5:41 AM Friday3 - May 2024
ಬ್ರೇಕಿಂಗ್ ನ್ಯೂಸ್
ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ… ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ… ಅಶ್ಲೀಲ ವೀಡಿಯೊ ಪ್ರಕರಣ: ಬಂಧನದಿಂದ ತಪ್ಪಿಸಿಕೊಳ್ಳಲು ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ… ದತ್ತಪೀಠ ಬಳಿ 100 ಅಡಿ ಆಳಕ್ಕೆ ಉರುಳಿ ಬಿದ್ದ ಪ್ರವಾಸಿಗರ ಮಿನಿ ಬಸ್:… ರಾಜ್ಯದಲ್ಲಿ ಅಭಿವೃದ್ಧಿ ಸ್ಥಗಿತ, ಕಾನೂನು ಸುವ್ಯವಸ್ಥೆ ಚಿಂತಾಜನಕ: ಬೆಳಗಾವಿಯಲ್ಲಿ ಪ್ರಧಾನಿ ಮೋದಿ ವಾಗ್ದಾಳಿ

ಇತ್ತೀಚಿನ ಸುದ್ದಿ

ದೂರ ಶಿಕ್ಷಣದ ಮೂಲಕ ಸಹಕಾರ ಉನ್ನತ ಡಿಪ್ಲೋಮಾ ತರಬೇತಿಗೆ ಅರ್ಜಿ ಆಹ್ವಾನ:: ಆತ್ಮಶಕ್ತಿ ವಿವಿಧೋದ್ಧೇಶ ಸಹಕಾರಿ ಸಂಘದಿಂದ ಎಚ್ ಡಿಸಿಎಂ ಕೋರ್ಸ್

19/04/2024, 19:23

ಮಂಗಳೂರು(reporterkarnataka.com):ಸಹಕಾರ ಕಾಯ್ದೆ ಮತ್ತು ನಿಯಮಗಳಲ್ಲಿ ಸಹಕಾರ ಸಂಘಗಳ ಹಾಗೂ ಸಹಕಾರಿ ಬ್ಯಾಂಕ್‌ಗಳ ನೇಮಕಾತಿ ಮತ್ತು ಒಬ್ಬ ನೌಕರನ ಯಾವುದೇ ಉನ್ನತ ಹುದ್ದೆಗೆ ಪದೋನ್ನತಿ ನೀಡುವಾಗ ಅರ್ಹತೆಯಲ್ಲಿ ಹಾಗೂ ನಗರ ಸಹಕಾರ ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕರು ಮತ್ತು ಪೂರ್ಣಾವಧಿ ನಿರ್ದೇಶಕರ ಹುದ್ದೆಯ ಆಯ್ಕೆ ಸಂದರ್ಭದಲ್ಲೂ ಉನ್ನತ ಶಿಕ್ಷಣ ಅರ್ಹತೆ ನಿಗದಿ ಪಡಿಸಿ ಬ್ಯಾಂಕಿಂಗ್ ಶಿಕ್ಷಣ ಕಡ್ಡಾಯವೆಂದು ಕರ್ನಾಟಕ ರಾಜ್ಯ ಸರಕಾರದ ಸಹಕಾರ ಕಾಯ್ದೆಯು ಮಹತ್ವದ ಆದೇಶ ಹೊರಡಿಸಿರುವುದರಿಂದ ಮುಂದಿನ ದಿನಗಳಲ್ಲಿ ಹೈಯರ್ ಡಿಪ್ಲೊಮಾ ಇನ್ ಕೋ-ಒಪರೇಟಿವ್ ಮ್ಯಾನೆಜ್‌ಮೆಂಟ್ (ಎಚ್.ಡಿ.ಸಿ.ಎಂ) ಶಿಕ್ಷಣದ ಅಗತ್ಯವಿರುತ್ತದೆ.
ಆತ್ಮಶಕ್ತಿ ವಿವಿಧೋದ್ಧೇಶ ಸಹಕಾರಿ ಸಂಘವು ಈ ಕೋರ್ಸ್ ಗಳನ್ನು ನಡೆಸುತ್ತಾ ಬಂದಿದ್ದು ಜಿಲ್ಲೆಯ ಸಹಕಾರ ಸಂಘಗಳ ಹಿರಿಯ ಸಿಬ್ಬಂದಿಗಳು ಸೇರಿದಂತೆ ಎಲ್ಲಾ ಸಿಬ್ಬಂದಿಗಳಿಗೆ ದೂರ ಶಿಕ್ಷಣ ಮಾದರಿಯಲ್ಲಿ ಮಂಗಳೂರು ಕೇಂದ್ರಿಕೃತವಾಗಿ ತರಗತಿಗಳು, ಮೌಖಿಕ ಪರೀಕ್ಷೆ ಮತ್ತು ಮುಖ್ಯ ಪರೀಕ್ಷೆಗಳು ನಡೆಯಲಿದ್ದು ಮುಂದಿನ ದಿನಗಳಲ್ಲಿ ಸಹಕಾರ ಬ್ಯಾಂಕ್/ಸಂಘಗಳಲ್ಲಿ ಉದ್ಯೋಗವಕಾಶಕ್ಕೆ ಉನ್ನತ ಡಿಪ್ಲೊಮಾ ಶಿಕ್ಷಣವನ್ನು ಪಡೆಯಲು ಅನುಕೂಲಕರವಾಗಲಿದೆ. ಅಲ್ಲದೇ ತರಗತಿಗಳು ಮತ್ತು ಎಲ್ಲಾ ಪರೀಕ್ಷೆಗಳು ರಜಾದಿನಗಳಂದು ನಡೆಯಲಿರುವುದರಿಂದ ಸಹಕಾರ ಸಂಘಗಳ ಸಿಬ್ಬಂದಿಗಳಿಗೆ ಅಷ್ಟೇ ಅಲ್ಲದೇ ಪದವಿ ಪೂರೈಸಿರುವ ಸಹಕಾರಿ ಸಂಘದ ಉದ್ಯೋಗ ಆಕಾಂಕ್ಷಿಗಳಿಗೂ ಈ ಶಿಕ್ಷಣ ಪೂರಕವಾಗಲಿದೆ. ಆರು ತಿಂಗಳ ಅವಧಿಯ ಕೋರ್ಸಿನಲ್ಲಿ 13 ವಿಷಯ ಹೊಂದಿದ್ದು ಎರಡು ಸೆಮಿಸ್ಟರ್‌ನಲ್ಲಿ ತರಬೇತಿ ನಡೆಯಲಿದೆ.
ಪ್ರಾದೇಶಿಕ ಸಹಕಾರ ನಿರ್ವಹಣಾ ಕೇಂದ್ರ ಬೆಂಗಳೂರು, ಇವರು ನೀಡುತ್ತಿರುವ ಸಹಕಾರ ನಿರ್ವಹಣೆಯಲ್ಲಿ ಉನ್ನತ ಡಿಪ್ಲೊಮಾ ದೂರ ಶಿಕ್ಷಣ ಕೋರ್ಸ್ ಮಂಗಳೂರು ಕೇಂದ್ರಿತವಾಗಿ ಆತ್ಮಶಕ್ತಿ ವಿವಿಧೋದ್ಧೇಶ ಸಹಕಾರಿ ಸಂಘ (ನಿ.) ಪಡೀಲ್, ಮಂಗಳೂರು ಇವರ ಸಹಭಾಗಿತ್ವದಲ್ಲಿ ಈಗಾಗಲೇ 7 ಬ್ಯಾಚ್‌ಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದು, ಮುಂದಿನ ಬ್ಯಾಚ್‌ಗೆ ನೋಂದಣಿ ಪ್ರಕ್ರಿಯೆಯು ಆರಂಭವಾಗಿದ್ದು, ಆಸಕ್ತ ಸಹಕಾರ ಸಂಘಗಳ ಸಿಬ್ಬಂದಿಗಳು ಹಾಗೂ ಪದವೀದರರು ಕೋರ್ಸಿನ ವಿವರಗಳನ್ನು ಮತ್ತು ಅರ್ಜಿಯನ್ನು ಆತ್ಮಶಕ್ತಿ ವಿವಿಧೋದ್ಧೇಶ ಸಹಕಾರಿ ಸಂಘದ ಹತ್ತಿರದ ಶಾಖೆಯಲ್ಲಿ ಪಡೆದು ಭರ್ತಿ ಮಾಡಿ ನಿಗದಿತ ಶುಲ್ಕದೊಂದಿಗೆ ದಿನಾಂಕ
30.05.2024ರ ಒಳಗೆ ಆತ್ಮಶಕ್ತಿ ವಿವಿಧೋದ್ಧೇಶ ಸಹಕಾರಿ ಸಂಘ (ನಿ.) ಆತ್ಮಶಕ್ತಿ ಸೌಧ, ಬೈರಾಡಿಕೆರೆಯ ಹತ್ತಿರ, ಪಡೀಲ್, ಮಂಗಳೂರು-07 ಅಥವಾ ಸಂಘದ ಹತ್ತಿರದ ಶಾಖೆಗೆ ತಲುಪುವಂತೆ ಕಳುಹಿಸಿಕೊಡಲು ವಿನಂತಿಸಲಾಗಿದೆ. ಮೊದಲು ನೋಂದಣಿ ಮಾಡುವ 100 ಮಂದಿ ಕೋರ್ಸ್ ಆಕಾಂಕ್ಷಿಗಳಿಗೆ ಅವಕಾಶ ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ :
0824-2003355, 2008855, 2007755, 8151057555, 8150063555ಕ್ಕೆ ಸಂಪರ್ಕಿಸಬಹುದು.

ಇತ್ತೀಚಿನ ಸುದ್ದಿ

ಜಾಹೀರಾತು