1:34 AM Tuesday30 - April 2024
ಬ್ರೇಕಿಂಗ್ ನ್ಯೂಸ್
ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ… ಅಶ್ಲೀಲ ವೀಡಿಯೊ ಪ್ರಕರಣ: ಬಂಧನದಿಂದ ತಪ್ಪಿಸಿಕೊಳ್ಳಲು ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ… ದತ್ತಪೀಠ ಬಳಿ 100 ಅಡಿ ಆಳಕ್ಕೆ ಉರುಳಿ ಬಿದ್ದ ಪ್ರವಾಸಿಗರ ಮಿನಿ ಬಸ್:… ರಾಜ್ಯದಲ್ಲಿ ಅಭಿವೃದ್ಧಿ ಸ್ಥಗಿತ, ಕಾನೂನು ಸುವ್ಯವಸ್ಥೆ ಚಿಂತಾಜನಕ: ಬೆಳಗಾವಿಯಲ್ಲಿ ಪ್ರಧಾನಿ ಮೋದಿ ವಾಗ್ದಾಳಿ ಬೆಳಗಾವಿಯಲ್ಲಿ ಉತ್ತರ ಕರ್ನಾಟಕ ಶೈಲಿಯ ಜೋಳ ರೊಟ್ಟಿ ಸವಿದ ಪ್ರಧಾನಿ ಮೋದಿ ವಿಜಯಪುರದ ಶಿರನಾಳದಲ್ಲಿ ಶತಾಯುಷಿ ಭಾಗವ್ವ ಮತ ಚಲಾವಣೆ: 108ರ ಹರೆಯದ ಹಿರಿಯಜ್ಜಿ ಪ್ರಧಾನಿ ಮೋದಿ ಏ.28ರಂದು ಶಿರಸಿಗೆ: ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಪರ… ಸುಪ್ರೀಂ ಕೋರ್ಟ್ ಸೂಚಿಸಿದ ಬಳಿಕ ಕೊನೆಗೂ ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ಮಾಡಿದ… ಚಳ್ಳಕೆರೆ ತಾಲೂಕಿನಲ್ಲಿ ಶಾಂತಿಯುತ ಮತದಾನ: ಚುನಾವಣೆ ಕರ್ತವ್ಯನಿರತ ಮಹಿಳಾ ಸಿಬ್ಬಂದಿ ಸಾವು

ಇತ್ತೀಚಿನ ಸುದ್ದಿ

ಹಿಂದುಳಿದ, ಅತಿ ಹಿಂದುಳಿದ ಸಮುದಾಯಗಳಿಂದ ಕಾಂಗ್ರೆಸ್ ಗೆ ಬೆಂಬಲ: ಏ. 19ರಂದು ನಂಜನಗೂಡಿನಲ್ಲಿ ಸಮಾವೇಶ

17/04/2024, 17:33

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಹಿಂದುಳಿದ ಹಾಗೂ ಅತಿ ಹಿಂದುಳಿದ ಮತ್ತು ಅವಕಾಶ ವಂಚಿತ ಸಣ್ಣ ಸಣ್ಣ ಸಮುದಾಯಗಳಿಂದ ಕಾಂಗ್ರೆಸ್ ಗೆ ಬೆಂಬಲ ವ್ಯಕ್ತಪಡಿಸಲು ಏಪ್ರಿಲ್ 19 ರಂದು ನಂಜನಗೂಡಿನ ಶ್ರೀ ಮಹದೇಶ್ವರ ಪ್ಯಾಲೇಸ್ ನಲ್ಲಿ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಹಿಂದುಳಿದ ಹಾಗೂ ಅತಿ ಹಿಂದುಳಿದ ವರ್ಗಗಳ ಜಿಲ್ಲಾಧ್ಯಕ್ಷ ನಾಗಭೂಷಣ್ ಹಾಗೂ ರಾಜ್ಯ ವಿಶ್ವಕರ್ಮ ನಿಗಮ ಮಂಡಳಿಯ ಮಾಜಿ ಅಧ್ಯಕ್ಷ ನಂದು ಕುಮಾರ್ ತಿಳಿಸಿದರು.


ಇಂದು ನಂಜನಗೂಡು ತಾಲೂಕು ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು.
ಏಪ್ರಿಲ್ 26ರ ಶುಕ್ರವಾರ ನಡೆಯಲಿರುವ ಲೋಕಸಭಾ ಚುನಾವಣೆ ಹಿನ್ನೆಲೆ ಚಾಮರಾಜನಗರ ಲೋಕಸಭಾ ಮೀಸಲು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸುನಿಲ್ ಬೋಸ್ ಅವರನ್ನು ಬೆಂಬಲಿಸಿ ಹಿಂದುಳಿದ, ಅತಿ ಹಿಂದುಳಿದ ಮತ್ತು ಅವಕಾಶ ವಂಚಿತ ಹಾಗೂ ಅಲೆಮಾರಿ ಸಮುದಾಯಗಳಿಂದ ಏಪ್ರಿಲ್ 19 ರಂದು ನಂಜನಗೂಡಿನ ಶ್ರೀ ಮಹದೇಶ್ವರ ಪ್ಯಾಲೆಸ್ ನಲ್ಲಿ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಸಭೆಯಲ್ಲಿ ಪ್ರಸಕ್ತ ವಿದ್ಯಮಾನಗಳು ಹಾಗೂ ಕಾಂಗ್ರೆಸ್ ಪಕ್ಷದ ಪಂಚ ಗ್ಯಾರೆಂಟಿ ಯೋಜನೆಗಳ ಬಗ್ಗೆ ವಿವರಣೆ ನೀಡಲಾಗುವುದು

ಭಾರತದ ಶ್ರೇಷ್ಠ ಸಂವಿಧಾನವನ್ನು ಬಲಿಷ್ಠವಾಗಿ ಉಳಿಸಿಕೊಳ್ಳಲು ಹಾಗೂ ದೇಶವನ್ನು ಸರ್ವ ಜನಾಂಗದ ಶಾಂತಿಯ ತೋಟವನ್ನಾಗಿಸುವ ಸಲುವಾಗಿ ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ನಮ್ಮ ಸಮುದಾಯಗಳ ಬೆಂಬಲ ಅತ್ಯವಶ್ಯಕವಾಗಿದೆ ಎಂದು ಸಮಾವೇಶದ ಬಗ್ಗೆ ವಿವರಿಸಿದರು

ಕಾರ್ಯಕ್ರಮದಲ್ಲಿ ರಾಜ್ಯ ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಅಧ್ಯಕ್ಷರಾದ ಹಾಗು ಮಾಜಿ ವಿಧಾನ ಪರಿಷತ್ ಸದಸ್ಯರಾದ ವೇಣುಗೋಪಾಲ್, ಸಮಾಜ ಕಲ್ಯಾಣ ಇಲಾಖೆ ಸಚಿವರಾದ ಎಚ್ ಸಿ ಮಹದೇವಪ್ಪ, ಶಾಸಕ ದರ್ಶನ್ ಧ್ರುವನಾರಾಯಣ್, ಮಾಜಿ ಶಾಸಕರುಗಳಾದ ಡಾ, ಯತೀಂದ್ರ ಸಿದ್ದರಾಮಯ್ಯ, ಕಳಲೆ ಕೇಶವಮೂರ್ತಿ ಸೇರಿದಂತೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳು, ಮುಂಚೂಣಿ ಘಟಕದ ಪದಾಧಿಕಾರಿಗಳು, ಕಾಂಗ್ರೆಸ್ ಪಕ್ಷದ ಚುನಾಯಿತ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು

ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ವಿಶ್ವಕರ್ಮ ಅಭಿವೃದ್ಧಿ ನಿಗಮದ ಅಧ್ಯಕ್ಷ ನಂದಕುಮಾರ್, ಕೆಪಿಸಿಸಿ ಒಬಿಸಿ ಕಾರ್ಯದರ್ಶಿ ಗಿರೀಶ್, ಚಾಮರಾಜನಗರ ಜಿಲ್ಲಾ ಹಿಂದುಳಿದ ವರ್ಗಗಳ ಅಧ್ಯಕ್ಷ ವಕೀಲ ಸಿದ್ದರಾಜು, ಮುಖಂಡರುಗಳಾದ ಬಸವೇಗೌಡ, ಶೇಖರ್, ಪ್ರಸನ್ನ ಕುಮಾರ್, ಮಹದೇವ್ ಗಾಣಿಗ, ಸೌಭಾಗ್ಯ, ಕೃಷ್ಣಕುಮಾರ್ ಶ್ರೀಕಂಠ ಸ್ವಾಮಿ, ಗೋವಿಂದರಾಜ್, ಬಸವರಾಜ್, ಸೇರಿದಂತೆ ಹಲವರು ಉಪಸ್ಥಿತರಿದ್ದರು

ಇತ್ತೀಚಿನ ಸುದ್ದಿ

ಜಾಹೀರಾತು