10:36 PM Wednesday1 - May 2024
ಬ್ರೇಕಿಂಗ್ ನ್ಯೂಸ್
ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ… ಅಶ್ಲೀಲ ವೀಡಿಯೊ ಪ್ರಕರಣ: ಬಂಧನದಿಂದ ತಪ್ಪಿಸಿಕೊಳ್ಳಲು ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ… ದತ್ತಪೀಠ ಬಳಿ 100 ಅಡಿ ಆಳಕ್ಕೆ ಉರುಳಿ ಬಿದ್ದ ಪ್ರವಾಸಿಗರ ಮಿನಿ ಬಸ್:… ರಾಜ್ಯದಲ್ಲಿ ಅಭಿವೃದ್ಧಿ ಸ್ಥಗಿತ, ಕಾನೂನು ಸುವ್ಯವಸ್ಥೆ ಚಿಂತಾಜನಕ: ಬೆಳಗಾವಿಯಲ್ಲಿ ಪ್ರಧಾನಿ ಮೋದಿ ವಾಗ್ದಾಳಿ ಬೆಳಗಾವಿಯಲ್ಲಿ ಉತ್ತರ ಕರ್ನಾಟಕ ಶೈಲಿಯ ಜೋಳ ರೊಟ್ಟಿ ಸವಿದ ಪ್ರಧಾನಿ ಮೋದಿ ವಿಜಯಪುರದ ಶಿರನಾಳದಲ್ಲಿ ಶತಾಯುಷಿ ಭಾಗವ್ವ ಮತ ಚಲಾವಣೆ: 108ರ ಹರೆಯದ ಹಿರಿಯಜ್ಜಿ ಪ್ರಧಾನಿ ಮೋದಿ ಏ.28ರಂದು ಶಿರಸಿಗೆ: ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಪರ…

ಇತ್ತೀಚಿನ ಸುದ್ದಿ

ನಂಜನಗೂಡಿನಲ್ಲಿ ಸಂಭ್ರಮ- ಸಡಗರದ ಶ್ರೀ ರಾಮೇಶ್ವರ ರಥೋತ್ಸವ, ಜಾತ್ರಾ ಮಹೋತ್ಸವ

18/04/2024, 19:11

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ನಂಜನಗೂಡು ತಾಲೂಕು ದೇಬೂರು ಗ್ರಾಮದಲ್ಲಿ ಇಂದು ಶ್ರೀ ರಾಮೇಶ್ವರ ರಥೋತ್ಸವ ಹಾಗೂ ಜಾತ್ರಾ ಮಹೋತ್ಸವ ವಿಜೃಂಭಣೆ ಹಾಗೂ ಶ್ರದ್ಧಾಭಕ್ತಿಯಿಂದ ನೆರವೇರಿತು.
ಪ್ರತಿ ವರ್ಷ ಶ್ರೀ ರಾಮನವಮಿಯ ಮಾರನೇ ದಿನದಂದು ತಲೆತಲಾಂತರದಿಂದ ಶ್ರೀ ರಾಮೇಶ್ವರ ಜಾತ್ರಾ ಮಹೋತ್ಸವ ನಡೆಸಿಕೊಂಡು ಬರುತ್ತಿದೆ.
ಗ್ರಾಮದ ಎಲ್ಲಾ ವರ್ಗದ ಕೋಮಿನವರು ಜಾತ್ಯತೀತ ಹಾಗೂ ಧರ್ಮಾತೀತವಾಗಿ ಸೇರಿ ಒಗ್ಗಟ್ಟು ಮತ್ತು ಸೌಹಾರ್ದತೆಯಿಂದ ಜಾತ್ರಾ ಮಹೋತ್ಸವ ಹಾಗೂ ರಥೋತ್ಸವವನ್ನು ಆಚರಿಸಿ ಸಂಭ್ರಮಿಸುತ್ತಾರೆ.
ಜಾತ್ರಾ ಪ್ರಯುಕ್ತ ಬಗೆ ಬಗೆಯ ಹೂಗಳಿಂದ ಅಲಂಕರಿಸಲಾದ ಶ್ರೀ ಸೀತಾ ಸಮೇತ ಶ್ರೀರಾಮರ ಉತ್ಸವ ಮೂರ್ತಿಗಳನ್ನು ವಿವಿಧ ಬಗೆಯ ಹೂವು ಹಾಗೂ ಬಣ್ಣ ಬಣ್ಣದ ಬಂಟಿಂಗ್ಸ್ ಮತ್ತು ಬಾವುಟಗಳಿಂದ ಅಲಂಕರಿಸಲಾದ ಬೃಹತ್ ರಥದಲ್ಲಿರಿಸಿ ಪೂಜೆ ಸಲ್ಲಿಸಲಾಗುತ್ತದೆ.


ನಂತರ ಬೆಳಿಗ್ಗೆ 10.30ಕ್ಕೆ ರಥೋತ್ಸವಕ್ಕೆ ಚಾಲನೆ ನೀಡಲಾಯಿತು.
ತಮಟೆ ವಾದ್ಯ, ನಗಾರಿ ಮಂಗಳವಾದ್ಯ ಸೇರಿದಂತೆ ಸಾವಿರಾರು ಭಕ್ತರ ಹರ್ಷೋದ್ಗಾರದೊಂದಿಗೆ ಗ್ರಾಮದ ಕಿರಿದಾದ ರಥ ಬೀದಿಯಲ್ಲಿ ರಥೋತ್ಸವವು ಯಾವುದೇ ಅಡೆತಡೆ ಇಲ್ಲದೆ ವಿರಾಜಮಾನವಾಗಿ ಸಾಗಿ ಸ್ವಸ್ಥಾನ ಸೇರಿತು.
ಮೆರವಣಿಗೆಯುದ್ದಕ್ಕೂ ರಸ್ತೆಯ ಇಕ್ಕೆಲಗಳಲ್ಲಿ ಭಕ್ತರು ಪೂಜಾ ಸಾಮಗ್ರಿಗಳೊಂದಿಗೆ ಬಂದು ಶ್ರೀರಾಮನಿಗೆ ಪೂಜೆ ಸಲ್ಲಿಸುವ ಮೂಲಕ ತಮ್ಮ ಭಕ್ತಿ ಭಾವ ಮೆರೆದರು.
ಇದೇ ಸಂದರ್ಭ ನವ ದಂಪತಿಗಳು ಸೇರಿದಂತೆ ಜಾತ್ರೆಯಲ್ಲಿ ಪಾಲ್ಗೊಂಡ ಭಕ್ತರು ತೇರಿಗೆ ಹಣ್ಣು ದವನ ಎಸೆಯುವ ಮೂಲಕ ತಮ್ಮ ಭಕ್ತಿ ನಮನ ಸಲ್ಲಿಸಿದರು.
ಶಾಸಕ ದರ್ಶನ್ ದ್ರುವನಾರಾಯಣ್ , ಮಾಜಿ ಶಾಸಕ ಕಳಲೆ ಕೇಶವಮೂರ್ತಿ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಮುಖಂಡರುಗಳು ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡಿದ್ದರು.
ತಾಲೂಕಿನ ವಿವಿಧೆಡೆಯಿಂದ ಸಾವಿರಾರು ಭಕ್ತರು ಪಾಲ್ಗೊಂಡು ಜಾತ್ರೆ ಹಾಗೂ ರಥೋತ್ಸವದ ಸಂಭ್ರಮವನ್ನು ಕಣ್ತುಂಬಿಕೊಂಡರು.
ಪೂಜಾ ಸಾಮಗ್ರಿ ಸೇರಿದಂತೆ ವಿವಿಧ ಬಗೆಯ ಅಂಗಡಿ ಮುಂಗಟುಗಳು ಜಾತ್ರೆಗೆ ಕಳೆ ಕಟ್ಟಿದ್ದವು. ರಥೋತ್ಸವದ ವೇಳೆ ಬಂದ ಭಕ್ತರಿಗೆ ಗ್ರಾಮಸ್ಥರು ಅಲ್ಲಲ್ಲಿ ಮಜ್ಜಿಗೆ, ಪಾನಕ, ಕೋಸಂಬರಿ ಸೇರಿದಂತೆ ಪ್ರಸಾದ ವಿನಿಯೋಗ ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು