ಪಿಂಟೋ, ವಿನಯರಾಜ್, ಶುಭೋದಯ ಆಳ್ವ, ಹರಿನಾಥ್ ಜೋಗಿ, ಪೃಥ್ವಿರಾಜ್, ನವೀನ್ ಡಿಸೋಜಾ, ಟಿ. ಕೆ. ಸುಧೀರ್, ನಜೀರ್ ಬಜಾಲ್, ಶಬ್ಬೀರ್ ಸಿದ್ದಕಟ್ಟೆ, ಅಶೋಕ್ ಡಿ.ಕೆ. ಮೊದಲಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು