11:27 PM Tuesday30 - April 2024
ಬ್ರೇಕಿಂಗ್ ನ್ಯೂಸ್
ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ… ಅಶ್ಲೀಲ ವೀಡಿಯೊ ಪ್ರಕರಣ: ಬಂಧನದಿಂದ ತಪ್ಪಿಸಿಕೊಳ್ಳಲು ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ… ದತ್ತಪೀಠ ಬಳಿ 100 ಅಡಿ ಆಳಕ್ಕೆ ಉರುಳಿ ಬಿದ್ದ ಪ್ರವಾಸಿಗರ ಮಿನಿ ಬಸ್:… ರಾಜ್ಯದಲ್ಲಿ ಅಭಿವೃದ್ಧಿ ಸ್ಥಗಿತ, ಕಾನೂನು ಸುವ್ಯವಸ್ಥೆ ಚಿಂತಾಜನಕ: ಬೆಳಗಾವಿಯಲ್ಲಿ ಪ್ರಧಾನಿ ಮೋದಿ ವಾಗ್ದಾಳಿ ಬೆಳಗಾವಿಯಲ್ಲಿ ಉತ್ತರ ಕರ್ನಾಟಕ ಶೈಲಿಯ ಜೋಳ ರೊಟ್ಟಿ ಸವಿದ ಪ್ರಧಾನಿ ಮೋದಿ ವಿಜಯಪುರದ ಶಿರನಾಳದಲ್ಲಿ ಶತಾಯುಷಿ ಭಾಗವ್ವ ಮತ ಚಲಾವಣೆ: 108ರ ಹರೆಯದ ಹಿರಿಯಜ್ಜಿ ಪ್ರಧಾನಿ ಮೋದಿ ಏ.28ರಂದು ಶಿರಸಿಗೆ: ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಪರ… ಸುಪ್ರೀಂ ಕೋರ್ಟ್ ಸೂಚಿಸಿದ ಬಳಿಕ ಕೊನೆಗೂ ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ಮಾಡಿದ… ಚಳ್ಳಕೆರೆ ತಾಲೂಕಿನಲ್ಲಿ ಶಾಂತಿಯುತ ಮತದಾನ: ಚುನಾವಣೆ ಕರ್ತವ್ಯನಿರತ ಮಹಿಳಾ ಸಿಬ್ಬಂದಿ ಸಾವು

ಇತ್ತೀಚಿನ ಸುದ್ದಿ

ನಂಜನಗೂಡಿನಲ್ಲಿ ರಂಗೇರಿದ ಚುನಾವಣಾ ಕಣ: ಕಾಂಗ್ರೆಸ್ ಅಭ್ಯರ್ಥಿ ಪರ ಗ್ರಾಮ ಗ್ರಾಮಗಳಲ್ಲಿ ಭಾರೀ ಪ್ರಚಾರ

16/04/2024, 15:51

ಮೋಹನ್ ನಂಜನಗೂಡು ಮೈಸೂರು

info.reporterarnataka@gmail.com

ಕಾಂಗ್ರೆಸ್ ಅಭ್ಯರ್ಥಿ ಸುನಿಲ್ ಬೋಸ್ ಪರ ನಂಜನಗೂಡು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ಗ್ರಾಮ ಪಂಚಾಯಿತಿ ಕೇಂದ್ರ ಸ್ಥಾನಗಳಲ್ಲಿ ಚುನಾವಣಾ ಮತ ಪ್ರಚಾರ ಹಮ್ಮಿಕೊಳ್ಳಲಾಯಿತು.
ದೇಬೂರು, ದೇವಿರಮ್ಮನಹಳ್ಳಿ, ನವಿಲೂರು, ಸಿಂಧುವಳ್ಳಿ ಸೇರಿದಂತೆ ಹಲವು ಗ್ರಾಮ ಪಂಚಾಯಿತಿ ಕೇಂದ್ರ ಸ್ಥಾನಗಳಲ್ಲಿ ಅಭ್ಯರ್ಥಿ ಸುನಿಲ್ ಬೋಸ್ ಪರ ಮತಯಾಚನೆಯನ್ನು ಕಾಂಗ್ರೆಸ್ ಮುಖಂಡರು ಮಾಡಿದರು.


ಶಾಸಕ ದರ್ಶನ್ ಧ್ರುವನಾರಾಯಣ್ ಹಾಗೂ ಮಾಜಿ ಶಾಸಕ ಕಳಲೆ ಕೇಶವಮೂರ್ತಿ ನೇತೃತ್ವದಲ್ಲಿ ಚುನಾವಣಾ ಪ್ರಚಾರ ನಡೆಯಿತು.
ಶಾಸಕ ದರ್ಶನ್ ಧ್ರುವನಾರಾಯಣ್ ಮಾತನಾಡಿ, ಕಳೆದ ಐದು ವರ್ಷಗಳಲ್ಲಿ ಬಿಜೆಪಿ ನಿಮ್ಮ ಗ್ರಾಮಗಳಿಗೆ ಏನು ಕೊಡುಗೆ ಕೊಟ್ಟಿದೆ ಎಂದು ಪ್ರಶ್ನಿಸಿದರು. ಕೋವಿಡ್ ನಂತಹ ಸಂಕಷ್ಟ ಕಾಲದಲ್ಲಿ ಆರೋಗ್ಯ ಹಸ್ತ ಎಂಬ ಜನಪರ ಕಾರ್ಯಕ್ರಮವನ್ನು ಹಮ್ಮಿಕೊಂಡು ರಾಜ್ಯಾದ್ಯಂತ ಜನರ ಸಂಕಷ್ಟಗಳಿಗೆ ಸ್ಪಂದಿಸಿದ್ದು ಕಾಂಗ್ರೆಸ್ ಪಕ್ಷ, ಹಲವು ಭಾಗ್ಯಗಳು ಹಾಗೂ ಗ್ಯಾರಂಟಿಗಳನ್ನು ನೀಡಿ ಜನರ ಕಷ್ಟಗಳಿಗೆ ಸ್ಪಂದಿಸಿ ನುಡಿದಂತೆ ನಡೆದ ಪಕ್ಷ ಕಾಂಗ್ರೆಸ್ ಪಕ್ಷ .ನುಡಿದಂತೆ ನಡೆದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕೈ ಬಲಪಡಿಸಲು ನಮ್ಮ ಪಕ್ಷದ ಅಭ್ಯರ್ಥಿ ಸುನಿಲ್ ಬೋಸ್ ಅವರನ್ನು ಲೋಕಸಭೆಗೆ ಆರಿಸಿ ಕಳಿಸುವಂತೆ ಮತದಾರರಲ್ಲಿ ಮನವಿ ಮಾಡಿಕೊಂಡರು.
ಮಾಜಿ ಶಾಸಕ ಕಳಲೆ ಕೇಶವಮೂರ್ತಿ ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕುರಟ್ಟಿ ಮಹೇಶ್ ಮಾತನಾಡಿ, ಕಾಂಗ್ರೆಸ್ ಸರ್ಕಾರದ ಸಾಧನೆ ಹಾಗೂ ಗ್ಯಾರಂಟಿಗಳನ್ನು ಮತದಾರರಿಗೆ ತಿಳಿಸುವ ಮೂಲಕ ಹೆಚ್ಚಿನ ಮತಗಳ ಅಂತರದಿಂದ ನಮ್ಮ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸುವಂತೆ ಕಾರ್ಯಕರ್ತ ಮುಖಂಡರಲ್ಲಿ ಮನವಿ ಮಾಡಿಕೊಂಡರು.
ಕಾಂಗ್ರೆಸ್ ಯುವ ಘಟಕದ ಅಧ್ಯಕ್ಷ ಅಶೋಕ್, ಮುಖಂಡರಾದ ಇಂಧನ್ ಬಾಬು,ಕರುಳಪುರ ನಾಗರಾಜ್, ಬುಲೆಟ್ ಮಹದೇವಪ್ಪ, ಚಾಮರಾಜ್, ಶಶಿರೇಖಾ, ಹೇಮಂತ್, ಬಸವರಾಜ್, ಸೇರಿದಂತೆ ಹಲವಾರು ಮುಖಂಡರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು