10:42 AM Friday24 - May 2024
ಬ್ರೇಕಿಂಗ್ ನ್ಯೂಸ್
ಬುದ್ಧ ಪೂರ್ಣಿಮೆ: ದಕ್ಷಿಣ ಕಾಶಿ ನಂಜನಗೂಡು ದೇಗುಲಕ್ಕೆ ಹರಿದು ಬಂದ ಭಕ್ತ ಸಾಗರ;… ಕುಡುಕ ಪತಿಯಿಂದ ಪತ್ನಿಯ ಬರ್ಬರ ಹತ್ಯೆ: ಮಕ್ಕಳ ಕಣ್ಣೆದುರೇ ಸಲಾಕೆಯಿಂದ ಹೊಡೆದು ಕೊಲೆ… ಪೂರ್ವ ಮುಂಗಾರು: ದ.ಕ., ಉಡುಪಿ ಸಹಿತ ರಾಜ್ಯದ 7 ಜಿಲ್ಲೆಗಳಲ್ಲಿ ಭಾರೀ ಮಳೆ… ಪಡೀಲು ಸಮೀಪ ಬೈಕಿಗೆ ಡಿಕ್ಕಿ ಹೊಡೆದು ಸವಾರ ಸಹಿತ ದೂರಕ್ಕೆ ಎಳೆದೊಯ್ದ ಕಾರು:… ವಿಜಯಪುರ: ಚಾಕುವಿನಿಂದ ಇರಿದು, ಕಲ್ಲಿನಿಂದ ಜಜ್ಜಿ ಯುವಕನ ಅಮಾನುಷ ಹತ್ಯೆ; ಹಣಕಾಸಿನ ವ್ಯವಹಾರ… ವಿಧಾನ ಪರಿಷತ್ ಚುನಾವಣೆ: ಮೇ 20ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನ ನಟಿ ಪವಿತ್ರಾ ಜಯರಾಂ ಸ್ನೇಹಿತ ಚಂದ್ರಕಾಂತ್ ಆತ್ಮಹತ್ಯೆ: ಸ್ನೇಹಿತೆ ಸಾವನ್ನಪ್ಪಿ ವಾರದೊಳಗೆ ಚಂದ್ರು… ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ

ಇತ್ತೀಚಿನ ಸುದ್ದಿ

ಅಪಪ್ರಚಾರಕ್ಕೆ ಕಿವಿಗೊಡಬೇಡಿ; ಪ್ರೀತಿಯಿಂದಲೇ ಚುನಾವಣೆ ಎದುರಿಸೋಣ: ಸಂಪಾಜೆಯ ಕಲ್ಲುಗುಂಡಿ ಕಾರ್ನರ್ ಮೀಟಿಂಗಲ್ಲಿ ಪದ್ಮರಾಜ್ ಆರ್. ಪೂಜಾರಿ

20/04/2024, 00:30

ಸುಳ್ಯ(reporterkarnataka.com): ಜಿಲ್ಲೆಯಲ್ಲಿ ಕಾಂಗ್ರೆಸ್ ಗೆಲುವು ಸ್ಪಷ್ಟವಾಗಿದೆ. ಹಾಗಾಗಿ ವಿರೋಧಿಗಳ ಅಪಪ್ರಚಾರವೂ ಹೆಚ್ಚಾಗುತ್ತಿದೆ. ಮನೆಮನೆಗಳಿಗೆ ತೆರಳಿ ಆಣೆ – ಪ್ರಮಾಣ ಮಾಡಿಸುವ ಕೆಲಸಕ್ಕೂ ಮುಂದಾಗಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರು ಇದಕ್ಕೆ ತಲೆಕೆಡಿಸಿಕೊಳ್ಳದೇ, ಪ್ರೀತಿಯಿಂದ ಚುನಾವಣೆಯನ್ನು ಎದುರಿಸಲು ಸಿದ್ಧರಾಗಿ ಎಂದು ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಹೇಳಿದರು.
ಸಂಪಾಜೆಯಿಂದ ಕಲ್ಲುಗುಂಡಿವರೆಗೆ ರೋಡ್ ಶೋ ಬಳಿಕ ನಡೆದ ಕಾರ್ನರ್ ಮೀಟಿಂಗ್ ನಲ್ಲಿ ಅವರು ಮಾತನಾಡಿದರು.
ಪ್ರಜಾಪ್ರಭುತ್ವದ ದೊಡ್ಡ ಹಬ್ಬವಾದ ಚುನಾವಣೆಯನ್ನು‌ ಎದುರಿಸಲು ಸಿದ್ಧರಾಗಿ. ಅಭಿವೃದ್ಧಿಯ ವಿಚಾರವಾಗಿ ನಾವು ಚುನಾವಣೆಯನ್ನು ಎದುರಿಸಬೇಕಾಗಿದೆ ಎಂದರು.
ಬಿಜೆಪಿ ಸಂಸದರಿದ್ದ ಕಳೆದ ಮೂವತ್ಮೂರು ವರ್ಷಗಳಲ್ಲಿ ಜಿಲ್ಲೆ ಅಭಿವೃದ್ಧಿ ಶೂನ್ಯವಾಗಿದೆ. ಕಾಂಗ್ರೆಸ್ ಸಂಸದರಿದ್ದಾಗ ಆಗಿದ್ದ ಅಭಿವೃದ್ಧಿ, ಜಿಲ್ಲೆಗೆ ಬಂದಿದ್ದ ಯೋಜನೆಗಳು ಜಿಲ್ಲೆಯನ್ನು ಮಾದರಿಯಾಗಿ ರೂಪಿಸಿತ್ತು. ಮುಂದೆಯೂ ಜಿಲ್ಲೆ ದೇಶದಲ್ಲೇ ಮಾದರಿಯಾಗಿ ರೂಪುಗೊಳ್ಳಲು ಕಾಂಗ್ರೆಸನ್ನು ಗೆಲ್ಲಿಸುವಂತೆ ಮನವಿ ಮಾಡಿದರು.
ಮಾಜಿ ಸಚಿವ ಬಿ. ರಮಾನಾಥ ರೈ ಮಾತನಾಡಿ, ಇಂದು ಅಭಿವೃದ್ಧಿಯ ವಿಚಾರವಾಗಿ ಚರ್ಚೆ ಆಗಬೇಕಾಗಿದೆ. ಕಾಂಗ್ರೆಸ್ ಸರಕಾರ ನುಡಿದಂತೆ ನಡೆದಿದೆ ಹಾಗೂ ನುಡಿದಂತೆ ನಡೆಯಲಿದ್ದೇವೆ. ಈಗಾಗಲೇ ಗ್ಯಾರೆಂಟಿ ಯೋಜನೆ ನೀಡಿ, ಅನುಷ್ಠಾನ ಮಾಡಲಾಗಿದೆ. ಕೇಂದ್ರದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದರೆ ಇನ್ನು ಹಲವು ಗ್ಯಾರೆಂಟಿ ಯೋಜನೆಗಳು ಸಿಗಲಿವೆ ಎಂದರು.


ಮಹಿಳಾ ಕಾಂಗ್ರೆಸ್ ರಾಜ್ಯಾಧ್ಯಕ್ಷೆ ಪುಷ್ಪಾ ಅಮರನಾಥ ಮಾತನಾಡಿ, ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಅತ್ಯುತ್ತಮ ಅಭ್ಯರ್ಥಿಯಾಗಿ ಪದ್ಮರಾಜ್ ಆರ್. ಪೂಜಾರಿ ಇದ್ದಾರೆ. ನಮ್ಮ ಉತ್ತಮ‌ ಭವಿಷ್ಯಕ್ಕಾಗಿ ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕಿದೆ ಎಂದು ನುಡಿದರು.
ದ‌.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ. ಜಯರಾಮ, ಗೇರು ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ಗ್ರಾಪಂ ಅಧ್ಯಕ್ಷೆ ಸುಮತಿ ಶಕ್ತಿವೇಲು, ಗ್ಯಾರಂಟಿ ಸಮಿತಿ ಜಿಲ್ಲಾಧ್ಯಕ್ಷ ಭರತ್ ಮುಂಡೋಡಿ, ಕಾಂಗ್ರೆಸ್ ಮುಖಂಡರಾದ ಜಿ. ಕೃಷ್ಣಪ್ಪ, ಟಿ.ಎಂ. ಶಹೀದ್, ವೆಂಕಪ್ಪ ಗೌಡ, ನಿತ್ಯಾನಂದ ಮುಂಡೋಡಿ, ಎಂ.ಎಸ್. ಮಹಮ್ಮದ್, ಜಿ.ಕೆ. ಹಮೀದ್, ಎಸ್.ಕೆ. ಹನೀಫ್, ಅಬೂಸಾಲಿ ಗೂನಡ್ಕ, ಕಿರಣ್ ಬುಡ್ಲೆಗುತ್ತು, ಮಹಮದ್ ಕುಂಞಿ ಗೂನಡ್ಕ, ಗೀತಾ ಕೋಲ್ಚಾರ್ , ಕೆ.ಪಿ. ಜಾನಿ ಕಲ್ಲುಗುಂಡಿ, ವಸಂತ ಪೆಲ್ತಡ್ಕ, ಎ.ಕೆ. ಇಬ್ರಾಹಿಂ, ಶೌವಾದ್ ಗೂನಡ್ಕ, ಯಮುನ ಬಿ.ಎಸ್., ಸುಂದರಿ ಮುಂಡಡ್ಕ, ಕಾಂತಿ ಬಿ.ಎಸ್., ಲೂಕಾಸ್ ಟಿ., ಲಿಸ್ಸಿ ಮೊನಾಲಿಸಾ, ರಾಜು ನೆಲ್ಲಿಕುಮೇರಿ, ಕೆಪಿಸಿಸಿ ಮಾಜಿ ಕಾರ್ಯದರ್ಶಿ ವಹೀದಾ ಇಸ್ಮಾಯಿಲ್, ಡಿಸಿಸಿ ಉಪಾಧ್ಯಕ್ಷೆ ರಾಜೀವಿ ಆರ್. ರೈ, ಡಿಸಿಸಿ ಸದಸ್ಯೆ ಜೂಲಿಯಾನಾ ಸೇರಿದಂತೆ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
*ತೋಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನ ಭೇಟಿ:*
ರೋಡ್ ಶೋ, ಕಾರ್ನರ್ ಸಭೆಯ ಬಳಿಕ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರು ತೋಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನಕ್ಕೆ ಭೇಟಿ ನೀಡಿ, ಪ್ರಾರ್ಥನೆ ಸಲ್ಲಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು